ಶಿಕ್ಷಣ ಸಂಸ್ಥೆಗಳಿಗೆ ಗುರುತರ ಜವಾಬ್ದಾರಿ

Contributed byrajeshinamadar7@gmail.com|Vijaya Karnataka

ಮೈಲೇಶ್ವರದ ಶ್ರೀ ಮಾರುತಿ ಶಿಕ್ಷಣ ಸಂಸ್ಥೆಯ ಬ್ರಿಲಿಯಂಟ್ ಆಂಗ್ಲಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿನಿ ಗಂಗಾ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾಳೆ. ಈ ಹಿನ್ನೆಲೆಯಲ್ಲಿ ನಡೆದ ಸನ್ಮಾನ ಸಮಾರಂಭದಲ್ಲಿ ಶಾಸಕ ರಾಜುಗೌಡ ಪಾಟೀಲ ಮಾತನಾಡಿದರು. ಗ್ರಾಮೀಣ ಮಕ್ಕಳಿಗೆ ಶಿಕ್ಷಣ ಸಂಸ್ಥೆಗಳು ಆಶಾಕಿರಣವಾಗಿ ಬೆಳಗುತ್ತಿವೆ ಎಂದರು. ವಿದ್ಯಾರ್ಥಿಗಳು ಕಠಿಣ ಪರಿಶ್ರಮದಿಂದ ಗುರಿ ಸಾಧಿಸಬಹುದು ಎಂದು ತಿಳಿಸಿದರು.

student secured first place in sslc responsibility of educational institutions

ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿನಿಗೆ ಸನ್ಮಾನ

ಶಿಕ್ಷಣ ಸಂಸ್ಥೆಗಳಿಗೆ ಗುರುತರ ಜವಾಬ್ದಾರಿ

ವಿಕ ಸುದ್ದಿಲೋಕ ತಾಳಿಕೋಟೆ

‘‘ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣದ ಜತೆಗೆ ಉತ್ತಮ ಸಂಸ್ಕಾರ ನೀಡುವ ಗುರುತರ ಜವಾಬ್ದಾರಿ ಶಿಕ್ಷಣ ಸಂಸ್ಥೆಗಳ ಮೇಲಿದೆ’’ ಎಂದು ಶಾಸಕ ರಾಜುಗೌಡ ಪಾಟೀಲ ಹೇಳಿದರು.

ತಾಲೂಕಿನ ಮೈಲೇಶ್ವರ ಗ್ರಾಮದ ಶ್ರೀ ಮಾರುತಿ ಶಿಕ್ಷಣ ಸಂಸ್ಥೆ ಅಡಿ ನಡೆಯುತ್ತಿರುವ ಬ್ರಿಲಿಯಂಟ್ ಆಂಗ್ಲಮಾಧ್ಯಮ ಪ್ರೌಢಶಾಲೆಯಲ್ಲಿರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿನಿಯ ಸನ್ಮಾನ ಸಮಾರಂಭದಲ್ಲಿಅವರು ಮಾತನಾಡಿದರು.

‘‘ಚಿಕ್ಕ ಗ್ರಾಮದಲ್ಲಿಆರಂಭವಾದ ಬ್ರಿಲಿಯಂಟ್ ಶಿಕ್ಷಣ ಸಂಸ್ಥೆ ಇಂದು ಗ್ರಾಮೀಣ ಮಕ್ಕಳಿಗೆ ಆಶಾಕಿರಣವಾಗಿ ಬೆಳಗುತ್ತಿದೆ. ವಿದ್ಯಾರ್ಥಿಗಳು ಕಠಿಣ ಪರಿಶ್ರಮದಿಂದ ಯಾವುದೇ ಗುರಿಯನ್ನು ಸಾಧಿಸಬಹುದು ಎಂಬುದಕ್ಕೆ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿರಾಜ್ಯಕ್ಕೆ ಪ್ರಥಮ ರಾರ ಯಂಕ್ ಪಡೆದ ಇಲ್ಲಿನ ವಿದ್ಯಾರ್ಥಿನಿ ಗಂಗಾ ಉತ್ತಮ ಉದಾಹರಣೆ. ಈ ಸಾಧನೆ ಇತರ ವಿದ್ಯಾರ್ಥಿಗಳಿಗೆ ಮಾದರಿಯಾಗಬೇಕು’’ ಎಂದರು.

ಮುಖಂಡ ಮಡು ಸಾಹುಕಾರ ಬಿರಾದಾರ, ‘‘ಪರಿಶ್ರಮ ಪಡುವವರು ಸಾಧನೆ ಮಾಡಲು ಸಾಧ್ಯವಾಗುತ್ತದೆ. ವಿದ್ಯಾರ್ಥಿಗಳು ಯಾವುದೇ ವ್ಯಸನಗಳಿಗೆ ಒಳಗಾಗದೆ ತಮ್ಮ ಭವಿಷ್ಯ ರೂಪಿಸಿಕೊಳ್ಳಬೇಕು’’ ಎಂದು ಹೇಳಿದರು.

ಮಾರುತಿ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಎಂ.ಬಿ.ಮಡಿವಾಳರ ಮಾತನಾಡಿದರು. ಈ ಸಂದರ್ಭದಲ್ಲಿಶಾಸಕರನ್ನು ಸಂಸ್ಥೆ ವತಿಯಿಂದ ಸನ್ಮಾನಿಸಲಾಯಿತು.

ಸಂಸ್ಥೆಯ ಅಧ್ಯಕ್ಷ ಎನ್ .ಬಿ.ನಡುವಿನಮನಿ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿಉಪಾಧ್ಯಕ್ಷ ಆರ್ .ಬಿ.ನಡುವಿನಮನಿ, ತಾಪಂ ಮಾಜಿ ಅಧ್ಯಕ್ಷ ರಾಜುಗೌಡ ಕೋಳೂರ, ವೀರೇಶಗೌಡ ಪಾಟೀಲ, ಉಮೇಶ ಮೈಲೇಶ್ವರ, ಅಪ್ಪು ಕುಳಗೇರಿ, ಪಿಡಿಒ ಪ್ರಭು ಚೆನ್ನೂರ, ನಿರ್ದೇಶಕರಾದ ಎಸ್ .ಎಚ್ .ಪಾಟೀಲ, ಲೀಲಾದೇವಿ ಎಂ.ಬಿರಾದಾರ, ನಿರ್ಮಲಾ ಎಸ್ .ಗಡಗಿ, ಡಾ.ಶಶಿಧರ ಬಿರಾದಾರ, ಡಾ. ವಿನಾಯಕ ಪಟಗಾರ, ಬಿ.ಜಿ.ಕರಕಳ್ಳಿ, ಶಿಕ್ಷಕ ಸಿದ್ದು ಕರಡಿ ಮತ್ತಿತರರು ಉಪಸ್ಥಿತರಿದ್ದರು.