*

Contributed by: drivyanag444@gmail.com|Vijaya Karnataka•
emotional celebration at murarji school for kannada rajyotsava
ತೆರಕಣಾಂಬಿ ಮುರಾರ್ಜಿ ಶಾಲೆಯಲ್ಲಿ

ಕನ್ನಡ ರಾಜ್ಯೋತ್ಸವ ಸಂಭ್ರಮ
ವಿಕ ಸುದ್ದಿಲೋಕ ತೆರಕಣಾಂಬಿ

ಇಲ್ಲಿನ ಮುರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ71ನೇ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು.

ಆರ್ .ಕೆ.ಮಧು ಕಾರ್ಯಕ್ರಮ ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಸಾಹಿತಿ ಚಂದೂ ದೇಪಾಪುರ ಭಾಗವಹಿಸಿದ್ದರು. ಶಾಲೆಯ ಪ್ರಾಂಶುಪಾಲ ಮಹದೇವಪ್ರಸಾದ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಕಾರ್ಯಕ್ರಮದಲ್ಲಿಕನ್ನಡ ಭಾಷೆಯ ಇತಿಹಾಸ, ಸಾಹಿತ್ಯ, ಸಂಸ್ಕೃತಿ ಹಾಗೂ ಕನ್ನಡಿಗರ ಅಸ್ಮಿತೆಯ ಕುರಿತು ಮಾತನಾಡಲಾಯಿತು.

‘‘ಕನ್ನಡ ಭಾಷೆಗೆ ಸಾವಿರಾರು ವರ್ಷಗಳ ಇತಿಹಾಸವಿದ್ದು, ಅನೇಕ ಸಾಹಿತಿಗಳು, ಕವಿಗಳು ಹಾಗೂ ವಚನಕಾರರು ತಮ್ಮ ಸಾಹಿತ್ಯದ ಮೂಲಕ ಕನ್ನಡ ಭಾಷೆಯ ಶ್ರೀಮಂತಿಕೆಯನ್ನು ಜಗತ್ತಿಗೆ ಪರಿಚಯಿಸಿದ್ದಾರೆ. ಕನ್ನಡ ಭಾಷೆಯನ್ನು ಕೇವಲ ಮಾತನಾಡುವುದಷ್ಟೇ ಅಲ್ಲದೆ, ಓದು ಮತ್ತು ಬರವಣಿಗೆಯಲ್ಲೂಬಳಸುವ ಮೂಲಕ ಮುಂದಿನ ಪೀಳಿಗೆಗೆ ಪರಿಚಯಿಸಬೇಕು,’’ ಎಂಬ ಅಭಿಪ್ರಾಯ ವ್ಯಕ್ತವಾಯಿತು.

ಶಾಲೆಯ ಶಿಕ್ಷಕರು, ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.