ವಿಕ ಸುದ್ದಿಲೋಕ ಬೆಂಗಳೂರು ‘‘ನಾನು ಎರಡು ಸಲವೂ ಅಧಿಕಾರ ಕಳೆದುಕೊಂಡವನು. ಕದ್ದಾಲಿಕೆ ಮಾಡಿದ್ದರೆ ಅಧಿಕಾರ ಉಳಿಸಿಕೊಳ್ಳುತ್ತಿದ್ದೆ. ಹಾಗೆ ಸಿದ್ಧವನದಲ್ಲಿಕೂತು ಯಾವ ಕಬ್ಬೆಕ್ಕು ಕರಾಮತ್ತು ನಡೆಸಿತು ಎನ್ನುವುದನ್ನು ಪತ್ತೆ ಹಚ್ಚುತ್ತಿದ್ದೆ,’’ ಎಂದು ಸಿಎಂ ಸಿದ್ದರಾಮಯ್ಯ ಅವರಿಗೆ ಕೇಂದ್ರ ಸಚಿವ ಎಚ್ .ಡಿ. ಕುಮಾರಸ್ವಾಮಿ ತಿಧಿರುಧಿಗೇಟು ನೀಧಿಡಿಧಿದ್ದಾಧಿರೆ. ‘‘ಅಧಿಕಾರ ಕಳೆದುಕೊಂಡಿದ್ದರ ಬಗ್ಗೆ ನನಗೆ ಚಿಂತೆಯಿಲ್ಲ. ಆದರೆ, ಆ ಪಾಪಪ್ರಜ್ಞೆ ನಿಮ್ಮನ್ನು ಕಾಡುತ್ತಿದೆ. ಕದ್ದಾಲಿಕೆ ನನ್ನ ಗುಣವಲ್ಲ. ಅದೇನಿದ್ದರೂ ಕಾಂಗ್ರೆಸ್ ನದ್ದೇ ಆವಿಷ್ಕಾರ! ಅದೇ ನಿಮಗೆ ಬಂದಿರುವ ಸಂಸ್ಕಾರ!! ಕುಂಬಳಕಾಯಿ ಕಳ್ಳ ಎಂದರೆ ನಾನೇ, ನಾನೇ ಎಂದು ಹೆಗಲು ಮುಟ್ಟಿ ನೋಡಿಕೊಂಡರೆ ನಾನೇನು ಮಾಡಲಿ? ಕದ್ದಾಲಿಕೆ ಬಗ್ಗೆ ಮಾಧ್ಯಮಗಳೇ ಮಾತ ನಾಡುತ್ತಿವೆ. ಆ ಬಗ್ಗೆ ನಾನು ಪ್ರತಿಕ್ರಿಯಿಸಿದ್ದೇನೆ ಅಷ್ಟೇ,’ಧಿ’ಧಿಎಂದು ಅಧಿವರು ಹೇಧಿಳಿಧಿದ್ದಾಧಿರೆ. ‘ಧಿ‘ನಿಮ್ಮ ಪುಂಖಾನುಪುಂಖ ಪುರಾಣ ನೋಡಿದರೆ ನಿಮಗೆ ಆಡಳಿತಕ್ಕಿಂತ ಮತ್ತೊಬ್ಬ ರನ್ನು ಆಡಿಕೊಳ್ಳುವುದರಲ್ಲೇ ಹೆಚ್ಚು ಮುತುವರ್ಜಿ, ಆಸಕ್ತಿ ಇದ್ದಂತಿದೆ. ಜನರು ದಯೆ ತೋರಿ ನಿಮಗೆ 140 ಸೀಟು ಕೊಟ್ಟರೆ ಆಡಳಿತ ನಡೆಸುವುದು ಬಿಟ್ಟು ಹಾದಿಬೀದಿ ಯಲ್ಲಿಕಚ್ಚಾಡುತ್ತಿದ್ದೀರಿ. ನಿಮ್ಮ ಪಕ್ಷದಲ್ಲಿನ ಕುರ್ಚಿ ಕಾಳಗದ ಮುಂದುವರಿದ ಭಾಗವೇ ಕದ್ದಾಲಿಕೆ ಎನ್ನುವ ಅನುಮಾನ ಪ್ರತಿಪಕ್ಷಗಳದ್ದು ಮತ್ತು ಮಾಧ್ಯಮಗಳದ್ದು. ಪ್ರಶ್ನಿಸುವ ಜಾಗದಲ್ಲಿಪ್ರತಿಪಕ್ಷಗಳಿವೆ. ಅದಕ್ಕೆ ಉತ್ತರಿಸಿ. ವಿಷಯಾಂತರ ಬಿಟ್ಟು ಸತ್ಯ ಹೇಳಿ. ಸತ್ಯ ನಿಮ್ಮನೆ ದೇವ್ರು ಅಲ್ಲವೇ? ಸತ್ಯಮೇವ ಜಯತೇ ನಿಮ್ಮ ಸಿದ್ದ ಸ್ಲೋಗನ್ ,’’ ಎಂದು ಕಟುಕಿದ್ದಾರೆ. ‘‘ನಿಮ್ಮಂತೆ ಸಿದ್ಧವನದಲ್ಲಿಕೂತು ಮನೆಹಾಳು ಮಾಡೋದಕ್ಕೆ, ಶಾಸಕರಿಗೆ ಬ್ರೈನ್ ವಾಶ್ ಮಾಡುವ ಹೀನ ಜಾಯಮಾನ ನನ್ನದಲ್ಲ. ನಿಮ್ಮ ಮೊದಲ 5 ವರ್ಷದ ಸರಕಾರ ಮತ್ತು ಈಗಿನ ನಿಮ್ಮ ಗುಪ್ತಚರ ರಾಜಕಾರಣವನ್ನು ನಾನು ಕಂಡಿರುವುದೇ ಅಲ್ಲವೇ? ನಿಮ್ಮ ಪಕ್ಷದಲ್ಲಿರುವ ಆಂತರಿಕ ಪ್ರಜಾಪ್ರಭುತ್ವದ ವ್ಯಾಸ, ತ್ರಿಜ್ಯದ ಬಗ್ಗೆ ಅಳತೆ ಮಾಡುವ ತೆವಲು ನನಗಿಲ್ಲ. ರಾಷ್ಟ್ರದ ಮೇಲೆ ತುರ್ತು ಪರಿಸ್ಥಿತಿ ಹೇರಿ ಪ್ರಜಾಪ್ರಭುತ್ವದ ಕುತ್ತಿಗೆಗೆ ಕುಣಿಕೆ ಬಿಗಿದ ಸರ್ವಾಧಿಕಾರಿ ಕಾಂಗ್ರೆಸ್ ನಲ್ಲಿಪ್ರಜಾಪ್ರಭುತ್ವದ ಬೇರುಗಳೇ ಇಳಿದಿಲ್ಲ. ರಾಜಕೀಯ ಲಾಭಕ್ಕೆ ಮಹಾತ್ಮ ಗಾಂಧಿ, ರಾಜಕೀಯ ಸ್ವಾರ್ಥಕ್ಕೆ ಪ್ರಜಾಪ್ರಭುತ್ವ, ರಾಜಕೀಯ ಫಸಲಿಗೆ ಸಾಮಾಜಿಕ ನ್ಯಾಯ. ಇದೇ ನಿಮ್ಮ ರಾಜನೀತಿ. ಸಾಕ್ಷಾತ್ ವಿಧಾನ ಸಭೆಯಲ್ಲಿಯೇ ‘ಕುರ್ಚಿ ಬೇಕಿದ್ದರೆ ಒದ್ದು ಕಿತ್ತುಕೊಳ್ಳಬೇಕು’ ಎಂದು ದರ್ಪ ತೋರುವು ದಲ್ಲ, ’’ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

