5 ಲಕ್ಷ ಸಸಿ ನೆಡುವ ಅಭಿಯಾನಕ್ಕೆ ಸಹಕರಿಸಿ

Contributed bychandregowda.n@timesofindia.com|Vijaya Karnataka

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಗಂಭೀರವಾಗಿ ಕುಸಿದಿದೆ. ಈ ಹಿನ್ನೆಲೆಯಲ್ಲಿ, ಈ ಮಳೆಗಾಲದಲ್ಲಿ 5 ಲಕ್ಷ ಸಸಿ ನೆಡುವ ಮಹತ್ವದ ಅಭಿಯಾನ ಹಮ್ಮಿಕೊಳ್ಳಲಾಗಿದೆ. ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಅರಣ್ಯ ಇಲಾಖೆ, ಹಾಗೂ ಸಾರ್ವಜನಿಕರ ಸಹಭಾಗಿತ್ವದಲ್ಲಿ ಈ ಕಾರ್ಯ ನಡೆಯಲಿದೆ. ಗಿಡಗಳನ್ನು ನೆಟ್ಟು ಮೂರು ವರ್ಷಗಳ ಕಾಲ ಪೋಷಿಸುವ ಗುರಿ ಹೊಂದಲಾಗಿದೆ. ಪರಿಸರ ಸಂರಕ್ಷಣೆ ಮತ್ತು ಅಂತರ್ಜಲ ವೃದ್ಧಿಗೆ ಇದು ಸಹಕಾರಿಯಾಗಲಿದೆ.

support the 5 lakh sapling planting campaign in chikkaballapur

ಜಿಲ್ಲಾನ್ಯಾಯಾಲಯ ಸಭಾಂಗಣದಲ್ಲಿನಡೆದ ಸುದ್ದಿಗೋಷ್ಠಿಯಲ್ಲಿನ್ಯಾ. ಹಂಚಾಟೆ ಸಂಜೀವಕುಮಾರ್ ಮನವಿ

ವಿಕ ಸುದ್ದಿಲೋಕ ಚಿಕ್ಕಬಳ್ಳಾಪುರ

ಜಿಲ್ಲೆಯಲ್ಲಿಅಂತರ್ಜಲ ಮಟ್ಟ ಗಂಭೀರ ಎನ್ನುವಷ್ಟು ಕುಸಿದಿದೆ. ಹೀಗಾಗಿ ಜಿಲ್ಲೆಯಲ್ಲಿಪೈಲಟ್ ಯೋಜನೆಯಡಿ ಈ ಮಳೆಗಾಲದಲ್ಲಿ 5 ಲಕ್ಷ ಸಸಿ ನೆಡುವ ಅಭಿಯಾನ ಹಮ್ಮಿಕೊಂಡಿದ್ದು, ಎಲ್ಲರೂ ಸಹಕರಿಸಬೇಕು ಎಂದು ಹೈಕೋರ್ಟ್ ನ್ಯಾಯಮೂರ್ತಿ, ಜಿಲ್ಲಾಆಡಳಿತಾತ್ಮಕ ನ್ಯಾಯಾಧೀಶ ಹಂಚಾಟೆ ಸಂಜೀವಕುಮಾರ್ ಮನವಿ ಮಾಡಿದರು.

ನಗರದ ಜಿಲ್ಲಾ ನ್ಯಾಯಾಲಯದ 1ನೇ ಮಹಡಿ ಸಭಾಂಗಣದಲ್ಲಿನಡೆದ ಸುದ್ದಿಗೋಷ್ಠಿ¿ಲ್ಲಿಮಾತನಾಡಿದ ಅವರು, ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ರಾಜ್ಯಾದ್ಯಂತ 5 ಕೋಟಿ ಸಸಿ ನೆಡುವ ಮಹತ್ವದ ಅಭಿಯಾನ ಹಮ್ಮಿಕೊಂಡಿದೆ. ಮೊದಲ ಜಿಲ್ಲೆಯಾಗಿ ಚಿಕ್ಕಬಳ್ಳಾಪುರದಲ್ಲಿ5 ಲಕ್ಷ ಸಸಿ ನೆಡುವ ಕೆಲಸ ಮಾಡುತ್ತಿದ್ದು, ಮೂಲಭೂತ ಹಕ್ಕುಗಳನ್ನು ಅನುಭವಿಸುವಂತೆ, ಮೂಲಭೂತ ಕರ್ತವ್ಯವಾದ ಪರಿಸರ ಸಂರಕ್ಷಣೆಯ ಈ ಅಭಿಯಾನದಲ್ಲಿಎಲ್ಲರೂ ಭಾಗಿಯಾಗಬೇಕು ಎಂದು ಹೇಳಿದರು.

ನಮ್ಮ ಇಂದಿನ ಮತ್ತು ಮುಂದಿನ ಪೀಳಿಗೆಯ ಉಳಿವಿಗಾಗಿ ಪರಿಸರ ಸಂರಕ್ಷಿಸಿಕೊಳ್ಳುವುದು ನಮ್ಮ ಆದ್ಯ ಕರ್ತವ್ಯವಾಗಿದೆ. ಆ ನಿಟ್ಟಿನಲ್ಲಿನಾವೆಲ್ಲರೂ ಗಿಡಗಳನ್ನು ನೆಟ್ಟು ಪೋಷಿಸುವ ಅಗತ್ಯತೆ ನಮ್ಮ ಮೇಲಿದೆ. ಇದರ ಭಾಗವಾಗಿ ಚಿಕ್ಕಬಳ್ಳಾಪುರ ನ್ಯಾಯಾಂಗ ಮತ್ತು ಜಿಲ್ಲಾಡಳಿತ ಜತೆಗೂಡಿ 5 ಲಕ್ಷ ಸಸಿಗಳನ್ನು ನೆಟ್ಟು ಬೆಳೆಸುವ ಕಾರ್ಯಕ್ಕೆ ಮುಂದಾಗಿರುವುದು ಶ್ಲಾಘನೀಯ ವಿಚಾರ ಎಂದು ತಿಳಿಸಿದರು.

ಕುಟುಂಬಕ್ಕೊಂದು ಮರ, ಶಾಲೆ, ದೇವಾಲಯ, ಕಚೇರಿಗೊಂದು ಅಮೃತವನದ ರೀತಿ ಜಿಲ್ಲಾದ್ಯಂತ ಸಸಿ ನೆಡುವ ಕೆಲಸ ಆಗಬೇಕಿದೆ. ಚಿಕ್ಕಬಳ್ಳಾಪುರ ಜಿಲ್ಲೆಗೆ ಹೆಚ್ಚಿನ ಅರಣ್ಯ ಪ್ರದೇಶಗಳ ಅಗತ್ಯ ತುರ್ತಾಗಿ ಇದೆ. ಜಿಲ್ಲೆ ಗಂಭೀರ ಪರಿಸರ ಒತ್ತಡ ಎದುರಿಸುತ್ತಿದ್ದು, ಅಂತರ್ಜಲ ಮಟ್ಟವೂ ಕುಸಿದಿದೆ. 2023 ಫೆಬ್ರವರಿಯಲ್ಲಿಜಿಲ್ಲೆಯ ಸರಾಸರಿ ಅಂತರ್ಜಲ ಮಟ್ಟ ಭೂಮಿಯ ಮಟ್ಟದಿಂದ 17.52 ಮೀಟರ್ ಆಳದಲ್ಲಿತ್ತು. ಆದರೆ 2024ರ ಫೆæಬ್ರವರಿ ವೇಳೆಗೆ ಅದು 35.66 ಮೀಟರ್ ಆಳಕ್ಕೆ ಕುಸಿದಿದ್ದು, ಸರಾಸರಿ 18.14 ಮೀಟರ್ ಕುಸಿತ ದಾಖಲಾಗಿದೆ. ಹೀಗಾಗಿ ಈ ಜಿಲ್ಲೆಯಲ್ಲಿಪರಿಸರ ಸಂರಕ್ಷಣೆ ದೊಡ್ಡ ಮಟ್ಟದಲ್ಲಿನಡೆಯಬೇಕಾದ ಅನಿವಾರ್ಯತೆ ಇದೆ ಎಂದರು.

ಪ್ರಧಾನ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶ ಟಿ.ಪಿ. ರಾಮಲಿಂಗೇಗೌಡ ಮಾತನಾಡಿ, ರಾಜ್ಯದಲ್ಲಿ5 ಕೋಟಿ ಗಿಡಗಳನ್ನು ನೆಟ್ಟು ಬೆಳೆಸುವ ಮೂಲಕ ಪರಿಸರ ಸಂರಕ್ಷಣೆ ಮಾಡುವ ಜವಾಬ್ದಾರಿಯುತ ಕಾರ್ಯಕ್ಕಾಗಿ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರವು ಧರೆ ಫೌಂಡೇಶನ್ ಜತೆ ಒಪ್ಪಂದ ಮಾಡಿಕೊಂಡಿದೆ. ಆ ಮೂಲಕ ಪರಿಸರ ಸಂರಕ್ಷಣೆ ಮಾಡುವ ನಿಟ್ಟಿನಲ್ಲಿಸಾಮಾಜಿಕ ಜವಬ್ದಾರಿ ತೋರುತ್ತಿದೆ. ಇದರ ಭಾಗವಾಗಿ ಈಗಾಗಲೇ ಶಿಡ್ಲಘಟ್ಟ ತಾಲ್ಲೂಕಿನ ಅಪ್ಪೇಗೌಡನಹಳ್ಳಿಯ ಇಂದಿರಾಗಾಂಧಿ ವಸತಿ ಶಾಲೆ ಆವರಣದಲ್ಲಿಗಿಡ ನೆಡುವ ಕಾರ್ಯಕ್ರಮಕ್ಕೆ ಕಳೆದ ಏಪ್ರಿಲ್ ನಲ್ಲಿಚಾಲನೆ ದೊರಕಿದೆ. ಅದರ ಮುಂದುವರೆದ ಭಾಗವಾಗಿ ತಾಲೂಕಿನ ಮುದ್ದೇನಹಳ್ಳಿಯ ಸರ್ ಎಂ. ವಿಶ್ವೇಶ್ವರಯ್ಯ ಸ್ಮಾರಕದ ಬಳಿ 5 ಗುಂಟೆ ಜಮೀನಿನಲ್ಲಿಗಿಡ ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗಿದೆ. ಈ ಕಾರ್ಯಕ್ರಮ ಮುಂದಿನ ದಿನಗಳಲ್ಲಿಜಿಲ್ಲೆಯ ವಿವಿಧೆಡೆ ಅನುಷ್ಠಾನವಾಗಿ ಒಟ್ಟು 5 ಲಕ್ಷ ಗಿಡಗಳನ್ನು ನೆಟ್ಟು ಬೆಳೆಸುವ ಯೋಜಿತ ಗುರಿ ಹೊಂದಲಾಗಿದೆ ಎಂದರು.

ಕೇವಲ ಗಿಡಗಳನ್ನು ನೆಟ್ಟು ಹೋಗುವುದರಿಂದ ಗಿಡ ಬೆಳೆಯುವುದಿಲ್ಲ, ಅವು ಬೆಳೆಯುವವರೆಗೆ ಕನಿಷ್ಠ 3 ವರ್ಷ ಸಂರಕ್ಷಣೆ ಮಾಡುವ ಅಗತ್ಯವಿದೆ. ಜಿಲ್ಲಾಡಳಿತ, ಅರಣ್ಯ ಇಲಾಖೆ, ಸಾಮಾಜಿಕ ಅರಣ್ಯ ಇಲಾಖೆ ಸಹಕಾರ ಪಡೆದು ಜಿಲ್ಲೆಯಲ್ಲಿ5 ಲಕ್ಷ ಸಸಿಗಳನ್ನು ನೆಟ್ಟು ಬೆಳೆಸಲಾಗುವುದು. ಆ ಮೂಲಕ ಅಂತರ್ಜಲ ವೃದ್ಧಿಸಿ ಪರಿಸರ ಸಂರಕ್ಷಣೆಗೆ ಕೊಡುಗೆ ನೀಡಲಾಗುವುದು. ಈ ಕಾರ್ಯಕ್ಕೆ ಜಿಲ್ಲೆಯ ಸರ್ಕಾರೇತರ ಸಂಸ್ಥೆಗಳು, ಸಮಸ್ತ ಸಾರ್ವಜನಿಕರು ಸಹಕಾರ ನೀಡಬೇಕು. ಗಿಡ ಬೆಳೆಸುವ ಜವಬ್ದಾರಿಯನ್ನು ಸಾರ್ವಜನಿಕರು ತೆಗೆದುಕೊಳ್ಳಬೇಕು ಎಂದು ಕರೆ ನೀಡಿದರು.

ಜಿಲ್ಲಾಧಿಕಾರಿ ಜಿ. ಪ್ರಭು ಮಾತನಾಡಿ, ಈ ವರ್ಷ 5 ಲಕ್ಷ ಗಿಡಗಳನ್ನು ಮುಂಗಾರು ಹಂಗಾಮಿನಲ್ಲಿನೆಡಲು ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಂಡಿದೆ. ಸಾರ್ವಜನಿಕ ಆಸ್ತಿಗಳಾದ ಸರಕಾರಿ ಶಾಲಾ ಕಾಲೇಜುಗಳ ಆವರಣ, ಸರಕಾರಿ ಆಸ್ಪತ್ರೆಗಳ ಆವರಣ, ಮುಜರಾಯಿ ಇಲಾಖೆಯ ಆಸ್ತಿಗಳು, ದೇವಸ್ಥಾನಗಳ ಆವರಣ, ಸ್ಮಶಾನಗಳು, ಕೆರೆಗಳ ಸುತ್ತಮುತ್ತ, ತ್ಯಾಜ್ಯ ವಿಲೇವಾರಿ ಘಟಕಗಳ ಆವರಣ ಸೇರಿದಂತೆ ಇನ್ನಿತರ ಸರಕಾರಿ ಆಸ್ತಿಗಳ ವ್ಯಾಪ್ತಿಯಲ್ಲಿಗಿಡ ನೆಡಲು ಯೋಜಿಸಲಾಗಿದೆ ಎಂದು ಹೇಳಿದರು.

ಜಿಲ್ಲಾಡಳಿತದ ಕಾರ್ಯಕ್ರಮದ ಜತೆಗೆ ಕಾನೂನು ಸೇವಾ ಪ್ರಾಧಿಕಾರದ ಜೊತೆಗೂಡಿ ಹೆಚ್ಚುವರಿಯಾಗಿ 5 ಲಕ್ಷ ಸಸಿಗಳನ್ನು ಬೆಳೆಸುವ ಅರ್ಥಪೂರ್ಣ ಕಾರ್ಯಕ್ರಮ ಅನುಷ್ಠಾನ ಮಾಡಲಾಗುವುದು. ಜಿಲ್ಲೆಯಲ್ಲಿಈ ವರ್ಷ ನೆಡಲಿರುವ 10 ಲಕ್ಷ ಗಿಡಗಳ ಪೈಕಿ ಶೇ.80ರಷ್ಟು ಗಿಡಗಳನ್ನು ಉಳಿಸಿ ಬೆಳೆಸಲು, ಎಲ್ಲಾ ನೆಟ್ಟ ಸಸಿಗಳ ಮೌಲ್ಯಮಾಪನ ಮಾಡುವ ಮೂಲಕ ಯಶಸ್ವಿಗೊಳಿಸಲಾಗುವುದು ಎಂದರು.

ಈ ವೇಳೆ ನ್ಯಾಯಾಧೀಶರಾದ ಕಾಂತರಾಜ್ , ಬಿ. ಶಿಲ್ಪ, ಉಮೇಶ್ , ಜಿಪಂ ಸಿಇಒ ಡಾ. ವೈ. ನವೀನ್ ಭಟ್ , ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕುಶಲ್ ಚೌಕ್ಸೆ, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಅಭಿಲಾಷ್ , ಧರೆ ಫೌಂಡೇಶನ್ ಪ್ರತಿನಿಧಿ ವೃಷಾಂಕ್ ಭಟ್ , ಬಾರ್ ಕೌನ್ಸಿಲ್ ಸದಸ್ಯ ಹರೀಶ್ ಕುಮಾರ್ ಸೇರಿದಂತೆ ಹಲವರು ಇದ್ದರು.

23ಸಿಬಿಪಿಫೋಟೋ02

ನಗರದ ಜಿಲ್ಲಾ ನ್ಯಾಯಾಲಯದ 1ನೇ ಮಹಡಿ ಸಭಾಂಗಣದಲ್ಲಿನಡೆದ ಸುದ್ದಿಗೋಷ್ಠಿ¿ಲ್ಲಿಹೈಕೋರ್ಟ್ ನ್ಯಾಯಮೂರ್ತಿ ಹಂಚಾಟೆ ಸಂಜೀವಕುಮಾರ್ ಅವರು ಸಸಿ ನೆಡುವ ಅಭಿಯಾನ ಕುರಿತು ಮಾತನಾಡಿದರು.