ವಿಕ ಸುದ್ದಿಲೋಕ ಬೆಂಗಳೂರು
‘‘ನಾನು ಸ್ಟ್ರೀಟ್ ಫೈಟರ್ . ಹೇಗೆ ಹೋರಾಟ ಮಾಡಬೇಕೆಂದು ಗೊತ್ತಿದೆ,’’ ಎನ್ನುವ ಮೂಲಕ ಮುಂದಿನ ಅಧಿಕಾರದ ಗುರಿ ತಲುಪಲು ಅಖಾಡಕ್ಕಿಳಿಯುವ ಸುಳಿವು ನೀಡಿರುವ ಡಿಸಿಎಂ ಡಿ.ಕೆ.ಶಿವಕುಮಾರ್ , ‘ಧಿ‘ಧಿಕೆಧಿಪಿಧಿಸಿಧಿಸಿ ಅಧ್ಯಕ್ಷ ಸ್ಥಾನದ ಜವಾಬ್ದಾರಿ ಸಾಕು. ಅಲ್ಲಿಗೆ ಹೊಸ ರಕ್ತ, ಹೊಸ ಆಲೋಚನೆ ಬರಬೇಕು,’ಧಿ’ ಎಂದಿದ್ದಾರೆ.
ವಿಧಾನಸೌಧದಲ್ಲಿಮಾಧ್ಯಮಗಳ ಪ್ರಶ್ನೆಗೆ ಮಂಗಳವಾರ ಪ್ರತಿಕ್ರಿಯಿಸಿ,‘‘ನನ್ನ ಹೋರಾಟ ಅಧಿಕಾರಕ್ಕಾಗಿ ಅಲ್ಲ. ನನ್ನ ಹೋರಾಟ ಪಕ್ಷದ ಹೊರಗೆ. ನಾನು ಸುಮ್ಮನಾಗಿದ್ದೇನೆ ಎಂದು ಭಾವಿಸಿದರೆ ಅದು ಅವರಿಗೆ ಬಿಟ್ಟ ವಿಚಾರ,’’ ಎಂದರು.
ಕೆಪಿಸಿಸಿ ಅಧ್ಯಕ್ಷರಾಗಿ ಡಾ.ಜಿ.ಪರಮೇಶ್ವರ ದಾಖಲೆ ಮುರಿಯುತ್ತೀರಾ ಎಂಬ ಪ್ರಶ್ನೆಗೆ, ‘‘ಹೊಸ ರಕ್ತ ಬರಬೇಕು. ಹೊಸ ಆಲೋಚನೆ ಬರಬೇಕು. ನಾವೆಲ್ಲಮೊದಲ ಬಾರಿ ಶಾಸಕರಾದಾಗಲೇ ಮಂತ್ರಿಯಾದವರು. ನಾನು, ಪರಮೇಶ್ವರ, ಎಚ್ .ಕೆ ಪಾಟೀಲ್ , ರಾಮಲಿಂಗಾರೆಡ್ಡಿ, ಎಲ್ಲರೂ ಮಂತ್ರಿಯಾದವರೇ. ನಾವೀಗ ಹಿರಿಯ ನಾಗರಿಕರಾಗಿದ್ದೇವೆ. ಕೆಪಿಸಿಸಿ ಅಧ್ಯಕ್ಷನಾಗಿ 6 ವರ್ಷವಾಗಿದೆ. ಖಂಡಿತ ನನಗೆ 6 ವರ್ಷ ಸಾಕು,’’ ಎಂದು ಹೇಳಿದರು.
ಪ್ರಯತ್ನ ಬೇಕಿಲ್ಲ
ಬಜೆಟ್ ನಂತರ ಕ್ರಾಂತಿ ಮಾಡುತ್ತೀರಾ ಎಂಬ ಪ್ರಶ್ನೆಗೆ, ‘‘ನಾನೇಕೆ ಕ್ರಾಂತಿ ಮಾಡಲಿ. ನನಗೆ ನನ್ನ ಮೇಲೆ ನಂಬಿಕೆಯಿದೆ. ನಾನು ಭರವಸೆ ಮೇಲೆ ಬದುಕುತ್ತೇನೆ. ನಾನು ಪ್ರಯತ್ನ ಮಾಡುವ ಅಗತ್ಯವಿಲ್ಲ. ನನಗೆ ಯಾವಾಗ ಯಾವುದು ಬರಬೇಕೋ ಅದು ಬರುತ್ತದೆ. ಆ ಆತ್ಮವಿಶ್ವಾಸ ನನಗಿದೆ,’’ ಎಂದು ತಿಳಿಸಿದರು.
--------------------
ಹಾಲು, ಜೇನಿಗೆ ಡಿಸಿಎಂ ಸಹಮತ
2028ಕ್ಕೂ ಇದೇ ದೋಸ್ತಿ ಎಂದ ಡಿಕೆಶಿ
ತಮ್ಮ ಮತ್ತು ಡಿ.ಕೆ.ಶಿವಕುಮಾರ್ ನಡುವೆ ಹಾಲು, ಜೇನಿನ ಸಂಬಂಧವಿದೆ ಎಂಬ ಸಿಎಂ ಸಿದ್ದರಾಮಯ್ಯ ಹೇಳಿಕೆಯನ್ನು ಡಿಸಿಎಂ ಸ್ವಾಗತಿಸಿದರು. ‘‘ಖಂಡಿತಾ... 2023ರ ಚುನಾವಣೆ ಮಾತ್ರವಲ್ಲ. 2028ರಲ್ಲೂಇದು ಹಾಗೆಯೇ ಇರುತ್ತದೆ,’’ ಎನ್ನುವುದು ಈ ವಿಚಾರಕ್ಕೆ ಡಿಸಿಎಂ ಪ್ರತಿಕ್ರಿಯೆಯಾಗಿತ್ತು.
‘‘ ಕೆಲವು ನಿರ್ಧಾರ ಕೈಗೊಂಡಾಗ ನಾನು ಭಾಗಿಯಾಗಿದ್ದೆ ಎಂದು ಹೇಳಿರುವುದು ಬಿಟ್ಟು ಉಳಿದಂತೆ ನಾನು ಇದುವರೆಗೂ ಸಿಎಂ ವಿಚಾರವಾಗಿ ಮಾತನಾಡಿಲ್ಲ. ಸಿಎಂ ಹುದ್ದೆ ಖಾಲಿಯಾಗುತ್ತದೆ. ಹುದ್ದೆಯಿಂದ ಇಳಿಯುತ್ತಾರೆ. ದಲಿತರಿಗೆ ಸಿಎಂ ಹುದ್ದೆ ಸಿಗಬೇಕು, ಬೇರೆಯವರಿಗೆ ಸಿಗಬೇಕು ಎಂದು ಎಲ್ಲಿಯೂ ಹೇಳಿಲ್ಲ. ಸಿಎಂ ಹುದ್ದೆ ಖಾಲಿ ಮಾಡಿಸಲು ಹೊರಟಿರುವವರು ಬೇರೆಯವರು. ಸಿಎಂ ಸ್ಥಾನ ಖಾಲಿ ಆದರೆ ಅಲ್ಲವೇ ಬೇರೆಯವರಿಗೆ ನೀಡುವುದು? ಪಕ್ಷದ ಅಧ್ಯಕ್ಷನಾಗಿ ನನ್ನ ಜವಾಬ್ದಾರಿಯ ಅರಿವಿದೆ. ಪಕ್ಷಕ್ಕೆ ನನ್ನಿಂದ ಯಾವುದೇ ಕಾರಣಕ್ಕೂ ಧಕ್ಕೆಯಾಗಬಾರದು. ಶಿಸ್ತು ಉಲ್ಲಂಘನೆ ಆಗಬಾರದು. ಅಧ್ಯಕ್ಷ ಸ್ಥಾನದಲ್ಲಿಕೂತು ಆ ಸ್ಥಾನಕ್ಕೆ ಅನ್ಯಾಯ ಮಾಡಬಾರದು. ಬಹಳ ತಾಳ್ಮೆಯಿಂದ ಇದ್ದೇನೆ. ನಾವು ಕಟ್ಟಿ ಬೆಳೆಸಿರುವ ಪಕ್ಷ ಇದು. ಸ್ವಾರ್ಥಕ್ಕಾಗಿ ಬ್ಲಾಕ್ ಮೇಲೆ ಮಾಡುವುದಿಲ್ಲ. ಸಮಯವೇ ಉತ್ತರ ನೀಡಲಿದೆ,’’ ಎಂದು ಸ್ಪಷ್ಟಪಡಿಸಿದರು.
ಕಧಿರೆ ಕದ್ದಾಲಿಕೆ ಬಗ್ಗೆ ಕೇಂದ್ರ ಸಚಿವ ಎಚ್ .ಡಿ.ಕುಮಾರಸ್ವಾಮಿ ಹೇಳಿಕೆಯನ್ನು ಗಮನಕ್ಕೆ ತಂದಾಗ, ‘‘ನನಗೆ ಯಾವುದೇ ಮಾಹಿತಿ ಇಲ್ಲ. ಸಿಎಂ ಈ ವಿಚಾರವಾಗಿ ಹೇಳಿಕೆ ನೀಡಿದ್ದಾರೆ. ಜತೆಗೆ ಗೃಹ ಸಚಿವರು ಇದ್ದಾರೆ. ನಾನು ಜೈಲಲ್ಲಿಇದ್ದಾಗ ಸ್ವಾಮೀಜಿಗಳ ದೂರವಾಣಿ ಕದ್ದಾಲಿಕೆ ಬಗ್ಗೆ ಪತ್ರಿಕೆಗಳಲ್ಲಿಓದಿದ್ದೆ,’’ ಎಂದು ಹೇಳಿದರು.

