ಹಾಸನ: ನಗರದ ಆರ್ .ಸಿ.ರಸ್ತೆ ಗಂಧದ ಕೋಠಿ ಆವರಣದಲ್ಲಿರುವ ಮಹಿಳಾ ಸರಕಾರಿ ಪ್ರಥಮ ದರ್ಜೆ ಕಾಲೇಜಿಗೆ ಕಾಲೇಜು ಶಿಕ್ಷಣ ಇಲಾಖೆಯ ಮೈಸೂರು ಪ್ರಾದೇಶಿಕ ಕೇಂದ್ರದ ಜಂಟಿ ನಿರ್ದೇಶಕಿ ಡಾ.ಡಿ.ಎಸ್ .ಪ್ರತಿಮಾ ದಿಢೀರ್ ಭೇಟಿ ಕಾಲೇಜಿನ ಶೈಕ್ಷಣಿಕ ಪ್ರಗತಿ ಪರಿಶೀಲನೆ ನಡೆಸಿದರು.
ಇದೇ ವೇಳೆ ತರಗತಿಗಳಿಗೆ ಭೇಟಿ ನೀಡಿ ಕಾಲೇಜಿನ ವಿದ್ಯಾರ್ಥಿಗಳೊಂದಿಗೆ ಕಾಲೇಜಿನ ಬಗ್ಗೆ ಮಾಹಿತಿ ಪಡೆದುಕೊಂಡರು. ಕಾಲೇಜಿನ ಶೈಕ್ಷಣಿಕ ಪ್ರಗತಿಗೆ ಸಂಬಂಧಿಸಿದಂತೆ ಹಾಗೂ ಆಡಳಿತಾತ್ಮಕ ವಿಷಯಗಳ ಕುರಿತು ಕಾಲೇಜಿನ ಪ್ರಾಂಶುಪಾಲ ಡಿ.ಕೆ.ಮಂಜಯ್ಯ ಮಾಹಿತಿ ನೀಡಿದರು. ಕಾಲೇಜಿನ ಎಲ್ಲಾಅಧ್ಯಾಪಕರು, ಸಿಬ್ಬಂದಿ ಹಾಜರಿದ್ದರು.

