ಚಿಕ್ಕಬಳ್ಳಾಪುರ: ರಾರ ಯಂಪ್ ಯೋಜನೆಯಡಿ ಸಣ್ಣ ಕೈಗಾರಿಕೆ ಘಟಕಗಳನ್ನು ಬಲಪಡಿಸುವ ಉದ್ದೇಶದಿಂದ ಸಣ್ಣ ಕೈಗಾರಿಕೆಗಳ ಉತ್ಪನ್ನಗಳನ್ನು ಮಾರುಕಟ್ಟೆ ಮಾಡಲು, ಕೈಮಗ್ಗ ಗುರುತು ಹಾಗೂ ರೇಷ್ಮೆ ಗುರುತಿನ ಉತ್ಪನ್ನಗಳ ಬಿಐಎಸ್ ಅಥವಾ ಐಎಸ್ ಒ ಮಾಡಲು ಭರಿಸುವ ವೆಚ್ಚವನ್ನು ಮರುಪಾವತಿಸಲು ರಾಜ್ಯ ಸಹಕಾರಿ ಕೈಮಗ್ಗ ನೇಕಾರರ ಮಹಾಮಂಡಳಿಯನ್ನು ಅನುಷ್ಠಾನ ಸಂಸ್ಥೆಯನ್ನಾಗಿ ನೇಮಿಸಲಾಗಿದೆ. ಆಸಕ್ತರು ಬೆಂಗಳೂರಿನ ಕಾವೇರಿ ಹ್ಯಾಂಡ್ ಲೂಮ್ಸ್ ಸಂಸ್ಥೆಯನ್ನು ಸಂಪರ್ಕಿಸಬಹುದು. ಮಾಹಿತಿಗೆ ಕೈಮಗ್ಗ ಮತ್ತು ಜವಳಿ ಇಲಾಖೆಯ ದೂರವಾಣಿ ಸಂಖ್ಯೆ: 08156-277031, 9945594959, 8971754927, 9986392953ಗೆ ಇಲ್ಲಿಸಂಪರ್ಕಿಸಬಹುದು ಎಂದು ಕೈಮಗ್ಗ ಮತ್ತು ಜವಳಿ ಇಲಾಖೆ ಉಪನಿರ್ದೇಶಕರು ತಿಳಿಸಿದ್ದಾರೆ.

