ರಾಯಚೂರು- ಹೇಮರೆಡ್ಡಿ ಮಲ್ಲಮ್ಮ ಜಯಂತಿ, ಸಭೆ

Contributed bymanjunathsalic@gmail.com|Vijaya Karnataka

ರಾಯಚೂರು ಜಿಲ್ಲೆಯಲ್ಲಿ ಮೇ 10ರಂದು ಹೇಮರೆಡ್ಡಿ ಮಲ್ಲಮ್ಮ ಜಯಂತಿಯನ್ನು ಅದ್ಧೂರಿಯಾಗಿ ಆಚರಿಸಲು ಸಿದ್ಧತೆ ನಡೆದಿದೆ. ನಗರದ ಪಂ.ಸಿದ್ಧರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ಬೆಳಿಗ್ಗೆ 10ಕ್ಕೆ ವೇದಿಕೆ ಕಾರ್ಯಕ್ರಮ ನಡೆಯಲಿದೆ. ಜಿಲ್ಲೆಯ ಎಲ್ಲ ಸರ್ಕಾರಿ ಕಚೇರಿ, ಶಾಲೆ, ಕಾಲೇಜು, ವಸತಿ ನಿಲಯಗಳಲ್ಲಿ ಜಯಂತಿ ಕಡ್ಡಾಯವಾಗಿ ಆಚರಿಸಬೇಕು. ಅಧಿಕಾರಿಗಳು ಸಮನ್ವಯದಿಂದ ಕಾರ್ಯಕ್ರಮ ನಡೆಸಬೇಕು. ಸಮಾಜದ ಬಂಧುಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸಹಕರಿಸಬೇಕು.

hemareddi mallamma jayanti celebration preparations on the 10th

10ರಂದು ಹೇಮರೆಡ್ಡಿ ಮಲ್ಲಮ್ಮ ಜಯಂತಿ

ರಾಯಚೂರು: ‘‘ಮೇ 10ರಂದು ಹೇಮರೆಡ್ಡಿ ಮಲ್ಲಮ್ಮ ಜಯಂತಿಯನ್ನು ಅದ್ಧೂರಿ ಮತ್ತು ಅರ್ಥಪೂರ್ಣವಾಗಿ ಆಚರಿಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು,’’ ಎಂದು ಅಪರ ಜಿಲ್ಲಾಧಿಕಾರಿ ಶಿವಾನಂದ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.

ನಗರದ ನೂತನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಗುರುವಾರ ನಡೆದ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ ಪೂರ್ವಭಾವಿ ಸಭೆಯಲ್ಲಿಅವರು ಮಾತನಾಡಿದರು.

‘‘ಜಯಂತಿ ದಿನ ಜಿಲ್ಲೆಯ ಎಲ್ಲಸರಕಾರಿ ಕಚೇರಿ, ಶಾಲಾ, ಕಾಲೇಜು ಹಾಗೂ ವಸತಿ ನಿಲಯಗಳಲ್ಲಿಹೇಮರೆಡ್ಡಿ ಮಲ್ಲಮ್ಮ ಜಯಂತಿ ಕಡ್ಡಾಯವಾಗಿ ಆಚರಿಸಬೇಕು. ಈ ಹಿನ್ನೆಲೆ ಸಂಬಂಧಿಸಿದ ಇಲಾಖೆ ಅಚ್ಚುಕಟ್ಟು ವ್ಯವಸ್ಥೆ ಕಲ್ಪಿಸಬೇಕು. ಬೆಳಗ್ಗೆ 10ಕ್ಕೆ ನಗರದ ಪಂ.ಸಿದ್ಧರಾಮ ಜಂಬಲದಿನ್ನಿ ರಂಗಮಂದಿರದಲ್ಲಿವೇದಿಕೆ ಕಾರ್ಯಕ್ರಮ ನಡೆಯಲಿದ್ದು, ಎಲ್ಲಇಲಾಖೆಗಳು ಪರಸ್ಪರ ಸಮನ್ವಯದೊಂದಿಗೆ ಜಯಂತಿ ಆಚರಣೆಗೆ ವ್ಯವಸ್ಥೆ ಮಾಡಿಕೊಳ್ಳಬೇಕು. ಜಯಂತಿ ಆಚರಣೆಗೆ ಸಮಾಜದ ಬಂಧುಗಳ ಸಹಕಾರವೂ ಅಗತ್ಯವಿದ್ದು, ಜಿಲ್ಲಾಡಳಿತದೊಂದಿಗೆ ಸಹಕರಿಸಿ ವ್ಯವಸ್ಥಿತ ಜಯಂತಿ ಆಚರಣೆಗೆ ಸಮಾಜದವರು ಹೆಚ್ಚಿನ ಸಂಖ್ಯೆಯಲ್ಲಿಭಾಗವಹಿಸಬೇಕು,’’ ಎಂದರು.

ರೆಡ್ಡಿ ಸಮಾಜದ ಜಿಲ್ಲಾಧ್ಯಕ್ಷ ಡಾ.ಬಸನಗೌಡ, ತಾಲೂಕು ಅಧ್ಯಕ್ಷ ರಾಮನಗೌಡ ಏಗನೂರು, ಚಂದ್ರಶೇಖರ ಮಿರ್ಜಾಪುರ, ವಸಂತ ರೆಡ್ಡಿ, ನವೀನ್ ಕುಮಾರ, ವಿರುಪಣ್ಣ ಚೌಧರಿ, ಜಿ.ಎಸ್ .ರಾಮನಗೌಡ, ಸುರೇಶ, ಪರಮೇಶ್ವರ ಇತರರಿದ್ದರು.

---

30ಎಂಎಸ್ 04

ರಾಯಚೂರಿನ ನೂತನ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ ನಿಮಿತ್ತ ಅಪರ ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿಗುರುವಾರ ಪೂರ್ವಭಾವಿ ಸಭೆ ನಡೆಯಿತು.