ಬೆಂಗಳೂರು: ದೀಪಾವಳಿ ಹಬ್ಬದ ಪ್ರಯುಕ್ತ ಆರ್ .ವಿ. ಟೂರ್ಸ್ ಆ್ಯಂಡ್ ಟ್ರಾವೆಲ್ಸ್ ಪ್ರೈ.ಲಿ. ವತಿಯಿಂದ ಕಾಶಿ, ಅಯೋಧ್ಯೆ ಮತ್ತು ಪ್ರಯಾಗರಾಜ್ ಪುಣ್ಯ ಕ್ಷೇತ್ರಗಳ ದರ್ಶನಕ್ಕಾಗಿ ವಿಶೇಷ ಯಾತ್ರಾ ಪ್ಯಾಕೇಜ್ ಘೋಷಿಸಲಾಗಿದೆ.
4ರಿಂದ 5 ದಿನಗಳ ಈ ಯಾತ್ರಾ ಪ್ಯಾಕೇಜ್ ಗೆ ಪ್ರತಿ ವ್ಯಕ್ತಿಗೆ 31,999 ರೂ. ದರ ನಿಗದಿಪಡಿಸಲಾಗಿದೆ. ವಿಮಾನ ಪ್ರಯಾಣದ ಜತೆಗೆ, ಕಾಶಿ ವಿಶ್ವನಾಥ ದೇವಸ್ಥಾನ, ಅಯೋಧ್ಯೆ ಮತ್ತು ಪ್ರಯಾಗರಾಜ್ ನ ತ್ರಿವೇಣಿ ಸಂಗಮ ಸೇರಿದಂತೆ ಪ್ರಮುಖ ಧಾರ್ಮಿಕ ಕ್ಷೇತ್ರಗಳ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುತ್ತಿದೆ. ಪ್ಯಾಕೇಜ್ ನಲ್ಲಿಪ್ರತಿ ದಿನ ಬೆಳಗಿನ ಉಪಾಹಾರ ಮತ್ತು ರಾತ್ರಿ ಊಟ, ಹವಾನಿಯಂತ್ರಿತ ವಾಹನದ ಸೌಲಭ್ಯ, ಹವಾನಿಯಂತ್ರಿತ ಕೊಠಡಿಗಳಲ್ಲಿವಸತಿ ಹಾಗೂ ಆರಾಮದಾಯಕ ಪ್ರಯಾಣದ ವ್ಯವಸ್ಥೆ ಒಳಗೊಂಡಿದೆ ಎಂದು ಸಂಸ್ಥೆ ತಿಳಿಸಿದೆ.ಆರ್ .ವಿ. ಟೂರ್ಸ್ ಆ್ಯಂಡ್ ಟ್ರಾವೆಲ್ಸ್ ಪ್ರೈ. ಲಿ. ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ಆರ್ .ವಿ. ರಮಣ ಮಾತನಾಡಿ, ‘‘ಕಳೆದ 26 ವರ್ಷಗಳಿಂದ ಗ್ರಾಹಕರ ವಿಶ್ವಾಸವನ್ನು ಗಳಿಸಿರುವ ಸಂಸ್ಥೆ, ಗ್ರಾಹಕರ ಸಂತೋಷವನ್ನು ಗಮನದಲ್ಲಿಟ್ಟುಕೊಂಡು ದೀಪಾವಳಿ ವಿಶೇಷ ಕೊಡುಗೆಯನ್ನು ನೀಡುತ್ತಿದೆ. ಕುಟುಂಬ ಸಮೇತ ಪವಿತ್ರ ಕ್ಷೇತ್ರಗಳ ದರ್ಶನ ಕೈಗೊಳ್ಳಲು ಅನುಕೂಲವಾಗುವಂತೆ ಈ ವಿಶೇಷ ಕೊಡುಗೆಯನ್ನು ರೂಪಿಸಲಾಗಿದೆ. ದೀಪಾವಳಿ ಸಂದರ್ಭದಲ್ಲಿಚಿನ್ನ, ಬೆಳ್ಳಿ ಅಥವಾ ಇತರ ವಸ್ತುಗಳ ಬದಲಿಗೆ ಕುಟುಂಬಕ್ಕೆ ಆಧ್ಯಾತ್ಮಿಕ ಅನುಭವವನ್ನು ಉಡುಗೊರೆಯಾಗಿ ನೀಡುವ ಉದ್ದೇಶದಿಂದ ಯಾತ್ರಾ ಪ್ಯಾಕೇಜ್ ಪರಿಚಯಿಸಲಾಗಿದೆ,’’ ಎಂದು ತಿಳಿಸಿದ್ದಾರೆ.
ಯಾತ್ರೆಯ ದಿನಾಂಕಗಳು, ಷರತ್ತುಗಳು, ಲಭ್ಯತೆ ಮತ್ತು ಇತರ ವಿವರಗಳಿಗಾಗಿ ಸಂಸ್ಥೆಯನ್ನು ಸಂಪರ್ಕಿಸಬಹುದು. ಮುಂಗಡ ನೋಂದಣಿ ಹಾಗೂ ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ ಮೊ.ಸಂ.: 91000 90938.