ಜು.11ರಂದು ರಾಷ್ಟ್ರೀಯ ಲೋಕ ಆದಾಲತ್
ಹೊಸಪೇಟೆ(ವಿಜಯನಗರ): ತಾಲೂಕು ಕಾನೂನು ಸೇವಾ ಸಮಿತಿಯಿಂದ ಜು.11ರಂದು ಬೆಳಗ್ಗೆ 10ರಿಂದ ಸಂಜೆ 5ರವರೆಗೆ ನಗರದ ಜಿಲ್ಲಾನ್ಯಾಯಲಯದ ಆವರಣದಲ್ಲಿರಾಷ್ಟ್ರೀಯ ಲೋಕ ಆದಾಲತ್ ಹಮ್ಮಿಕೊಳ್ಳಲಾಗಿದೆ. ಸಾರ್ವಜನಿಕರು ತಮ್ಮ ವ್ಯಾಜ್ಯಪೂರ್ವ, ರಾಜಿಯಾಗಬಹುದಾದ ಅಪರಾಧಿಕ ಪ್ರಕರಣ, ಚೆಕ್ ಅಮಾನ್ಯ, ಬ್ಯಾಂಕ್ ಪ್ರಕರಣ, ಮೋಟಾರು ವಾಹನ ಅಪಘಾತ ಪರಿಹಾರ, ವೈವಾಹಿಕ ಅಥವಾ ಕೌಟುಂಬಿಕ, ಸಿವಿಲ್ ಹಾಗೂ ಇತರೆ ರಾಜಿಯಾಗಬಹುದಾದ ಪ್ರಕರಣಗಳನ್ನು ಅದಾಲತ್ ಮೂಲಕ ಇತ್ಯರ್ಥಗೊಳಿಸಿ ಕೊಳ್ಳಬಹುದು ಎಂದು ತಾಲೂಕು ಕಾನೂನು ಸೇವಾ ಸಮಿತಿ ಸದಸ್ಯ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿತಿಳಿಸಿದ್ದಾರೆ.

