ವಿಕ ಸುದ್ದಿಲೋಕ ಬೆಳ್ತಂಗಡಿ
ಬಂದಾರು ಗ್ರಾಮದ ಕುರಾಯ ಶ್ರೀ ಸದಾಶಿವ ದೇವರ ಪ್ರತಿಷ್ಠಾ ಮಹೋತ್ಸವ ಮತ್ತು ವಾರ್ಷಿಕ ಜಾತ್ರೋತ್ಸವ ಏ.2ರಿಂದ 10 ರವರೆಗೆ ನಡೆಯಲಿದ್ದು, ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಸೋಮವಾರ ಸದಾಶಿವ ದೇವರ ಸನ್ನಿಧಿಯಲ್ಲಿವಿಶೇಷ ಪ್ರಾರ್ಥನೆ ಸಲ್ಲಿಸುವ ಮೂಲಕ ನೆರವೇರಿತು.
ದೇವಸ್ಥಾನದ ಆಡಳಿತಾಧಿಕಾರಿ ಪುರುಷೋತ್ತಮ ಜಿ., ಜಾತ್ರೋತ್ಸವ ಸಮಿತಿ ಅಧ್ಯಕ್ಷ ಜನಾರ್ದನ ಗೌಡ ನಿರುಂಬುಡ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸೇವಾಪ್ರತಿನಿಧಿ ಚಂದ್ರಕಲಾ, ಅರ್ಚಕರು, ಜಾತ್ರೋತ್ಸವ ಸಮಿತಿ,ಅಭಿವೃದ್ಧಿ ಸಮಿತಿ, ಯಕ್ಷಗಾನ ಸಮಿತಿ ಹಾಗೂ ಪ್ರಗತಿಬಂಧು ಒಕ್ಕೂಟದ ಪದಾಧಿಕಾರಿಗಳು, ಸದಸ್ಯರು ಮತ್ತಿತರರಿದ್ದರು.
ಪೊಟೋ...02ಎಂಜೆ ಬಂದಾರು

