ಬಿಸಿಲಲ್ಲಿನಿಂತಿದ್ದ ವೃದ್ಧ ಕುಸಿದು ಬಿದ್ದು ಸಾವು

Contributed byManjunath GK|Vijaya Karnataka

ಬೆಂಗಳೂರು ಗ್ರಾಮಾಂತರದ ನೆಲಮಂಗಲ ತಾಲೂಕಿನ ಬರದಿ ಗ್ರಾಮದಲ್ಲಿ ದುರಂತವೊಂದು ಸಂಭವಿಸಿದೆ. ಶೆಟ್ಟಿಹಳ್ಳಿ ಗ್ರಾಮದ 70ರ ವೃದ್ಧ ಚಿಕ್ಕಣ್ಣ ಅವರು ಕೋಳಿ ಫಾರಂನಲ್ಲಿ ಕೆಲಸ ಮಾಡುತ್ತಿದ್ದರು. ಸೋಮವಾರ ಮಧ್ಯಾಹ್ನ ಬಿಸಿಲಿನಲ್ಲಿ ಅಂಗಡಿಗೆ ತೆರಳಿದ್ದಾಗ ಕುಸಿದು ಬಿದ್ದಿದ್ದಾರೆ. ಸ್ಥಳೀಯರು ತಕ್ಷಣ ಆಸ್ಪತ್ರೆಗೆ ಕರೆದೊಯ್ದರೂ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಈ ಬಗ್ಗೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

elderly man collapsed and died from heat exposure locals rushed for treatment

ನೆಲಮಂಗಲ (ಬೆಂಗಳೂರು ಗ್ರಾಮಾಂತರ): ತಾಲೂಕಿನ ಬರದಿ ಗ್ರಾಮದಲ್ಲಿಬಿಸಿಲಿನಲ್ಲಿನಿಂತಿದ್ದ ವೃದ್ಧರೊಬ್ಬರು ಕುಸಿದು ಬಿದ್ದು ಮೃತಪಟ್ಟಿದ್ದಾರೆ. ತಾಲೂಕಿನ ಶೆಟ್ಟಿಹಳ್ಳಿ ಗ್ರಾಮದ ನಿವಾಸಿ ಚಿಕ್ಕಣ್ಣ(70) ಮೃತರು.

ಬರದಿ ಗ್ರಾಮದ ಕೋಳಿ ಫಾರಂವೊಂದರಲ್ಲಿಚಿಕ್ಕಣ್ಣ ಕೆಲಸ ಮಾಡುತ್ತಿದ್ದರು. ಸೋಮವಾರ ಮಧ್ಯಾಹ್ನ 12 ಗಂಟೆ ಸಮಯದಲ್ಲಿಅಂಗಡಿಗೆ ತೆರಳಿದ್ದ ವೇಳೆ ಬಿಸಿಲಿನಲ್ಲಿನಿಂತಲ್ಲಿಯೇ ಏಕಾಏಕಿ ಕುಸಿದು ಬಿದ್ದಿದ್ದಾರೆ. ಸ್ಥಳೀಯರು ತಕ್ಷಣ ಆಸ್ಪತ್ರೆಗೆ ರವಾನಿಸಿದರೂ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ. ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿಪ್ರಕರಣ ದಾಖಲಾಗಿದೆ.