ಶಿರಾ: 2026-27ನೇ ಸಾಲಿನಲ್ಲಿಡಾ|| ಬಾಬು ಜಗಜೀವನರಾಂರವರ 119ನೇ ಹಾಗೂ ಡಾ||ಬಿ.ಆರ್ . ಅಂಬೇಡ್ಕರ್ ರವರ 135ನೇ ಜನ್ಮ ದಿನಾಚರಣೆ ಅಂಗವಾಗಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ಜನಾಂಗದವರ ಶ್ರೇಯಸ್ಸಿಗಾಗಿ ಪ್ರೋತ್ಸಾಹಿಸಿ, ಶ್ರಮಿಸಿ ಗಣನೀಯ ಸೇವೆ ಸಲ್ಲಿಸಿದ ಅರ್ಹ ವ್ಯಕ್ತಿಗಳನ್ನು ಗುರುತಿಸಿ ರಾಜ್ಯ ಮಟ್ಟದಲ್ಲಿಪ್ರಶಸ್ತಿ ನೀಡಲು ಸಮಾಜ ಕಲ್ಯಾಣ ಇಲಾಖೆ ಯಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ (ಗ್ರೇಡ್ -1) ವಿ.ಕೆ.ಬಡಿಗೇರ ತಿಳಿಸಿದ್ದಾರೆ. ಪ್ರಶಸ್ತಿಯನ್ನು 2026ರ ಏಪ್ರಿಲ್ 05 ರಂದು ಆಚರಿಸುವ ಡಾ|| ಬಾಬು ಜಗಜೀವನರಾಂರವರ 119ನೇ ಜನ್ಮ ದಿನಾಚರಣೆಯಲ್ಲಿಹಾಗೂ ಏಪ್ರಿಲ್ 14ರಂದು ಆಚರಿಸುವ ಡಾ.ಬಿ.ಆರ್ ಅಂಬೇಡ್ಕರ್ ರವರ 135ನೇ ಜನ್ಮ ದಿನಾಚರಣೆಯ ದಿನದಂದು ರಾಜ್ಯ ಮಟ್ಟದಲ್ಲಿಪ್ರಶಸ್ತಿ ನೀಡಲಾಗುತ್ತಿದೆ. ಆಸಕ್ತರು ಮಾ.7ರೊಳಗಾಗಿ ಶಿರಾ ತಾಲೂಕಿನ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಿ ಅರ್ಜಿ ಪಡೆದು ಅವಶ್ಯಕ ದಾಖಲಾತಿಗಳೊಂದಿಗೆ ಸಲ್ಲಿಸಬಹುದು. ಯಾವುದೇ ವ್ಯಕ್ತಿ ಒಂದು ಪ್ರಶಸ್ತಿಗೆ ಮಾತ್ರ ಅರ್ಜಿ ಸಲ್ಲಿಸತಕ್ಕದ್ದು. ಅರ್ಜಿದಾರರ ವಯಸ್ಸು ಕನಿಷ್ಠ 35 ವರ್ಷಗಳಾಗಿರಬೇಕು. ರಾಜ್ಯ ಮಟ್ಟದಲ್ಲಿಸಾಮಾಜಿಕ ಸೇವೆ ಸಲ್ಲಿಸುತ್ತಿರುವ ಅರ್ಹ ವ್ಯಕ್ತಿಗಳು ನೇರವಾಗಿ ಅರ್ಜಿಗಳನ್ನು ಸಮಾಜ ಕಲ್ಯಾಣ ಇಲಾಖೆ, ಬೆಂಗಳೂರು ಇವರಿಗೆ ಸಲ್ಲಿಸಬಹುದು.

