Renaming The Road After Dr Narahalli Balasubrahmanya In Yeshwantpur
(ಧಿಸೂಧಿಚನೆ ಇಧಿದೆ, ಮಸ್ಟ್ ಬಧಿಳಧಿಸಿ..ಧಿ) ರಸ್ತೆಗೆ ನರಹಳ್ಳಿ ಹೆಸರು ನಾಮಕರಣ
Contributed by: DHANANJAYAGOWDA|Vijaya Karnataka•
ಯಶವಂತಪುರದಲ್ಲಿ ಕನ್ನಡ ಭವನ ನಿರ್ಮಾಣಕ್ಕೆ ಶಾಸಕ ಎಸ್.ಟಿ ಸೋಮಶೇಖರ್ ಸ್ಥಳಾವಕಾಶ ನೀಡುವುದಾಗಿ ಭರವಸೆ ನೀಡಿದ್ದಾರೆ. ಡಾ. ನರಹಳ್ಳಿ ಬಾಲಸುಬ್ರಹ್ಮಣ್ಯ ಅವರ ಹೆಸರನ್ನು ರಸ್ತೆಗೆ ನಾಮಕರಣ ಮಾಡಲಾಗಿದೆ. ಕೆಂಗೇರಿ ಉಪನಗರದ ಭುವನೇಶ್ವರಿ ನಗರದಲ್ಲಿ ಈ ರಸ್ತೆ ಇದೆ. ಸಾಹಿತ್ಯ ಮತ್ತು ಸಂಸ್ಕೃತಿ ಸಮಾಜಕ್ಕೆ ಮಾರ್ಗದರ್ಶನ ನೀಡಬಲ್ಲವು ಎಂದು ಡಾ. ನರಹಳ್ಳಿ ಬಾಲಸುಬ್ರಹ್ಮಣ್ಯ ಅಭಿಪ್ರಾಯಪಟ್ಟರು. ಕಾರ್ಯಕ್ರಮದಲ್ಲಿ ಹಲವು ಗಣ್ಯರು ಉಪಸ್ಥಿತರಿದ್ದರು.
ಬೆಂಗಳೂರು : ಯಶವಂತಪುರದಲ್ಲಿ ಕನ್ನಡ ಭವನ ನಿರ್ಮಾಣಕ್ಕೆ ಶೀಘ್ರದಲ್ಲೇ ಜಾಗ ಕೊಡಲಾಗುವುದು ಎಂದು ಶಾಸಕ ಎಸ್.ಟಿ ಸೋಮಶೇಖರ್ ಭರವಸೆ ನೀಡಿದ್ದಾರೆ. ಬೆಂಗಳೂರು ನಗರ ಜಿಲ್ಲಾ ಕಸಾಪ ಮತ್ತು ಯಶವಂತಪುರ ವಿಧಾನಸಭಾ ಕ್ಷೇತ್ರದ ಕಸಾಪ ಘಟಕದ ವತಿಯಿಂದ ಡಾ. ನರಹಳ್ಳಿ ಬಾಲಸುಬ್ರಹ್ಮಣ್ಯ ಅವರ ಹೆಸರಿನ ರಸ್ತೆಗೆ ನಾಮಫಲಕ ಅಳವಡಿಸಿ ಮಾತನಾಡಿದ ಅವರು, ಈ ವಿಷಯ ತಿಳಿಸಿದರು.
ಸಾಹಿತಿ ಡಾ. ನರಹಳ್ಳಿ ಬಾಲಸುಬ್ರಹ್ಮಣ್ಯ ಅವರು ಮಾತನಾಡಿ, "ಪ್ರಸ್ತುತ ಕಲುಷಿತಗೊಂಡಿರುವ ಸಾಮಾಜಿಕ ವ್ಯವಸ್ಥೆಯಲ್ಲಿ ರಾಜಕೀಯ ಮತ್ತು ಧಾರ್ಮಿಕ ಕ್ಷೇತ್ರಗಳು ಆತಂಕಕ್ಕೆ ಒಳಗಾಗಿವೆ. ಇಂತಹ ಸಂದರ್ಭದಲ್ಲಿ ಸಮಾಜಕ್ಕೆ ಸಾಹಿತ್ಯಿಕ ಮತ್ತು ಸಾಂಸ್ಕೃತಿಕ ವಿಚಾರಗಳು ಸನ್ಮಾರ್ಗಗಳನ್ನು ತೋರಬಲ್ಲವು" ಎಂದು ಅಭಿಪ್ರಾಯಪಟ್ಟರು.ಕೆಂಗೇರಿ ಉಪನಗರ ಉಲ್ಲಾಳದ ಭುವನೇಶ್ವರಿ ನಗರದ ಕಲ್ಯಾಣ ಗೃಹ ನಿರ್ಮಾಣ ಸಹಕಾರ ಸಂಘದ ಬಡಾವಣೆಯಲ್ಲಿ ಡಾ. ನರಹಳ್ಳಿ ಬಾಲಸುಬ್ರಹ್ಮಣ್ಯ ಅವರ ಕುಟುಂಬ ವಾಸಿಸುತ್ತಿದೆ. ಅವರ ಮನೆಯ ರಸ್ತೆಗೆ ಈಗ ನರಹಳ್ಳಿ ಅವರ ಹೆಸರನ್ನು ನಾಮಕರಣ ಮಾಡಲಾಗಿದೆ.
ಈ ಕಾರ್ಯಕ್ರಮದಲ್ಲಿ ಬೆಂಗಳೂರು ನಗರ ಜಿಲ್ಲಾ ಕಸಾಪ ಅಧ್ಯಕ್ಷ ಎಂ. ಪ್ರಕಾಶಮೂರ್ತಿ, ಯಶವಂತಪುರ ಕಸಾಪ ಘಟಕದ ಅಧ್ಯಕ್ಷ ಎಚ್.ಎಸ್. ಸುಧೀಂದ್ರಕುಮಾರ್, ರಜನಿ ನರಹಳ್ಳಿ, ಡಾ. ವಸುಂಧರಾ ಭೂಪತಿ, ಅಭಿನವ ರವಿಕುಮಾರ್ ಅವರು ಉಪಸ್ಥಿತರಿದ್ದರು.