ವಸತಿ ಶಾಲೆಗಳ ಪ್ರವೇಶ ಪರೀಕ್ಷೆ

Contributed byrangaswamyrangatm@gmail.com|Vijaya Karnataka

ತುರುವೇಕೆರೆ ತಾಲೂಕಿನಲ್ಲಿ ವಸತಿ ಶಾಲೆಗಳ ಪ್ರವೇಶ ಪರೀಕ್ಷೆ ನಡೆಯಿತು. 451 ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಿದ್ದು, 448 ಮಂದಿ ಪರೀಕ್ಷೆ ಬರೆದಿದ್ದಾರೆ. ಮೊರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚನ್ನಮ್ಮ, ಡಾ.ಬಿ.ಆರ್‌. ಅಂಬೇಡ್ಕರ್‌, ಇಂದಿರಾಗಾಂಧಿ ವಸತಿ ಶಾಲೆಗಳಿಗೆ 6ನೇ ತರಗತಿ ಪ್ರವೇಶಕ್ಕಾಗಿ ಈ ಪರೀಕ್ಷೆ ನಡೆಸಲಾಗಿದೆ. ಪಟ್ಟಣದ ಸರಕಾರಿ ಪಿಯು ಕಾಲೇಜಿನಲ್ಲಿ ಪರೀಕ್ಷಾ ಕೇಂದ್ರ ಸ್ಥಾಪಿಸಲಾಗಿತ್ತು. ತಹಸೀಲ್ದಾರ್‌ ಕುಞಂ ಅಹಮದ್‌ ಪರೀಕ್ಷಾ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

residential school entrance exam 2023 results for 448 students

ತುರುವೇಕೆರೆ: ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ನಡೆಯುವ ವಿವಿಧ ವಸತಿ ಶಾಲೆಗಳ ಪ್ರವೇಶಾತಿ ಪರೀಕ್ಷೆಯನ್ನು ತುರುವೇಕೆರೆ ತಾಲೂಕಿನ ಒಟ್ಟು 448 ವಿದ್ಯಾರ್ಥಿಗಳು ಬರೆದಿದ್ದಾರೆ. ಮೊರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚನ್ನಮ್ಮ, ಡಾ.ಬಿ.ಆರ್ . ಅಂಬೇಡ್ಕರ್ ಹಾಗೂ ಇಂದಿರಾಗಾಂಧಿ ವಸತಿ ಶಾಲೆಗಳಿಗೆ 6ನೇ ತರಗತಿ ಪ್ರವೇಶಾತಿ ಪರೀಕ್ಷೆಯನ್ನು ತಾಲೂಕಿನಾದ್ಯಂತ 451 ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಿದ್ದರು. ಅದರಲ್ಲಿಒಟ್ಟು 448 ವಿದ್ಯಾರ್ಥಿಗಳು ಪರೀಕ್ಷೆ ಎದುರಿಸಿದ್ದಾರೆ. ಪರೀಕ್ಷೆಯು ಪಟ್ಟಣದ ಸರಕಾರಿ ಪಿಯು ಕಾಲೇಜಿನಲ್ಲಿನಡೆಯಿತು. ತಹಸೀಲ್ದಾರ್ ಕುಞಂ ಅಹಮದ್ ಪರೀಕ್ಷಾ ಕೇಂದ್ರಕ್ಕೆ ಆಗಮಿಸಿ ವ್ಯವಸ್ಥೆಯನ್ನು ಪರಿಶೀಲಿಸಿದರು.