ಧರ್ಮಸ್ಥಳದಲ್ಲಿಪತ್ತನಾಜೆ ಪೂಜೆ
ಧರ್ಮಸ್ಥಳ : ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿಪತ್ತನಾಜೆ ಪ್ರಯುಕ್ತ ಮೇ. 25ರಂದು ಶ್ರೀ ಮಂಜುನಾಥ ಸ್ವಾಮಿ ಸನ್ನಿಧಿಯಲ್ಲಿವಿಶೇಷ ರಂಗಪೂಜೆ ನೆರವೇರಿತು.
ಬಳಿಕ ಶ್ರೀ ದೇವರ ಉತ್ಸವಮೂರ್ತಿಯ ಬಲಿ ಉತ್ಸವ , ವಸಂತ ಪೂಜೆ, ಅಷ್ಟಾವಧಾನ ಸೇವೆ ಹಾಗೂ ಧ್ವಜಮರ ಅವರೋಹಣ ವಿಧಿವಿಧಾನಗಳೊಂದಿಗೆ ಉತ್ಸವಮೂರ್ತಿಯು ಗರ್ಭಗುಡಿಗೆ ಪ್ರವೇಶಿಸುವ ಮೂಲಕ ಪ್ರಸಕ್ತ ಸಾಲಿನ ವಾರ್ಷಿಕ ವಿಶೇಷ ಸೇವೆಗಳು ಮತ್ತು ಉತ್ಸವಗಳು ಸಮಾಪ್ತಿಗೊಂಡವು. ಕಾರ್ತಿಕ ಮಾಸದ ದೀಪೋತ್ಸವದೊಂದಿಗೆ ಎಂದಿನಂತೆ ವಿಶೇಷ ಸೇವೆಗಳು ಹಾಗೂ ಉತ್ಸವಗಳು ಪುನರಾರಂಭಗೊಳ್ಳಲಿವೆ.
ಯಕ್ಷಗಾನ ಮೇಳದ ತಿರುಗಾಟ ಸಮಾಪನ:
ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕೃಪಾಪೋಷಿತ ಯಕ್ಷಗಾನ ಮಂಡಳಿಯ ಪ್ರಸಕ್ತ ಸಾಲಿನ ವಾರ್ಷಿಕ ತಿರುಗಾಟವು ಸಮಾಪನಗೊಂಡಿತು. ಈ ಅಂಗವಾಗಿ ಮೇಳದ ಮಹಾಗಣಪತಿ ದೇವರಿಗೆ ಧರ್ಮಸ್ಥಳದ ಮಂಜುಕೃಪಾದಲ್ಲಿಮಧ್ಯಾಹ್ನ ಗಣಯಾಗ ಹಾಗೂ ಮಹಾಪೂಜೆ ನೆರವೇರಿಸಲಾಯಿತು.
---
ಚಿತ್ರ ವಿವರ-
ಶ್ರೀದೇವರ ಉತ್ಸವಮೂರ್ತಿಯ ಬಲಿ ಉತ್ಸವ, ವಸಂತ ಪೂಜೆ, ಅಷ್ಟಾವಧಾನ ಸೇವೆ ಹಾಗೂ ಧ್ವಜಮರ ಅವರೋಹಣ ಕಾರ್ಯಕ್ರಮಗಳು ಜರುಗಿದವು.

