ಯಲ್ಲಮ್ಮನಗುಡ್ಡದ ಸಮಗ್ರ ಅಭಿವೃದ್ಧಿಗೆ ಆದ್ಯತೆ
ಬೆಳಗಾವಿ: ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿಸವದತ್ತಿ ಶಾಸಕ ವಿಶ್ವಾಸ ವೈದ್ಯ ಅಧ್ಯಕ್ಷತೆಯಲ್ಲಿ ಮೇ 27ರಂದು ಜರುಗಿದ ಶ್ರೀ ರೇಣುಕಾ ಯಲ್ಲಮ್ಮ ದೇವಿ ಅಭಿವೃದ್ಧಿ ಪ್ರಾಧಿಕಾರದ ಸಭೆಯಲ್ಲಿದೇವಸ್ಥಾನಕ್ಕೆ ಬರುವ ಭಕ್ತರಿಗೆ ಮೂಲಸೌಲಭ್ಯ ಒದಗಿಸುವ ಕುರಿತು ಚರ್ಚಿಸಲಾಯಿತು.
ಈ ವೇಳೆ ಮಾತನಾಡಿದ ಶಾಸಕರು, ‘ಸವದತ್ತಿ ತಾಲೂಕಿನ ಯಲ್ಲಮ್ಮ ಕ್ಷೇತ್ರಕ್ಕೆ ವರ್ಷಪೂರ್ತಿ ಅಪಾರ ಭಕ್ತಾದಿಗಳು ಆಗಮಿಸುತ್ತಾರೆ. ಹೀಗಾಗಿ ಬರುವ ಭಕ್ತರಿಗೆ ಸುಸಜ್ಜಿತ ಮೂಲಸೌಕರ್ಯ ಕಲ್ಪಿಸುವುದು ಮತ್ತು ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಪ್ರಾಧಿಕಾರದಿಂದ ಮೊದಲ ಆದ್ಯತೆ ನೀಡಲಾಗಿದೆ. ಅಧಿಕಾರಿಗಳು ಪ್ರತಿಯೊಂದು ಕಾರ್ಯಗಳನ್ನು ನಿಗದಿತ ಅವಧಿಯಲ್ಲಿಪೂರ್ಣಗೊಳಿಸಬೇಕು,’ ಎಂದರು.
ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಮಾತನಾಡಿ, ‘ಸವದತ್ತಿ ಶ್ರೀಕ್ಷೇತ್ರಕ್ಕೆ ಬರುವ ಭಕ್ತರ ಅನುಕೂಲಕ್ಕಾಗಿ ಕುಡಿಯುವ ನೀರು, ಶೌಚಾಲಯ ವ್ಯವಸ್ಥೆ, ರಸ್ತೆ ಅಭಿವೃದ್ಧಿ , ಸುರಕ್ಷತೆ ಹಾಗೂ ಸುಗಮ ಸಂಚಾರಕ್ಕೆ ಸೂಕ್ತ ಕ್ರಮ ಕೈಗೊಳ್ಳಲಾಗಿದೆ. ಕ್ಷೇತ್ರದಲ್ಲಿಭಕ್ತರಿಗೆ ಯಾವುದೇ ಸಮಸ್ಯೆಯಾಗದಂತೆ ಪ್ರಾಧಿಕಾರದ ಅಧಿಕಾರಿಗಳು ಕಾರ್ಯನಿರ್ವಹಿಸಬೇಕು,’ಎಂದು ಸೂಚಿಸಿದರು.

