ಪಾಂಡೇಶ್ವರ ಲೆವೆಲ್ ಕ್ರಾಸಿಂಗ್ ರಸ್ತೆ ಚತುಷ್ಪಥಕ್ಕೆ ರೈಲ್ವೆ ಇಲಾಖೆ ಒಪ್ಪಿಗೆ

Contributed byvijaya.poojary@timesgroup.com|Vijaya Karnataka

ಮಂಗಳೂರಿನ ಪಾಂಡೇಶ್ವರ ಲೆವೆಲ್‌ ಕ್ರಾಸಿಂಗ್‌ ರಸ್ತೆಯನ್ನು ಚತುಷ್ಪಥವಾಗಿ ಅಭಿವೃದ್ಧಿಪಡಿಸಲು ದಕ್ಷಿಣ ರೈಲ್ವೆ ಒಪ್ಪಿಗೆ ನೀಡಿದೆ. ಸಂಸದ ಕ್ಯಾ.ಬ್ರಿಜೇಶ್‌ ಚೌಟ ಅವರ ಪ್ರಯತ್ನದಿಂದ ಈ ಅನುಮೋದನೆ ದೊರೆತಿದೆ. ಟ್ರಾಫಿಕ್‌ ಸಮಸ್ಯೆಗೆ ಶಾಶ್ವತ ಪರಿಹಾರ ಸಿಗಲಿದೆ. ಅಂದಾಜು ಪಟ್ಟಿ ಸಿದ್ಧಪಡಿಸಿ, ಮಾರ್ಚ್‌ ಅಂತ್ಯದೊಳಗೆ ಟೆಂಡರ್‌ ಪ್ರಕ್ರಿಯೆ ನಡೆಯಲಿದೆ. ಸುರಕ್ಷತೆಗಾಗಿ ಡಬಲ್‌ ಬೂಮ್‌ ಗೇಟ್‌ ಅಳವಡಿಸಲಾಗುತ್ತಿದೆ. ಇದರಿಂದ ವಾಹನ ಸಂಚಾರ ಸುಗಮವಾಗಲಿದೆ.

approval for expansion of pandeshwar level crossing road by railways

ವಿಕ ಸುದ್ದಿಲೋಕ ಮಂಗಳೂರು

ನಗರದ ಮಂಗಳಾದೇವಿ ರಸ್ತೆಯಲ್ಲಿಟ್ರಾಫಿಕ್ ಸಮಸ್ಯೆಗೆ ಕಾರಣವಾಗಿರುವ ಪಾಂಡೇಶ್ವರ ಲೆವೆಲ್ ಕ್ರಾಸಿಂಗ್ ರಸ್ತೆಯ ಭಾಗವನ್ನು ಚತುಷ್ಪಥವಾಗಿ ಅಭಿವೃದ್ದಿಪಡಿಸಲು ದಕ್ಷಿಣ ರೈಲ್ವೆಯಿಂದ ಅನುಮೋದನೆ ದೊರೆತಿದೆ ಎಂದು ಸಂಸದ ಕ್ಯಾ.ಬ್ರಿಜೇಶ್ ಚೌಟ ಅವರ ಕಚೇರಿ ತಿಳಿಸಿದೆ.

ಈ ಬಗ್ಗೆ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಸಂಸದರ ಕಚೇರಿ, ಪಾಂಡೇಶ್ವರ ಲೆವೆಲ್ ಕ್ರಾಸಿಂಗ್ ನಲ್ಲಿಉಂಟಾಗಿರುವ ಗಂಭೀರ ಟ್ರಾಫಿಕ್ ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸಬೇಕೆಂದು ಈ ಭಾಗದ ಜನರ ಬಹುವರ್ಷಗಳ ಬೇಡಿಕೆಯಾಗಿದೆ. ಅದರಂತೆ ಈ ಸಮಸ್ಯೆಯ ಗಂಭೀರತೆ ಅರಿತ ಸಂಸದ ಕ್ಯಾ.ಬ್ರಿಜೇಶ್ ಚೌಟ ಅವರು ಇತ್ತೀಚೆಗೆ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿಶಾಸಕ ವೇದವ್ಯಾಸ ಕಾಮತ್ ಹಾಗೂ ಜಿಲ್ಲಾಧಿಕಾರಿ ದರ್ಶನ್ ಎಚ್ .ವಿ. ಉಪಸ್ಥಿತಿಯಲ್ಲಿನಡೆದ ಸಭೆಯಲ್ಲಿರೈಲ್ವೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದರು.

ಇದೀಗ ದಕ್ಷಿಣ ರೈಲ್ವೆ ವ್ಯಾಪ್ತಿಗೆ ಸೇರಿರುವ ಪಾಂಡೇಶ್ವರ ಲೆವೆಲ್ ಕ್ರಾಸಿಂಗ್ ರಸ್ತೆಯನ್ನು ನಾಲ್ಕು ಪಥಗಳ ರಸ್ತೆಯಾಗಿ ಅಭಿವೃದ್ಧಿಪಡಿಸುವುದಕ್ಕೆ ಧಿರೈಲ್ವೆ ಇಲಾಖೆ ಒಪ್ಪಿಗೆ ನೀಡಿದೆ. ದಕ್ಷಿಣ ರೈಲ್ವೆಯ ಜಿಎಂ ಹಾಗೂ ಪಾಲಕ್ಕಾಡ್ ವಿಭಾಗದ ಡಿಆರ್ ಎಂ ಅವರೊಂದಿಗೆ ಸಂಸದರು ನಿರಂತರ ಚರ್ಚೆ ನಡೆಸಿದ ಹಿನ್ನೆಲೆಯಲ್ಲಿಈ ರೈಲ್ವೆ ಗೇಟ್ ವ್ಯಾಪ್ತಿಯ ರಸ್ತೆಯನ್ನು ಮೇಲ್ದರ್ಜೆಗೇರಿಸುವ ಮೂಲಕ ಗಂಭೀರ ಸಮಸ್ಯೆಗೆ ಪರಿಹಾರ ಒದಗಿಸುವುದಕ್ಕೆ ಸಾಧ್ಯವಾಗಿದೆ. ಈ ಲೆವೆಲ್ ಕ್ರಾಸಿಂಗ್ ರಸ್ತೆ ಅಗಲೀಕರಣಕ್ಕೆ ಸದ್ಯ ಅಂದಾಜು ಪಟ್ಟಿ ಸಿದ್ಧಪಡಿಸಲಾಗುತ್ತದೆ. ಮಾರ್ಚ್ ಅಂತ್ಯದೊಳಗೆ ಪಾಂಡೇಶ್ವರ ಲೆವಲ್ ಕ್ರಾಸಿಂಗ್ ರಸ್ತೆ ವಿಸ್ತರಣೆ ಕಾಮಗಾರಿಗೆ ಟೆಂಡರ್ ಪ್ರಕ್ರಿಯೆ ನಡೆಯಲಿದೆ.

ಇಲ್ಲಿಮನಪಾ ವ್ಯಾಪ್ತಿಗೆ ಸಂಬಂಧಪಟ್ಟ ಚತುಷ್ಪಥ ರಸ್ತೆ ಇದ್ದು, ರೈಲ್ವೆ ವ್ಯಾಪ್ತಿಯ ರಸ್ತೆ ಮಾತ್ರ ದ್ವಿಪಥವಾಗಿದೆ. ಇಲ್ಲಿಅಗಲೀಕರಣಗೊಂಡರೆ ಲೆವೆಲ್ ಕ್ರಾಸಿಂಗ್ ರಸ್ತೆ ಕೂಡ ಚತುಷ್ಪಥ ರಸ್ತೆಯಾಗಿ ವಾಹನ ಸುಗಮ ಸಂಚಾರಕ್ಕೆ ಅನುಕೂಲವಾಗುತ್ತದೆ. ಜತೆಗೆ ಸುರಕ್ಷತೆಗಾಗಿ ‘ಡಬಲ್ ಬೂಮ್ ’ ಆಟೋಮ್ಯಾಟಿಕ್ ಗೇಟ್ ವ್ಯವಸ್ಥೆಯನ್ನು ಅಳವಡಿಸಲಾಗುತ್ತಿದೆ. ಇದರಿಂದ ಈ ರಸ್ತೆಯಲ್ಲಿಭವಿಷ್ಯದಲ್ಲಿಸುಗಮ ಸಂಚಾರದ ಜತೆಗೆ ಟ್ರಾಫಿಕ್ ದಟ್ಟನೆ ಸಮಸ್ಯೆಯೂ ಬಗೆಹರಿಯಲಿದೆ ಎಂದು ಸಂಸದರ ಕಚೇರಿ ತಿಳಿಸಿದೆ.