ಇ-ಖಾತಾ, ಇ-ಸ್ವತ್ತು ತ್ವರಿತವಾಗಿ ನೀಡಲು ಜಿಲ್ಲಾಉಸ್ತುವಾರಿ ಸಚಿವರ ಸೂಚನೆ

Contributed bydhanushkulal9@gmail.com|Vijaya Karnataka

ಜಿಲ್ಲಾಉಸ್ತುವಾರಿ ಸಚಿವ ದಿನೇಶ್‌ ಗುಂಡೂರಾವ್‌ ಅವರು ನಗರ ಸ್ಥಳೀಯ ಸಂಸ್ಥೆಗಳು ಮತ್ತು ಗ್ರಾಮ ಪಂಚಾಯಿತಿಗಳಿಗೆ ಇ-ಖಾತಾ, ಇ-ಸ್ವತ್ತುಗಳನ್ನು ತ್ವರಿತವಾಗಿ ನೀಡಲು ಸೂಚಿಸಿದ್ದಾರೆ. ಮಹಾನಗರಪಾಲಿಕೆ ಆಯುಕ್ತರು ಇ-ಖಾತಾ ನೀಡಿಕೆ ಸಮಸ್ಯೆ ಬಗೆಹರಿದಿದೆ ಎಂದು ತಿಳಿಸಿದರು. ಜಿಲ್ಲಾರಂಗಮಂದಿರ, ಪಂಜ ಮಂಗೇಶರರಾಯ ಭವನ ಕಾಮಗಾರಿಗಳನ್ನು ಶೀಘ್ರ ಪೂರ್ಣಗೊಳಿಸಲು, ಕುದ್ಮುಲ್‌ ರಂಗರಾವ್‌ ಸಮಾಧಿ ಸ್ಥಳ ಅಭಿವೃದ್ಧಿಗೆ ಅರಣ್ಯ ತಕರಾರು ಬಗೆಹರಿಸಲು ನಿರ್ದೇಶನ ನೀಡಿದ್ದಾರೆ. ಗ್ರಾಮಾಂತರ ಪ್ರದೇಶದಲ್ಲಿ ನಕ್ಷೆ ಅನುಮೋದನೆ ಪ್ರಕ್ರಿಯೆ ತ್ವರಿತಗೊಳಿಸಲು ಹೆಚ್ಚುವರಿ ಸಿಬ್ಬಂದಿ ಬಳಸಲು, ತ್ಯಾಜ್ಯ ಶುದ್ಧೀಕರಣ ಘಟಕದ ನೀರನ್ನು ಕೈಗಾರಿಕೆಗಳಿಗೆ ಬಳಸಲು ಮಾತುಕತೆ ನಡೆಸಲು ಸೂಚಿಸಿದ್ದಾರೆ.

district in charge minister dinesh gundurao issues instructions for the speedy processing of e khata and e swathu

ಮಂಗಳೂರು : ನಗರ ಸ್ಥಳೀಯ ಸಂಸ್ಥೆಗಳು ಮತ್ತು ಗ್ರಾಮ ಪಂಚಾಯಿತಿಗಳು ಇ-ಖಾತಾ ಮತ್ತು ಇ-ಸ್ವತ್ತುಗಳನ್ನು ತ್ವರಿತವಾಗಿ ನೀಡಲು ಕ್ರಮವಹಿಸುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ದಕ್ಷಿಣ ಕನ್ನಡ ಜಿಲ್ಲಾಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.

ಅವರು ಬುಧವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿಅಧಿಕಾರಿಗಳ ಜತೆ ಸಭೆ ನಡೆಸಿ ಮಾತನಾಡಿ, ಸಮಸ್ಯೆಗಳನ್ನು ಪರಿಹರಿಸಲು ಸಂಬಂಧಿಸಿದವರೊಂದಿಗೆ ಕ್ಷಿಪ್ರವಾಗಿ ಚರ್ಚಿಸಿ ಸಮಸ್ಯೆ ಪರಿಹರಿಸಲು ಸೂಚಿಸಿದರು. ಪ್ರಸ್ತುತ ಇ-ಖಾತಾ ನೀಡಿಕೆ ಸಮಸ್ಯೆ ಬಗೆಹರಿದಿದ್ದು, ಫೆಬ್ರವರಿ ತಿಂಗಳಲ್ಲಿ1058 ಇ-ಖಾತಾಗಳನ್ನು ನೀಡಲಾಗಿದೆ ಎಂದು ಮಹಾನಗರಪಾಲಿಕೆ ಆಯುಕ್ತರು ಮಾಹಿತಿ ನೀಡಿದರು.

ಮಂಗಳೂರಿನಲ್ಲಿನಿರ್ಮಾಣಗೊಳ್ಳುತ್ತಿರುವ ಜಿಲ್ಲಾರಂಗಮಂದಿರ ಕಾಮಗಾರಿಗೆ ಶೀಘ್ರವೇ ಚಾಲನೆ ನೀಡಬೇಕು. ಬಂಟ್ವಾಳದಲ್ಲಿನಿರ್ಮಾಣಗೊಳ್ಳುತ್ತಿರುವ ಪಂಜ ಮಂಗೇಶರರಾಯ ಭವನ ತ್ವರಿತವಾಗಿ ಪೂರ್ಣಗೊಳಿಸಬೇಕು. ನಗರದ ಅತ್ತಾವರದಲ್ಲಿಕುದ್ಮುಲ್ ರಂಗರಾವ್ ಸಮಾಧಿ ಸ್ಥಳ ಅಭಿವೃದ್ಧಿಗೆ ಅರಣ್ಯ ತಕರಾರನ್ನು ಶೀಘ್ರದಲ್ಲಿಬಗೆಹರಿಸಬೇಕು. ಗ್ರಾಮಾಂತರ ಪ್ರದೇಶದಲ್ಲಿವಿನ್ಯಾಸ, ನಕ್ಷೆ ಅನುಮೋದನೆ ಪ್ರಕ್ರಿಯೆಯನ್ನು ತ್ವರಿತಗೊಳಿಸಲು ಯೋಜನಾ ಪ್ರಾಧಿಕಾರಗಳು ಹೆಚ್ಚುವರಿ ಸಿಬ್ಬಂದಿಯನ್ನು ಬಳಸಿಕೊಳ್ಳಬೇಕು. ತ್ಯಾಜ್ಯ ಶುದ್ಧೀಕರಣ ಘಟಕದಲ್ಲಿಶುದ್ಧೀಕರಣಗೊಂಡ ನೀರನ್ನು ಬೃಹತ್ ಕೈಗಾರಿಕೆಗಳು ಬಳಸುವಂತಾಗಲು ಸಂಬಂಧಿಸಿದ ಉದ್ಯಮಗಳೊಂದಿಗೆ ಮಾತುಕತೆ ನಡೆಸಬೇಕು. ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿಜಲಸಿರಿ ಯೋಜನೆಯಡಿ ಕೈಗೊಂಡ ಕಾಮಗಾರಿಗಳನ್ನು ಥರ್ಡ್ -ಪಾರ್ಟಿ ಪರಿಶೀಲನೆ ನಡೆಸಬೇಕು. ಜಿಲ್ಲೆಯಲ್ಲಿಹೊಸದಾಗಿ ನಿರ್ಮಾಣಗೊಂಡು ಕಾಮಗಾರಿ ಪೂರ್ಣಗೊಂಡಿರುವ ಹಾಸ್ಟೆಲ್ ಕಟ್ಟಡಗಳ ಉದ್ಘಾಟನೆಗೆ ಕಾಯದೆ ವಿದ್ಯಾರ್ಥಿಗಳಿಗೆ ಪ್ರವೇಶ ನೀಡಬೇಕು ಎಂದು ಸಚಿವರು ತಿಳಿಸಿದರು.

ಜಿಲ್ಲಾಧಿಕಾರಿ ದರ್ಶನ್ ಎಚ್ .ವಿ., ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ, ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ಕುಮಾರ್ , ಜಿಲ್ಲಾಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ನರ್ವಾಡೆ ವಿನಾಯಕ ಕಾರ್ಬಾರಿ, ಅಪರ ಜಿಲ್ಲಾಧಿಕಾರಿ ರಾಜು ಕೆ.ಹಾಗೂ ಮತ್ತಿತರರು ಉಪಸ್ತಿತರಿದ್ದರು.

ಫೊಟೋ:

4ಎಂ-ಸಭೆ

ಜಿಲ್ಲಾಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಜಿಲ್ಲಾಧಿಕಾರಿ ಕಚೇರಿಯಲ್ಲಿಅಧಿಕಾರಿಗಳ ಜತೆ ಸಭೆ ನಡೆಸಿದರು.