ಆತ್ಮವಿಶ್ವಾಸ ತುಂಬುವ ಶಿಕ್ಷಣ ಅವಶ್ಯ

Contributed bysavinasha46@gmail.com|Vijaya Karnataka

ಕೆ.ಆರ್‌.ನಗರದಲ್ಲಿ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಸಮಾರಂಭ ನಡೆಯಿತು. ಶಾಸಕ ಡಿ.ರವಿಶಂಕರ್‌ ಮಾತನಾಡಿ, ವಿದ್ಯಾರ್ಥಿಗಳಿಗೆ ಸಂಸ್ಕಾರಯುತ, ಮೌಲ್ಯಾಧಾರಿತ ಶಿಕ್ಷಣದ ಜತೆಗೆ ಸವಾಲುಗಳನ್ನು ಎದುರಿಸುವ, ಆತ್ಮವಿಶ್ವಾಸ ತುಂಬುವ ಶಿಕ್ಷಣ ದೊರೆಯಬೇಕಿದೆ ಎಂದರು. ಸಾಮಾಜಿಕ ಜಾಲತಾಣಗಳ ಹಾವಳಿಯಿಂದ ದೂರವಿರಲು ಸಲಹೆ ನೀಡಿದರು. ತಾಲೂಕು ಶೈಕ್ಷಣಿಕ ಸಾಧನೆ ಬಗ್ಗೆಯೂ ಚರ್ಚಿಸಲಾಯಿತು.

essential empowering education new challenges for students

ಆತ್ಮವಿಶ್ವಾಸ ತುಂಬುವ ಶಿಕ್ಷಣ ಅವಶ್ಯ

* ಶಾಸಕ ಡಿ.ರವಿಶಂಕರ್ ಅಭಿಮತ

* ಕೆ.ಆರ್ .ನಗರದಲ್ಲಿಪ್ರತಿಭಾ ಪುರಸ್ಕಾರ

ವಿಕ ಸುದ್ದಿಲೋಕ ಕೆ.ಆರ್ .ನಗರ

ವಿದ್ಯಾರ್ಥಿಗಳಿಗೆ ಸಂಸ್ಕಾರಯುತ, ಮೌಲ್ಯಾಧಾರಿತ ಶಿಕ್ಷಣದ ಜತೆಗೆ ಸವಾಲುಗಳನ್ನು ಎದುರಿಸುವ, ಆತ್ಮವಿಶ್ವಾಸ ತುಂಬುವ ಶಿಕ್ಷಣ ದೊರೆಯಬೇಕಿದೆ ಎಂದು ಶಾಸಕ ಡಿ.ರವಿಶಂಕರ್ ಅಭಿಪ್ರಾಯಪಟ್ಟರು.

ಪಟ್ಟಣದ ಸರಕಾರಿ ಪ್ರಥಮ ದರ್ಜೆ ಕಾಲೇಜು ಸಭಾಂಗಣದಲ್ಲಿಹಮ್ಮಿಕೊಂಡಿದ್ದ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿಯಲ್ಲಿಉತ್ತಮ ಫಲಿತಾಂಶ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ಅಭಿನಂದನಾ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.

‘‘ಈ ಬಾರಿ ತಾಲೂಕಿನಲ್ಲಿನಿರೀಕ್ಷಿಸಿದ ಫಲಿತಾಂಶ ಪಡೆಯಲು ಸಾಧ್ಯವಾಗಿಲ್ಲ. ಆದರೆ, ಮಕ್ಕಳಿಗೆ ಗುಣಾತ್ಮಕ ಶಿಕ್ಷಣ ನೀಡಿರುವುದು ಅಭಿನಂದನೀಯ. ಇದಕ್ಕಾಗಿ ಶಿಕ್ಷಣ ಇಲಾಖೆಗೆ ಅಭಿನಂದನೆಗಳನ್ನು ಸಲ್ಲಿಸುತ್ತೇನೆ. ಈ ಬಾರಿಯ ಫಲಿತಾಂಶದಲ್ಲಿತಾಲೂಕು ಎಂಟನೇ ಸ್ಥಾನಕ್ಕೆ ಜಿಗಿದಿದ್ದು, ಮುಂದಿನ ವರ್ಷದ ಫಲಿತಾಂಶದಲ್ಲಿಮೊದಲ ಸ್ಥಾನಕ್ಕೆ ಬರಬೇಕಿದ್ದರೆ, ಈಗಿನಿಂದಲೇ ಸಿದ್ಧತೆ ಮಾಡಿಕೊಳ್ಳಬೇಕು,’’ ಎಂದರು.

‘‘ಇತ್ತೀಚಿನ ದಿನಗಳಲ್ಲಿವಿದ್ಯಾರ್ಥಿಗಳ ಕಲಿಕಾ ಸಾಮರ್ಥ್ಯವನ್ನು ಸಾಮಾಜಿಕ ಜಾಲತಾಣಗಳು ಕಿತ್ತುಕೊಳ್ಳುತ್ತಿದ್ದು, ಮಕ್ಕಳು ಮೊಬೈಲ್ ಬಳಕೆಯಿಂದ ಆದಷ್ಟು ದೂರವಿದ್ದು, ಉತ್ತಮ ಶಿಕ್ಷಣ ಪಡೆಯುವ ಮೂಲಕ ಉತ್ತಮ ಪ್ರಜೆಗಳಾಗಿ ರೂಪುಗೊಳ್ಳಬೇಕು,’’ ಎಂದು ಸಲಹೆ ನೀಡಿದರು.

ಕ್ಷೇತ್ರ ಶಿಕ್ಷಣಾಧಿಕಾರಿ ಆರ್ .ಕೃಷ್ಣಪ್ಪ ಮಾತನಾಡಿ, ‘‘ ನಮ್ಮ ತಾಲೂಕು ಈ ಬಾರಿಯ ಫಲಿತಾಂಶದಲ್ಲಿಶೇ.92.81ರಷ್ಟು ಸಾಧನೆ ಮಾಡಿದ್ದು, ಜಿಲ್ಲೆಯಲ್ಲಿಎಂಟನೇ ಸ್ಥಾನ ಪಡೆದಿದೆ. ಉನ್ನತ ಶ್ರೇಣಿಯಲ್ಲಿ398, ಪ್ರಥಮ ದರ್ಜೆಯಲ್ಲಿ1200, ದ್ವಿತೀಯ ದರ್ಜೆಯಲ್ಲಿ500 ಮಕ್ಕಳು ತೇರ್ಗಡೆ ಹೊಂದಿದ್ದು, ಒಂದೇ ವಿಷಯದಲ್ಲಿ165 ವಿದ್ಯಾರ್ಥಿಗಳು ಅನುತ್ತೀರ್ಣವಾಗಿರುವುದು ನೋವು ತಂದಿದೆ,’’ ಎಂದು ಬೇಸರ ವ್ಯಕ್ತಪಡಿಸಿದರು.

ಕಾರ್ಯಕ್ರಮದಲ್ಲಿಶಿಕ್ಷಣ ಇಲಾಖೆ ಉಪನಿರ್ದೇಶಕ ಉದಯ್ ಕುಮಾರ್ , ಬಾಲಕಿಯರ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಎಚ್ .ಕೆ. ಕೃಷ್ಣಯ್ಯ, ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿಗಳಾದ ವಿ.ಪಿ. ಕುಲದೀಪ್ , ಎನ್ . ರವಿಕುಮಾರ್ , ಕ್ಷೇತ್ರ ಸಮನ್ವಯಾಧಿಕಾರಿ ವೆಂಕಟೇಶ್ ಇನ್ನಿತರರು ಹಾಜರಿದ್ದರು.