ವಿಕ ಸುದ್ದಿಲೋಕ ಪುತ್ತೂರು
ಸಂತ ಫಿಲೋಮಿನಾ ಪದವಿಪೂರ್ವ ಕಾಲೇಜಿನಲ್ಲಿ 2026-27ರ ಶೈಕ್ಷಣಿಕ ವರ್ಷದ ಪ್ರಾರಂಭೋತ್ಸವ ಸೋಮವಾರ ಕಾಲೇಜು ಸಭಾಂಗಣದಲ್ಲಿನಡೆಯಿತು.
ಮುಖ್ಯ ಅತಿಥಿ, ಮಾಯಿದೆ ದೇವುಸ್ ಶಿಕ್ಷಣ ಸಂಸ್ಥೆಯ ಸಂಚಾಲಕ ರೆ.ಫಾ.ಡಾ.ಜೋನ್ ಬ್ಯಾಪ್ಟಿಸ್ಟ್ ಸಲ್ದಾನ್ಹಾ ಪ್ರಥಮ ಪದವಿಪೂರ್ವ ತರಗತಿಗಳನ್ನು ಉದ್ಘಾಟಿಸಿ ಮಾತನಾಡಿ, ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜು ನಿಮಗೆ ಬೇಕಾದ ಎಲ್ಲಮೂಲ ಸೌಕರ್ಯಗಳನ್ನು ನೀಡಲಿದೆ. ಈ ಕಾಲೇಜಿನಲ್ಲಿಕಲಿತಿರುವ ವಿದ್ಯಾರ್ಥಿಗಳು ನಾನಾ ಕ್ಷೇತ್ರಗಳಲ್ಲಿಗಣನೀಯ ಸಾಧನೆ ಮಾಡಿದ್ದು, ನೀವು ಕೂಡ ವಿದ್ಯಾಭ್ಯಾಸದಲ್ಲಿಯಶಸ್ಸು ಪಡೆದು ದೇಶ ಕಟ್ಟುವಲ್ಲಿ ಕೊಡುಗೆ ನೀಡಬೇಕು ಎಂದರು.
ಕಾಲೇಜು ಶಿಕ್ಷಣ ಕೇವಲ ಪುಸ್ತಕದ ಜ್ಞಾನ ಮಾತ್ರವಲ್ಲದೆ, ವಿದ್ಯಾರ್ಥಿಗಳು ಸಾಂಸ್ಕೃತಿಕ ಮತ್ತು ಪಠ್ಯೇತರ ಚಟುವಟಿಕೆಗಳಲ್ಲೂಭಾಗವಹಿಸಬೇಕು. ಕಾಲೇಜಿನಲ್ಲಿ ದೈಹಿಕ ಶಿಕ್ಷಣಕ್ಕೂ ಸಮಾನ ಪ್ರಾಧಾನ್ಯತೆ ನೀಡುತ್ತೇವೆ. ಎಲ್ಲರೂ ಕಾಲೇಜಿನ ಸೌಕರ್ಯಗಳನ್ನು ಉಪಯೋಗಿಸಿಕೊಂಡು ಉತ್ತಮ ಅಂಕಗಳೊಂದಿಗೆ ಉತ್ತೀರ್ಣರಾಗುವುದಲ್ಲದೆ ಜೀವನದಲ್ಲಿಯಶಸ್ಸು ಸಾಧಿಸಬೇಕೆಂದರು.
ಎಸ್ ಎಸ್ ಎಲ್ ಸಿಯಲ್ಲಿಅತೀ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು. ಕಾಲೇಜಿನ ವಾರ್ಷಿಕ ಸಂಚಿಕೆ ಫಿಲೋ ದರ್ಶನ ಬಿಡುಗಡೆ ಮಾಡಲಾಯಿತು.
ಶಿಕ್ಷಕ - ರಕ್ಷಕ ಸಂಘದ ಉಪಾಧ್ಯಕ್ಷೆ ದಿವ್ಯಾ ರೈ ಉಪಸ್ಥಿತರಿದ್ದರು. ಕಾಲೇಜಿನ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಉಪಸ್ಥಿತರಿದ್ದರು. ಪ್ರಿನ್ಸಿಪಾಲ್ ರೆ.ಫಾ. ಅಶೋಕ್ ರಾಯನ್ ಕ್ರಾಸ್ತಾ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಪ್ರದರ್ಶನ ಕಲಾ ಸಂಘದ ವಿದ್ಯಾರ್ಥಿಗಳು ಪ್ರಾರ್ಥಿಸಿದರು. ಉಪನ್ಯಾಸಕ ಹರ್ಷಿತ್ ಕುಮಾರ್ ಸ್ವಾಗತಿಸಿದರು. ಅವಿನಾ ಮಾಡ್ತಾ ವಂದಿಸಿದರು. ಸುಮಾ ಡಿ. ಕಾರ್ಯಕ್ರಮ ನಿರೂಪಿಸಿದರು.
ಫೋಟೋ: 25ಪಿ-ಪ್ರಾರಂಭ
ಪುತ್ತೂರಿನ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನಲ್ಲಿ ಕಾಲೇಜು ಪ್ರಾರಂಭೋತ್ಸವ ಸೋಮವಾರ ನಡೆಯಿತು.

