ಕೃಷಿ ಉತ್ಪನ್ನಗಳನ್ನು ಎಪಿಎಂಸಿಯಲ್ಲೇ ಮಾರಾಟ ಮಾಡಿ

Contributed byarksubbarao@gmail.com|Vijaya Karnataka

ಅರಕಲಗೂಡು ಎಪಿಎಂಸಿ ಆವರಣದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಎ.ಮಂಜು ಗುದ್ದಲಿ ಪೂಜೆ ನೆರವೇರಿಸಿದರು. ರೈತರು ತಮ್ಮ ಉತ್ಪನ್ನಗಳನ್ನು ನೇರವಾಗಿ ಎಪಿಎಂಸಿ ಮೂಲಕ ಮಾರಾಟ ಮಾಡಲು ಈ ರಸ್ತೆ ನಿರ್ಮಾಣ ನೆರವಾಗಲಿದೆ. ಲಾರಿಗಳ ನಿಲುಗಡೆಗೆ ಪ್ರತ್ಯೇಕ ವ್ಯವಸ್ಥೆ ಮಾಡಲಾಗುವುದು ಎಂದು ಭರವಸೆ ನೀಡಿದರು. ಅಧಿಕಾರಿಗಳು ಹಾಗೂ ಗುತ್ತಿಗೆದಾರರಿಗೆ ಕಾಮಗಾರಿಯ ಗುಣಮಟ್ಟದ ಬಗ್ಗೆ ಸೂಚನೆ ನೀಡಿದರು.

farmers should choose direct sales in apmc for economic growth

ರೈತರಿಗೆ ಶಾಸಕ ಎ.ಮಂಜು ಸಲಹೆ

ವಿಕ ಸುದ್ದಿಲೋಕ ಅರಕಲಗೂಡು

ಪಟ್ಟಣದ ಎಪಿಎಂಸಿ ಆವರಣದಲ್ಲಿಸುಮಾರು ಒಂದು ಕೋಟಿ ರೂ. ವೆಚ್ಚದಲ್ಲಿಕೈಗೆತ್ತಿಕೊಳ್ಳಲಾಗಿರುವ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಎ.ಮಂಜು ಗುದ್ದಲಿ ಪೂಜೆ ನೆರವೇರಿಸಿದರು.

ಬಳಿಕ ಮಾತನಾಡಿದ ಅವರು,‘‘ ರೈತರು ತಮ್ಮ ಕೃಷಿ ಉತ್ಪನ್ನಗಳನ್ನು ಯಾವುದೇ ಮಧ್ಯವರ್ತಿಗಳಿಗೆ ಮಾರಾಟ ಮಾಡದೇ ನೇರವಾಗಿ ಎಪಿಎಂಸಿ ಮೂಲಕ ಮಾರಾಟ ಮಾಡಲು ಅನುಕೂಲ ಕಲ್ಪಿಸುವ ಉದ್ದೇಶದಿಂದ ಸುಸಜ್ಜಿತ ರಸ್ತೆ ನಿರ್ಮಾಣ ಕೈಗೆತ್ತಿಕೊಳ್ಳಲಾಗಿದೆ,’’ಎಂದು ತಿಳಿಸಿದರು.

‘‘ರೈತರು ಈ ಸೌಲಭ್ಯವನ್ನು ಸದುಪಯೋಗಪಡಿಸಿಕೊಳ್ಳಬೇಕು. ರಸ್ತೆ ಕಾಮಗಾರಿಯ ಗುಣಮಟ್ಟದ ರೀತಿಯಲ್ಲಿಪೂರ್ಣಗೊಳಿಸಬೇಕು. ಅಧಿಕಾರಿಗಳು ಹಾಗೂ ಗುತ್ತಿಗೆದಾರರಿಗೆ,’’ಸೂಚನೆ ನೀಡಿದರು.

ಇದೇ ವೇಳೆ ಎಪಿಎಂಸಿ ಮುಂಭಾಗ ಲಾರಿಗಳ ನಿಲುಗಡೆ ವ್ಯವಸ್ಥೆ ಕಲ್ಪಿಸುವ ಉದ್ದೇಶದಿಂದ ಆರು ತಿಂಗಳಿಗಾಗಿ ಸುಮಾರು ಎರಡು ಕೋಟಿ ರೂ. ವೆಚ್ಚದಲ್ಲಿಪ್ರತ್ಯೇಕ ವ್ಯವಸ್ಥೆ ಮಾಡಲಾಗುವುದು,’’ಎಂದು ಭರವಸೆ ನೀಡಿದರು.

ನರಸೇಗೌಡ, ಕೃಷ್ಣೇಗೌಡರು, ದಿವಾಕರ್ , ಪುಟ್ಟರಾಜಣ್ಣ, ಮರಡಿ ಉಪೇಂದ್ರ, ಗ್ರಾಮದ ಹಿರಿಯರು, ಮುಖಂಡರು ಹಾಜರಿದ್ದರು.

ಫೋಟೊ

ಅರಕಲಗೂಡು ಪಟ್ಟಣದ ಎಪಿಎಂಸಿ ಆವರಣದಲ್ಲಿರಸ್ತೆ ಅಭಿವೃದ್ಧಿ ಕಾಮಗಾರಿ ಉದ್ಘಾಟನಾ ಕಾರ ್ಯಕ್ರಮದಲ್ಲಿಶಾಸಕ ಎ.ಮಂಜು ಮಾತನಾಡಿದರು.