ವಿಕ ಸುದ್ದಿಲೋಕ ಮೂಲ್ಕಿ
ನಿರಂತರ ಅಧ್ಯಯನ ಮತ್ತು ಅಧ್ಯಾಪನವು ಮಹಾಯಜ್ಞಕ್ಕೆ ಸಮನಾಗಿದೆ. ನಮ್ಮ ಸನಾತನ ಸುಸಂಸ್ಕೃತ ಸಂಸ್ಕೃತಿಯನ್ನು ಆಚಾರ ವಿಚಾರಗಳನ್ನು ಯುವ ಪೀಳಿಗೆಗೆ ಮುಟ್ಟಿಸುವ ಕಾರ್ಯ ದೇವರ ಸೇವೆಗೆ ಸಮನಾಗಿದೆ ಎಂದು ಶ್ರೀ ಕಾಶೀ ಮಠಾಧೀಶ ಶ್ರೀ ಸಂಯಮೀಂದ್ರ ತೀರ್ಥ ಸ್ವಾಮೀಜಿ ಹೇಳಿದರು.
ಮೂಲ್ಕಿ ಶ್ರೀ ವೆಂಕಟರಮಣ ದೇವಸ್ಥಾನಕ್ಕೆ ಶುಕ್ರವಾರ ಆಗಮಿಸಿ ದೇವರ ಭೇಟಿಯ ಬಳಿಕ ದೇವಳದ ವ್ಯಾಸಮಹರ್ಷಿ ಸಂಸ್ಕೃತ ವೇದ ಪಾಠ ಶಾಲೆಗೆ ಭೇಟಿ ನೀಡಿ ದೇವರಿಗೆ ಪೂಜೆ ಸಲ್ಲಿಸಿ ಆಶೀರ್ವಚನ ನೀಡಿದರು.
ಗೌಡ ಸಾರಸ್ವತ ಬ್ರಾಹ್ಮಣ ಸಮಾಜವು ಅತ್ಯಂತ ಸುಸಂಸ್ಕೃತ ತಳಹದಿಯನ್ನು ಹೊಂದಿದೆ. ಅದನ್ನು ಮುಂದಿನ ಪೀಳಿಗೆಗೆ ಯಥಾವತ್ತಾಗಿ ನೀಡುವ ಕಾರ್ಯ ನಡೆಯಬೇಕು. ಮೂಲ್ಕಿಯ ಶ್ರೀ ವ್ಯಾಸಮಹರ್ಷಿ ವಿದ್ಯಾಪೀಠದಿಂದ ವಿದ್ಯಾರ್ಥಿಗಳಿಗೆ ಉತ್ತಮ ಜ್ಞಾನ ನೀಡುವ ಮೂಲಕ ಸುಸಂಸ್ಕೃತ ಸಮಾಜ ಬೆಳೆಯಬೇಕು ಎಂದು ಹಾರೈಸಿದರು.
ಶ್ರೀ ವ್ಯಾಸ ಮಹರ್ಷಿ ವಿದ್ಯಾಪೀಠದ ಆಡಳಿತ ಸಮಿತಿಯಿಂದ ಸ್ವಾಮೀಜಿಯವರಿಗೆ ಪಾದಪೂಜೆ ನಡೆಯಿತು. ಬಳಿಕ ಸಾಧಕರನ್ನು ವಿಶೇಷವಾಗಿ ಸನ್ಮಾನಿಸಲಾಯಿತು. ಶ್ರೀ ಕ್ಷೇತ್ರದ ಅರ್ಚಕ ವೃಂದ, ಆಡಳಿತ ಸಮಿತಿ, ಭಜಕ ವೃಂದ ಹಾಜರಿದ್ದರು. ಶ್ರೀಕ್ಷೇತ್ರದ ಮೊಕ್ತೇಸರ ಅತುಲ್ ಕುಡ್ವಾ ಸ್ವಾಗತಿಸಿ ಪ್ರಸ್ತಾವಿಸಿದರು.
ಫೋಟೋ:30ಎಮ್ ಎಲ್ ಕೆ1
ಕ್ಯಾ: ಮೂಲ್ಕಿ ಶ್ರೀ ವೆಂಕಟರಮಣ ದೇವಳದಲ್ಲಿಶ್ರೀ ಕಾಶೀ ಮಠಾಧೀಶ ಶ್ರೀಮದ್ ಸಂಯಮೀಂದ್ರ ತೀರ್ಥ ಸ್ವಾಮೀಜಿ ಆಶೀರ್ವಚನ ನೀಡಿದರು.

