ವಿದ್ಯಾರ್ಥಿಗಳನ್ನು ಓದುವತ್ತ ಪ್ರೋತ್ಸಾಹಿಸಿ, ಉತ್ತೇಜಿಸಿ

Contributed bynasirmnkodagu@gmail.com|Vijaya Karnataka

ಮಡಿಕೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಾಸಕ ಡಾ.ಮಂತರ್‌ ಗೌಡ ಅವರು ವಿದ್ಯಾರ್ಥಿಗಳನ್ನು ಓದಿನತ್ತ ಪ್ರೋತ್ಸಾಹಿಸುವಂತೆ ಶಿಕ್ಷಕರಿಗೆ ಸಲಹೆ ನೀಡಿದರು. ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ ಪಡೆದ ಕೊಡಗು ಜಿಲ್ಲೆಯ ಪ್ರೌಢಶಾಲೆಗಳ ಮುಖ್ಯಸ್ಥರಿಗೆ ಸಾಧನಸಿರಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ಶಿಕ್ಷಕರು ಮಕ್ಕಳನ್ನು ಕುಗ್ಗಿಸದೆ ಧನಾತ್ಮಕವಾಗಿ ಶಿಕ್ಷಣ ನೀಡಬೇಕು ಎಂದರು. ಶಿಕ್ಷಣ ಇಲಾಖೆ ಅಧಿಕಾರಿಗಳು ಹಾಗೂ ಕನ್ನಡಸಿರಿ ಸ್ನೇಹ ಬಳಗದವರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

legislators encouraged students to study in school education

ಶಾಸಕ ಡಾ.ಮಂತರ್ ಗೌಡ ಸಲಹೆ | ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿಶೇ.100 ಫಲಿತಾಂಶ ಪಡೆದ ಪ್ರೌಢಶಾಲೆಗಳ ಮುಖ್ಯಸ್ಥರಿಗೆ ಸಾಧನ ಸಿರಿ ಪ್ರದಾನ

ವಿಕ ಸುದ್ದಿಲೋಕ ಮಡಿಕೇರಿ

ಮಕ್ಕಳಿಗೆ ಒಳ್ಳೆಯ ಭವಿಷ್ಯ ರೂಪಿಸಿದ್ದಲ್ಲಿಸಮಾಜದಲ್ಲಿಉತ್ತಮ ಪ್ರಜೆಯಾಗಿ ಕಾಣಲು ಸಾಧ್ಯ. ಆ ನಿಟ್ಟಿನಲ್ಲಿಪೋಷಕರು ಮತ್ತು ಶಿಕ್ಷಕರ ಪಾತ್ರ ಅತೀ ಮುಖ್ಯವಾಗಿದೆ ಎಂದು ಶಾಸಕ ಡಾ.ಮಂತರ್ ಗೌಡ ಹೇಳಿದ್ದಾರೆ.

ಕನ್ನಡಸಿರಿ ಸ್ನೇಹ ಬಳಗ ವತಿಯಿಂದ 2025-26ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿಶೇ.100 ಫಲಿತಾಂಶ ಪಡೆದ ಕೊಡಗು ಜಿಲ್ಲೆಯ ಪ್ರೌಢಶಾಲೆಗಳ ಮುಖ್ಯಸ್ಥರಿಗೆ ನಗರದ ಗಾಂಧಿ ಭವನದಲ್ಲಿಶುಕ್ರವಾರ ಸಾಧನಸಿರಿ ಪ್ರಶಸ್ತಿ ಪ್ರದಾನ ಮಾಡಿ ಅವರು ಮಾತನಾಡಿದರು.

‘‘ಶಿಕ್ಷಕರು ಪ್ರತಿಯೊಬ್ಬ ವಿದ್ಯಾರ್ಥಿಯನ್ನು ಓದುವತ್ತ ಪ್ರೋತ್ಸಾಹಿಸಬೇಕು ಮತ್ತು ಉತ್ತೇಜನ ನೀಡಬೇಕು. ಅದನ್ನು ಬಿಟ್ಟು ಕುಗ್ಗಿಸುವ ಕೆಲಸ ಮಾಡಬಾರದು. ಇದರಿಂದ ವಿದ್ಯಾರ್ಥಿಗಳು ಮಾನಸಿಕ ಹಿಂಸೆಗೆ ತುತ್ತಾಗುವ ಸಾಧ್ಯತೆ ಇದೆ. ಆದ್ದರಿಂದ ಶಿಕ್ಷಕರು ಧನಾತ್ಮಕವಾಗಿ ಮಕ್ಕಳಿಗೆ ಶಿಕ್ಷಣ ನೀಡಬೇಕು,’’ ಎಂದು ಸಲಹೆ ನೀಡಿದರು.

‘‘ಜಿಲ್ಲೆಯಲ್ಲಿಶೇ.100ರಷ್ಟು ಫಲಿತಾಂಶ ಪಡೆದಿರುವ ಶಾಲೆಗಳ ಶಿಕ್ಷಕರನ್ನು, ಮುಖ್ಯ ಶಿಕ್ಷಕರನ್ನು ಗೌರವಿಸುತ್ತಿರುವುದು ಶ್ಲಾಘನೀಯ ಕಾರ್ಯವಾಗಿದೆ. ಆ ನಿಟ್ಟಿನಲ್ಲಿಶಿಕ್ಷಕರು, ಮುಖ್ಯೋಪಾಧ್ಯಾಯರು, ಶಿಕ್ಷಣ ಇಲಾಖೆ ಅಧಿ ಕಾರಿಗಳು ಹೀಗೆ ಎಲ್ಲರ ಪಾತ್ರ ಪ್ರಮುಖವಾಗಿದೆ. ಸಾಧಾರಣ ವಿದ್ಯಾರ್ಥಿಗಳನ್ನು ಇನ್ನಷ್ಟು ಪ್ರಗತಿಯತ್ತ ಕೊಂಡೊಯ್ಯಲು ಮಾನಿಟರಿಂಗ್ ಅಂಡ್ ಮೋಟಿವೇಷನ್ ಶಿಕ್ಷಣ ಮಾರ್ಗದರ್ಶಿ ಕಾರ್ಯಕ್ರಮ ಆಯೋಜಿಸುವಂತಾಗಬೇಕು,’’ ಎಂದು ಸಲಹೆ ಮಾಡಿದರು.

ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಬಸವರಾಜು ಮಾತನಾಡಿ, ‘‘ಜಿಲ್ಲೆಯಲ್ಲಿ103 ಶಾಲೆಗಳು ಶೇ.100 ರಷ್ಟು ಫಲಿತಾಂಶ ಪಡೆದಿರುವುದು ವಿಶೇಷವಾಗಿದ್ದು, 103 ರಲ್ಲಿಸರಕಾರಿ ಪ್ರೌಢ ಶಾಲೆಗಳು 38, ಅನುದಾನಿತ 11, ಅನುದಾನ ರಹಿತ 37 ಹಾಗೂ ವಸತಿ ಶಾಲೆಗಳು 17 ಸೇರಿ 103 ಶಾಲೆಗಳಲ್ಲಿಶೇ.100 ರಷ್ಟು ಫಲಿತಾಂಶ ಬಂದಿದೆ,’’ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಕನ್ನಡ ಸಿರಿ ಸ್ನೇಹ ಬಳಗದ ಅಧ್ಯಕ್ಷ ಬಿ.ಎಸ್ .ಲೋಕೇಶ್ ಸಾಗರ್ ಮಾತನಾಡಿ, ‘‘ಜಿಲ್ಲೆಯಲ್ಲಿಶಿಕ್ಷಣಕ್ಕೆ ಇನ್ನಷ್ಟು ಉತ್ತೇಜನ ನೀಡುವ ನಿಟ್ಟಿನಲ್ಲಿಶಿಕ್ಷಕರು ಹಾಗೂ ಮುಖ್ಯೋಪಾಧ್ಯಾಯರಿಗೆ ಬೆನ್ನು ತಟ್ಟುವ ಕೆಲಸ ಮಾಡಲಾಗುತ್ತಿದೆ. ಕನ್ನಡ ಭಾಷೆಗೆ ಆದ್ಯತೆ ನೀಡಿ ಶೇ.100ರಷ್ಟು ಫಲಿತಾಂಶ ಪಡೆದಿರುವ ಶಾಲೆಗಳನ್ನು ಪ್ರೋತ್ಸಾಹಿಸಲಾಗುತ್ತಿದೆ,’’ ಎಂದು ಹೇಳಿದರು.

‘‘ಇಂತಹ ಶಾಲೆಗಳಿಗೆ ಗ್ರಂಥಾಲಯ ಬಳಸಿಕೊಳ್ಳಲು ಅನುಕೂಲ ಮಾಡಲಾಗುತ್ತಿದೆ. ಇದೊಂದು ವಿಶಿಷ್ಟ ಕಾರ್ಯಕ್ರಮವಾಗಿದ್ದು, ಜಿಲ್ಲೆಯಲ್ಲಿಇನ್ನಷ್ಟು ಫಲಿತಾಂಶ ಉತ್ತಮಗೊಳ್ಳಬೇಕು. ಜೊತೆಗೆ ಗುಣಮಟ್ಟದ ಶಿಕ್ಷಣ ದೊರೆಯುವಂತಾಗಬೇಕು,’’ ಎಂದು ಹೇಳಿದರು.

ಕುಶಾಲನಗರ ರೋಟರಿ ಸಂಸ್ಥೆಯ ಅಸಿಸ್ಟೆಂಟ್ ಗವರ್ನರ್ ಎಂ.ಡಿ.ರಂಗಸ್ವಾಮಿ ಮಾತನಾಡಿದರು. ಡಯಟ್ ಉಪ ನಿರ್ದೇಶಕ ರಾಮಚಂದ್ರ ರಾಜೇ ಅರಸ್ , ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಶೇಖರ್ , ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಮಹೇಶ್ , ಎಂ.ಕೃಷ್ಣಪ್ಪ, ಟಿ.ಜೆ.ಅನಂದ್ , ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷ ಎಚ್ .ಜಿ.ಕುಮಾರ್ , ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ತಾಲೂಕು ಘಟಕದ ಅಧ್ಯಕ್ಷ ರವಿ ಕೃಷ್ಣ, ಟಿ.ಆರ್ .ರತ್ನಕುಮಾರ್ , ಡಿ.ಚಂದನ, ಇತರರು ಇದ್ದರು.

ಕಸಾಪ ಮಾಜಿ ಅಧ್ಯಕ್ಷ ಕುಡೆಕಲ್ ಸಂತೋಷ್ , ಮೂರ್ನಾಡು ಹಿರಿಯ ಸಾಹಿತಿ ಕಿಗ್ಗಾಲು ಗಿರೀಶ್ , ಮೊಣ್ಣಂಡ ಶೋಭ ಸುಬ್ಬಯ್ಯ ಇತರರು ಇದ್ದರು.

ಫೋಟೊ: ಒಆಏ22ಓ- ಂಆಂಓಂ ಖ ಖಂಊಂಖಿಊ

ಕ್ಯಾಪ್ಷನ್ : ನಗರದ ಗಾಂಧಿ ಭವನದಲ್ಲಿಶಾಸಕರಾದ ಮಂತರ್ ಗೌಡÜ ಅವರು ಸಾಧನಸಿರಿ ಪ್ರಶಸ್ತಿ ಪ್ರದಾನ ಮಾಡಿದರು.