ಸಿಬಿಎಸ್ ಇ 12: 85% ಫಲಿತಾಂಶ

Contributed byanil.kumar2@timesgroup.com|Vijaya Karnataka

ಸಿಬಿಎಸ್‌ಇ 12ನೇ ತರಗತಿ 2025-26ರ ವಾರ್ಷಿಕ ಪರೀಕ್ಷಾ ಫಲಿತಾಂಶ ಪ್ರಕಟವಾಗಿದೆ. ಒಟ್ಟು 85% ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಈ ಬಾರಿ ಬಾಲಕಿಯರು ಉತ್ತಮ ಸಾಧನೆ ಮಾಡಿದ್ದಾರೆ. ತಿರುವನಂತಪುರಂ ವಲಯ ಮೊದಲ ಸ್ಥಾನದಲ್ಲಿದೆ. ಚೆನ್ನೈ ಎರಡನೇ ಸ್ಥಾನ, ಬೆಂಗಳೂರು ಮೂರನೇ ಸ್ಥಾನ ಪಡೆದಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಫಲಿತಾಂಶದಲ್ಲಿ ಸ್ವಲ್ಪ ಕುಸಿತ ಕಂಡುಬಂದಿದೆ.

girls excel cbse 12th grade results show 85 pass rate

ಹೊಸದಿಲ್ಲಿ: ಕೇಂದ್ರೀಯ ಪ್ರೌಢಶಿಕ್ಷಣ ಮಂಡಳಿಯು (ಸಿಬಿಎಸ್ ಇ) 2025-26ನೇ ಸಾಲಿನ 12ನೇ ತರಗತಿಯ ವಾರ್ಷಿಕ ಪರೀಕ್ಷೆಯ ಫಲಿತಾಂಶ ಪ್ರಕಟಿಸಿದ್ದು, ಶೇ.85ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಈ ಬಾರಿಯೂ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ.

ಈ ಬಾರಿ ಒಟ್ಟು 17,68,968 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಈ ಪೈಕಿ 15,07,109 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿಯ ಒಟ್ಟಾರೆ ಉತ್ತೀರ್ಣ ಪ್ರಮಾಣದಲ್ಲಿಶೇ 3.19ರಷ್ಟು ಕುಸಿತ ಕಂಡಿದೆ. ಕಳೆದ ವರ್ಷ 14,96,307 ವಿದ್ಯಾರ್ಥಿಗಳು ಉತ್ತೀರ್ಣರಾಗುವುದರೊಂದಿಗೆ ಶೇ 88.39ರಷ್ಟು ಫಲಿತಾಂಶ ದಾಖಲಾಗಿತ್ತು.

ತಿರುವನಂತಪುರಂ ವಲಯವು ಶೇ 95.62ರಷ್ಟು ಉತ್ತೀರ್ಣ ಪ್ರಮಾಣದೊಂದಿಗೆ ಅಗ್ರಸ್ಥಾನದಲ್ಲಿದ್ದರೆ, ಚೆನ್ನೈ 93.84% ಫಲಿತಾಂಶದೊಂದಿಗೆ 2ನೇ ಸ್ಥಾನ ಗಳಿಸಿದೆ. ಶೇ. 93.19 ಉತ್ತೀರ್ಣ ಪ್ರಮಾಣದೊಂದಿಗೆ ಬೆಂಗಳೂರು ವಲಯ ಮೂರನೇ ಸ್ಥಾನ ಪಡೆದಿದೆ.