ವಿಕ ಸುದ್ದಿಲೋಕ ಬಂಟ್ವಾಳ
ದಕ್ಷಿಣ ಕನ್ನಡ ಜಿಲ್ಲಾಗ್ಯಾರೇಜ್ ಮಾಲೀಕರ ಸಂಘ ಇದರ ಬಂಟ್ವಾಳ ವಲಯದ ರಜತ ಸಂಭ್ರಮ, ವಾರ್ಷಿಕ ಮಹಾಸಭೆ ಮತ್ತು ಪದಗ್ರಹಣ ಸಮಾರಂಭ ಬಿ.ಸಿ.ರೋಡಿನ ಸ್ಪರ್ಶಾಕಲಾ ಮಂದಿರದಲ್ಲಿಸಂಘದ ಅಧ್ಯಕ್ಷ ಸುಧೀರ್ ಪೂಜಾರಿ ಅಧ್ಯಕ್ಷತೆಯಲ್ಲಿನಡೆಯಿತು.
2026 ರಿಂದ 2028ನೇ ಸಾಲಿಗೆ ಅಧ್ಯಕ್ಷರಾಗಿ ಗಣೇಶ್ ಸುವರ್ಣ ತುಂಬೆ, ಕಾರ್ಯದರ್ಶಿಯಾಗಿ ಉಮೇಶ್ ಶೆಟ್ಟಿ, ಕೋಶಾಧಿಕಾರಿಯಾಗಿ ರಮೇಶ್ ಭಂಡಾರಿ ಆಯ್ಕೆಯಾಗಿದ್ದು ಅಧಿಕಾರ ಸ್ವೀಕರಿಸಿದರು.
ಬಳಿಕ ಸಭಾ ಕಾರ್ಯಕ್ರಮವನ್ನು ಉದ್ಯಮಿ ಶಶಿಧರ ಪೈ ಉದ್ಘಾಟಿಸಿದರು. ವಕೀಲ ಅಶ್ವನಿ ಕುಮಾರ್ ರೈ, ಬಂಟ್ವಾಳ ಕಾರ್ಮಿಕ ನಿರೀಕ್ಷಕಿ ಲವೀನಾ ಡಿಸೋಜಾ, ಬಂಟ್ವಾಳ ಸಂಚಾರಿ ಪೊಲೀಸ್ ಠಾಣೆಯ ಉಪನಿರೀಕ್ಷಕ ಆದಶ್ ರ್ ಎಂ. ಎಸ್ . ಮಾತನಾಡಿದರು. ಸಂಘದ ಸದಸ್ಯರ ಹಾಗೂ ಗ್ಯಾರೇಜ್ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು. ಕ್ರೀಡಾ ಸಾಧಕಿ ಸುಶ್ಮಿತಾ ಸೋಮನಾಥ ಸಾಲ್ಯಾನ್ ಅವರನ್ನು ಅಭಿನಂದಿಸಲಾಯಿತು. ಜಿಲ್ಲೆಯ ಹಿರಿಯ ಮೆಕಾನಿಕ್ ಶೋಭಾನಂದ ಅವರನ್ನು ಗೌರವಿಸಲಾಯಿತು. ತಾಲೂಕಿನ ಹಿರಿಯ ಮೆಕ್ಯಾನಿಕ್ ಸದಸ್ಯರನ್ನು ಸನ್ಮಾನಿಸಲಾಯಿತು. ಜಿಲ್ಲಾಸಂಘದಿಂದ ಬಂಟ್ವಾಳ ವಲಯಕ್ಕೆ ಆರ್ಥಿಕ ನೆರವು ಹಸ್ತಾಂತರಿಸಲಾಯಿತು.
ನಿವೃತ್ತ ಯೋಧ ಸತೀಶ್ ಸುವರ್ಣ ಅವರನ್ನು ಗೌರವಿಸಲಾಯಿತು. ಸಂಘದ ನೂತನ ಅಧ್ಯಕ್ಷ ಗಣೇಶ್ ಸುವರ್ಣ ಮಾತನಾಡಿ ಸಂಘ ಯಶಸ್ವಿಯಾಗಿ ಮುನ್ನಡೆಯಲು ಎಲ್ಲರ ಸಹಕಾರ ಕೋರಿದರು. ಉದ್ಯಮಿಗಳಾದ ಯೋಗೀಶ್ , ಸಂಘದ ಜಿಲ್ಲಾಧ್ಯಕ್ಷ ದಿನಕರ ಕುಲಾಲ್ , ದ.ಕ. ಗ್ಯಾರೇಜು ಮಾಲೀಕರ ಸೌಹಾರ್ಧ ಸಹಕಾರಿ ಸಂಘದ ಅಧ್ಯಕ್ಷ ಜನಾರ್ದನ ಅತ್ತಾವರ, ಜಿಲ್ಲಾಸಂಘದ ನಿರ್ದೇಶಕ ಜೆ.ಪುಂಡಲೀಕ ಸುವರ್ಣ, ಜಿಲ್ಲಾಸಂಘದ ಜತೆ ಕಾರ್ಯದರ್ಶಿ ಅಬ್ದುಲ್ ಮೊಯಿದ್ದಿನ್ ಉಪಸ್ಥಿತರಿದ್ದರು.ಸಂಘದ ಉಪಾಧ್ಯಕ್ಷ ಸಿದ್ದೀಕ್ ಮೆಲ್ಕಾರ್ ಸ್ವಾಗತಿಸಿದರು, ಗೌರವ ಸಲಹೆಗಾರ ಸುಧಾಕರ ಸಾಲ್ಯಾನ್ ಪ್ರಾಸ್ತವಿಕವಾಗಿ ಮಾತನಾಡಿದರು.ಕಾರ್ಯದರ್ಶಿ ರಾಜೇಶ್ ಕುಲಾಲ್ ವರದಿ ವಾಚಿಸಿದರು,ಕೋಶಾಧಿಕಾರಿ ಭಾಸ್ಕರ್ ಕುಲಾಲ್ ಲೆಕ್ಕ ಪತ್ರ ಮಂಡಿಸಿದರು. ರಂಗ ಕಲಾವಿದ ಎಚ್ಕೆ ನಯನಾಡು ಕಾರ್ಯಕ್ರಮ ನಿರೂಪಿಸಿದರು
ಚಿತ್ರ: 25ಬಿಎಚ್ ಗ್ಯಾರೇಜ್
ಗ್ಯಾರೇಜ್ ಮಾಲೀಕರ ಸಂಘದ ಪದಗ್ರಹಣ ಕಾರ್ಯಕ್ರಮ ಬಿ.ಸಿ.ರೋಡಿನ ಸ್ಪರ್ಶ ಕಲಾ ಮಂದಿರದಲ್ಲಿಆಯೋಜಿಸಿದ ವೇಳೆ ಪ್ರತಿಭಾ ಪುರಸ್ಕಾರ ನಡೆಯಿತು.

