ವಿಕ ಸುದ್ದಿಲೋಕ ಭಾಲ್ಕಿ ರಾಜ್ಯದಲ್ಲಿಹೊಸದಾಗಿ ರಚನೆ ಆಗಲಿರುವ ಕಾಂಗ್ರೆಸ್ ಸರಕಾರದಲ್ಲಿಅರಣ್ಯ ಇಲಾಖೆ ಸಚಿವರಾಗಿ ಮತ್ತು ಬೀದರ್ ಜಿಲ್ಲಾಉಸ್ತುವಾರಿ ಸಚಿವರಾಗಿ ಯಶಸ್ವಿಯಾಗಿ ಕರ್ತವ್ಯ ನಿರ್ವಹಿಸಿರುವ ಭಾಲ್ಕಿ ಕ್ಷೇತ್ರದ ಶಾಸಕ ಈಶ್ವರ ಖಂಡ್ರೆ ಅವರಿಗೆ ಉಪ ಮುಖ್ಯಮಂತ್ರಿ ಹುದ್ದೆ ನೀಡಬೇಕು ಎಂದು ಬಸವಕಲ್ಯಾಣ ಅನುಭವ ಮಂಟಪದ ಅಧ್ಯಕ್ಷ ನಾಡೋಜ ಡಾ.ಬಸವಲಿಂಗ ಪಟ್ಟದ್ದೇವರು ಒತ್ತಾಯಿಸಿದ್ದಾರೆ. ರಾಜ್ಯದಲ್ಲಿಕಳೆದ ಮೂರು ವರ್ಷಗಳಿಂದ ಮಾಜಿ ಸಿಎಂ ಸಿದ್ದರಾಮಯ್ಯ ನೇತೃತ್ವದ ಸರಕಾರದಲ್ಲಿಖಂಡ್ರೆ ಅವರು ಅತ್ಯುತ್ತಮವಾಗಿ ಕಾರ್ಯನಿರ್ವಹಿಸಿದ್ದಾರೆ. ವಿನೂತನ ಯೋಚನೆ ಮತ್ತು ಯೋಜನೆಯಿಂದ ಅರಣ್ಯ ಇಲಾಖೆಗೆ ಹೊಸ ಆಯಾಮ ನೀಡಿದ್ದಾರೆ. ಬೀದರ್ ಜಿಲ್ಲಾಉಸ್ತುವಾರಿ ಸಚಿವರಾಗಿ ಜಿಲ್ಲೆಯ ಅಭಿವೃದ್ಧಿಗೆ ಯೋಜನೆಗಳನ್ನು ರೂಪಿಸಿ ಅನುಷ್ಠಾನಗೊಳಿಸುವ ಪ್ರಯತ್ನ ಮಾಡಿದ್ದಾರೆ ಎಂದು ಹೇಳಿದ್ದಾರೆ.ರಾಜ್ಯದಲ್ಲಿಲಿಂಗಾಯತ ಸಮುದಾಯದ ಪ್ರಭಾವಿ ನಾಯಕರಾಗಿ ಗುರುತಿಸಿ ಕೊಂಡಿದ್ದಾರೆ. ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರಾಗಿ ಸಮುದಾಯವನ್ನು ಸಂಘಟಿಸುವ ಕೆಲಸ ಮಾಡುತ್ತಿದ್ದಾರೆ. ಇದುವರೆಗೂ ಸರಕಾರ ಮತ್ತು ಪಕ್ಷ ನೀಡಿರುವ ಎಲ್ಲಹುದ್ದೆಗಳಿಗೆ ಗೌರವ ತಂದು ಕೊಡುವ ಕೆಲಸ ಮಾಡಿದ್ದಾರೆ. ಈಗಾಗಲೇ ಸತತ ಎರಡು ದಶಕಗಳಿಂದ ಶಾಸಕರಾಗಿ ಮತ್ತು ಎರಡು ಬಾರಿ ಸಚಿವರಾಗಿ, ರಾಜ್ಯ ಕಾಂಗ್ರೆಸ್ ಪಕ್ಷದ ಕಾರ್ಯಾಧ್ಯಕ್ಷರಾಗಿ ಅತ್ಯುತ್ತಮವಾಗಿ ಸೇವೆ ಸಲ್ಲಿಸಿದ್ದಾರೆ. ರಾಜ್ಯದಲ್ಲಿಲಿಂಗಾಯತ ಅತಿದೊಡ್ಡ ಸಮುದಾಯವಾಗಿದೆ. ಹೀಗಾಗಿ ಹಿರಿತನ,ಅನುಭವ, ಲಿಂಗಾಯತ ಸಮುದಾಯವನ್ನು ಪರಿಗಣಿಸಿ ಈಶ್ವರ ಖಂಡ್ರೆ ಅವರನ್ನು ಹೊಸ ಸರಕಾರದಲ್ಲಿಡಿಸಿಎಂ ಹುದ್ದೆ ನೀಡುವುದರ ಜತೆಗೆ ಅತ್ಯುತ್ತಮಖಾತೆಯನ್ನು ನೀಡಬೇಕು ಎಂದು ಪ್ರಕಟಣೆ ಮೂಲಕ ತಿಳಿಸಿದ್ದಾರೆ.

