ಬಾಬಾಸಾಹೇಬರ ಆಶಯಕ್ಕೆ ಧಕ್ಕೆ ಬರದಿರಲಿ

Contributed bykugweprakash@gmail.com|Vijaya Karnataka

ಬಿಜೆಪಿ ರಾಜ್ಯ ಉಪಾಧ್ಯಕ್ಷ ಹರತಾಳು ಹಾಲಪ್ಪ ಅವರು ಡಾ. ಬಿ.ಆರ್‌. ಅಂಬೇಡ್ಕರ್‌ ಅವರ 135ನೇ ಜನ್ಮದಿನಾಚರಣೆಯನ್ನು ಉದ್ಘಾಟಿಸಿದರು. ಸಂವಿಧಾನದ ಫಲವಾದ ಸೌಲಭ್ಯಗಳನ್ನು ಮರೆಯಬಾರದು ಎಂದರು. ದಲಿತ ಸಂಘರ್ಷ ಸಮಿತಿಗಳು ಸಂವಿಧಾನದ ಆಶಯಗಳನ್ನು ಜನರಿಗೆ ತಲುಪಿಸಬೇಕು. ಅಂಬೇಡ್ಕರ್‌ ಅವರ ಸಿದ್ಧಾಂತಗಳನ್ನು ಮನೆಮನೆಗೆ ತಲುಪಿಸುವುದು ಅಗತ್ಯ ಎಂದು ರತ್ನಾಕರ ಹೊನಗೋಡು ಹೇಳಿದರು. ಡಿ.ಜಿ.ಸಾಗರ ಬಣ ಮುಂದಿನ ದಿನಗಳಲ್ಲಿ ಇನ್ನಷ್ಟು ಕಾರ್ಯಕ್ರಮ ರೂಪಿಸುವ ಉದ್ದೇಶ ಹೊಂದಿದೆ.

dr br ambedkar birth anniversary important message from dalit struggle committee

ದಲಿತ ಸಂಘರ್ಷ ಸಮಿತಿಯಿಂದ ಅಂಬೇಡ್ಕರ್ ಜನ್ಮದಿನಾಚರಣೆಯಲ್ಲಿಹಾಲಪ್ಪ

ಬಾಬಾಸಾಹೇಬರ ಆಶಯಕ್ಕೆ ಧಕ್ಕೆ ಬರದಿರಲಿ

ವಿಕ ಸುದ್ದಿಲೋಕ ಸಾಗರ

ಸರಕಾರ ನೀಡುತ್ತಿರುವ ಅನೇಕ ಸೌಲಭ್ಯಗಳು ಅಂಬೇಡ್ಕರ್ ಅವರ ಸಂವಿಧಾನದ ಫಲವೆಂಬುದನ್ನು ಮರೆಯಬಾರದು. ದಲಿತ ಸಂಘರ್ಷ ಸಮಿತಿಗಳು ಸಮುದಾಯದ ರಕ್ಷಣೆ ಜತೆಗೆ ಸಂವಿಧಾನದ ಮೂಲ ಆಶಯಗಳನ್ನು ಜನರಿಗೆ ತಲುಪಿಸುವ ಕೆಲಸ ಮಾಡಬೇಕು ಎಂದು ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷ ಹರತಾಳು ಹಾಲಪ್ಪ ಹೇಳಿದರು.

ನಗರದ ಪ್ರವಾಸಿ ಮಂದಿರ ಸಭಾಂಗಣದಲ್ಲಿಗುರುವಾರ ದಲಿತ ಸಂಘರ್ಷ ಸಮಿತಿ (ಡಿ.ಜಿ.ಸಾಗರ ಬಣ) ವತಿಯಿಂದ ಹಮ್ಮಿಕೊಂಡಿದ್ದ ಡಾ. ಬಿ.ಆರ್ .ಅಂಬೇಡ್ಕರ್ ಅವರ 135ನೇ ಜನ್ಮದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಅಂಬೇಡ್ಕರ್ ಆಶಯಗಳಿಗೆ ಧಕ್ಕೆ ತರದಂತೆ ನಮ್ಮ ನಡವಳಿಕೆಗಳು ಇರಬೇಕು. ಸಂವಿಧಾನ ನೀಡಿದ ಹಕ್ಕುಗಳು ಮತ್ತು ಕರ್ತವ್ಯಗಳನ್ನು ನಿಷ್ಠೆಯಿಂದ ಪಾಲಿಸುವುದು ಪ್ರತಿಯೊಬ್ಬರ ಜವಾಬ್ದಾರಿ ಎಂದರು.

ಜಿಲ್ಲಾಪಂಚಾಯಿತಿ ಮಾಜಿ ಸದಸ್ಯ ರತ್ನಾಕರ ಹೊನಗೋಡು ಮಾತನಾಡಿ, ತುಳಿತಕ್ಕೊಳಗಾದ ಸಮುದಾಯವನ್ನು ಮುಖ್ಯವಾಹಿನಿಗೆ ತರುವಲ್ಲಿಅಂಬೇಡ್ಕರ್ ಅವರ ಪಾತ್ರ ಮಹತ್ವದ್ದಾಗಿದೆ. ಅವರ ಸಿದ್ಧಾಂತಗಳನ್ನು ಮನೆಮನೆಗೆ ತಲುಪಿಸುವುದು ಅಗತ್ಯ ಎಂದರು.

ಅಧ್ಯಕ್ಷತೆ ವಹಿಸಿದ್ದ ಡಿಎಸ್ ಎಸ್ ಸಂಚಾಲಕ ನಟರಾಜ ಗೇರಬೀಸು, ದಲಿತ ಸಂಘರ್ಷ ಸಮಿತಿ ಡಿ.ಜಿ.ಸಾಗರ ಬಣ ಸಮುದಾಯದ ಆಶಯಗಳಿಗೆ ಸ್ಪಂದಿಸುತ್ತಿದ್ದು, ಮುಂದಿನ ದಿನಗಳಲ್ಲಿಇನ್ನಷ್ಟು ಕಾರ್ಯಕ್ರಮಗಳನ್ನು ರೂಪಿಸುವ ಉದ್ದೇಶ ಹೊಂದಿದೆ ಎಂದು ತಿಳಿಸಿದರು.

ಈ ಸಂದರ್ಭ ಸಮಿತಿಯ ಜಿಲ್ಲಾಸಂಚಾಲಕ ದುರ್ಗಾ ಭೋವಿ, ಜಿಲ್ಲಾಪಂಚಾಯಿತಿ ಮಾಜಿ ಸದಸ್ಯ ಗೋಪಾಲ, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಗಣಪತಿ ಇರುವಕ್ಕಿ, ಮಂಜಪ್ಪ ಇರುವಕ್ಕಿ ಮತ್ತಿತರರು ಉಪಸ್ಥಿತರಿದ್ದರು.

===

ಚಿತ್ರಶೀರ್ಷಿಕೆ

30ಎಸ್ ಜಿಆರ್ 2

ಸಾಗರದ ಪ್ರವಾಸಿ ಮಂದಿರ ಸಭಾಂಗಣದಲ್ಲಿಗುರುವಾರ ದಲಿತ ಸಂಘರ್ಷ ಸಮಿತಿ (ಡಿ.ಜಿ.ಸಾಗರ ಬಣ) ವತಿಯಿಂದ ಹಮ್ಮಿಕೊಂಡಿದ್ದ ಡಾ. ಬಿ.ಆರ್ . ಅಂಬೇಡ್ಕರ್ ಅವರ 135ನೇ ಜನ್ಮದಿನಾಚರಣೆಯನ್ನು ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷ ಹರತಾಳು ಹಾಲಪ್ಪ ಉದ್ಘಾಟಿಸಿದರು.