ಎಫ್ ಐಆರ್ ರದ್ದು ಕೋರಿ ಮುತ್ಯಾ ಸಲ್ಲಿಸಿದ್ದ ಅರ್ಜಿ ವಾಪಸ್

Contributed byphanumanthu14@gmail.com|Vijaya Karnataka

ಮಹಲ್‌ ರೋಜಾ ಮಠದ ಮಲ್ಲಿಕಾರ್ಜುನ ಮುತ್ಯಾ ಅವರು ತಮ್ಮ ವಿರುದ್ಧದ ಪೋಕ್ಸೊ ಪ್ರಕರಣ ರದ್ದು ಕೋರಿ ಹೈಕೋರ್ಟ್‌ನಲ್ಲಿ ಸಲ್ಲಿಸಿದ್ದ ಅರ್ಜಿಯನ್ನು ಹಿಂದಕ್ಕೆ ಪಡೆದಿದ್ದಾರೆ. ನ್ಯಾಯಾಲಯ ಅರ್ಜಿಯನ್ನು ವಜಾ ಮಾಡುವ ಸಾಧ್ಯತೆಯಿದ್ದರಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ. ಮುತ್ಯಾ ಅವರು ಪೊಲೀಸ್ ತನಿಖೆಗೆ ಹಾಜರಾಗುವ ಸಾಧ್ಯತೆ ಇದೆ. ನಿರೀಕ್ಷಣಾ ಜಾಮೀನು ಅರ್ಜಿಯ ವಿಚಾರಣೆ ಮಾರ್ಚ್ 6ಕ್ಕೆ ಮುಂದೂಡಿಕೆಯಾಗಿದೆ.

mutya withdraws fir petition will he appear for the hearing

ವಿಕ ಸುದ್ದಿಲೋಕ ಯಾದಗಿರಿ ತನ್ನ ವಿರುದ್ಧದ ಪೋಕ್ಸೊ ಪ್ರಕರಣ ರದ್ದು ಕೋರಿ ಶಹಾಪುರ ತಾಲೂಕಿನ ಮಹಲ್ ರೋಜಾ ಮಠದ ಮಲ್ಲಿಕಾರ್ಜುನ ಮುತ್ಯಾ ಕಲಬುರಗಿ ಹೈಕೋರ್ಟ್ ನಲ್ಲಿಸಲ್ಲಿಸಿದ್ದ ಅರ್ಜಿಯನ್ನು ಹಿಂದಕ್ಕೆ ಪಡೆಯಲಾಗಿದೆ. ಎಫ್ ಐಆರ್ ರದ್ದುಪಡಿಸುವ ಅರ್ಜಿಯನ್ನು ನ್ಯಾಯಾಲಯ ವಜಾ ಮಾಡುವ ಸಾಧ್ಯತೆಯಿರುವುದರಿಂದ ಮುತ್ಯಾ ಪರ ವಕೀಲರು ಹಿಂದಕ್ಕೆ ಪಡೆದಿದ್ದಾರೆ ಎಂದು ಮೂಲಗಳು ತಿಳಿಸಿವೆ. ವಿಚಾರಣೆಗೆ ಮುತ್ಯಾ ಹಾಜರು ?: ಪೋಕ್ಸೊ ಪ್ರಕರಣದ ವಿಚಾರಣೆಗೆ ಹಾಜರಾಗಲು ಆರೋಪಿ ಮಲ್ಲಿಕಾರ್ಜುನ ಮುತ್ಯಾಗೆ ಪೊಲೀಸ್ ಇಲಾಖೆಯಿಂದ ಎರಡನೇ ನೋಟಿಸ್ ನೀಡಿರುವುದರಿಂದ ವಿಚಾರಣೆಗೆ ಹಾಜರಾಗುವ ಸಾಧ್ಯತೆಯಿದೆ ಎಂದು ತಿಳಿದುಬಂದಿದೆ. ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ: ಮಲ್ಲಿಕಾರ್ಜುನ ಮುತ್ಯಾ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ಮಾ.6ಕ್ಕೆ ಮುಂದೂಡಿಕೆಯಾಗಿದೆ. ಜಿಲ್ಲಾಸತ್ರ ಮತ್ತು ಪ್ರಧಾನ ನ್ಯಾಯಾಲಯದಲ್ಲಿಮಂಗಳವಾರ ನಡೆದ ವಿಚಾರಣೆ ವೇಳೆಯಲ್ಲಿನಿರೀಕ್ಷಣಾ ಜಾಮೀನು ಅರ್ಜಿಗೆ ಸರಕಾರಿ ಅಭಿಯೋಜಕರು ಆಕ್ಷೇಪಣೆ ಹಾಗೂ ತನಿಖೆಯ ಸ್ಥಿತಿಯ ಬಗ್ಗೆ ಮಾಹಿತಿ ಸಲ್ಲಿಕೆ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಓದಲೇ ಬೇಕಾದ ಸುದ್ದಿ