ಕನ್ನಡ ಭಾಷೆಯ ಉಳಿವು ಪ್ರತಿಯೊಬ್ಬ ಕನ್ನಡಿಗನ ಜವಾಬ್ದಾರಿ

Contributed by: vishnu.kumar0075@gmail.com|Vijaya Karnataka•
kannada shatkona rajyotsava the responsibility of every kannadiga for the preservation of kannada language
ವಿಕ ಸುದ್ದಿಲೋಕ ಬೂದಿಕೋಟೆ

ಕನ್ನಡ ಭಾಷೆ , ನಾಡು-ನುಡಿ ಹಾಗೂ ಸಂಸ್ಕೃತಿಯ ಉಳಿವು ಮತ್ತು ಬೆಳವಣಿಗೆ ಪ್ರತಿಯೊಬ್ಬ ಕನ್ನಡಿಗನ ಜವಾಬ್ದಾರಿಯಾಗಿದೆ. ಕನ್ನಡ ಭಾಷೆಯನ್ನು ಕೇವಲ ನವೆಂಬರ್ ತಿಂಗಳಿಗೆ ಸೀಮಿತಗೊಳಿಸದೆ, ನಿತ್ಯ ಜೀವನದಲ್ಲಿಬಳಸುವ ಮೂಲಕ ಭಾಷೆಯ ಗೌರವವನ್ನು ಹೆಚ್ಚಿಸಬೇಕು ಎಂದು ಸಮಾಜ ಸೇವಕ ಎ. ಬಾಬು ಕರೆ ನೀಡಿದರು.
ಹೋಬಳಿಯ ಬೂದಿಕೋಟೆ ಗ್ರಾಮದಲ್ಲಿತ್ರಿಚಕ್ರ ಆಟೋ ಚಾಲಕರ ಸಂಘದ ವತಿಯಿಂದ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮ ಹಾಗೂ ಸಡಗರದಿಂದ ಅದ್ಧೂರಿಯಾಗಿ ಆಚರಿಸಲಾಯಿತು. ಕಾರ್ಯಕ್ರಮದಲ್ಲಿಭಾಗವಹಿಸಿದ್ದ ಸಮಾಜ ಸೇವಕ ಎ. ಬಾಬು ಅವರು ಕನ್ನಡಾಂಬೆಗೆ ಗೌರವ ಸಲ್ಲಿಸಿದರು. ನಂತರ ಮಾತನಾಡಿದ ಅವರು, ಕನ್ನಡ ಭಾಷೆಗೆ ಸಾವಿರಾರು ವರ್ಷಗಳ ಇತಿಹಾಸ ಹಾಗೂ ಶ್ರೀಮಂತ ಪರಂಪರೆಯಿದೆ. ಕನ್ನಡ ನಾಡು, ನುಡಿ, ನೆಲ, ಜಲ ಹಾಗೂ ಸಂಸ್ಕೃತಿಯನ್ನು ಉಳಿಸಿ ಬೆಳೆಸುವುದು ಪ್ರತಿಯೊಬ್ಬ ಕನ್ನಡಿಗನ ಕರ್ತವ್ಯವಾಗಿದೆ. ಕನ್ನಡಿಗರು ತಮ್ಮ ಮಕ್ಕಳಿಗೆ ಮಾತೃ ಭಾಷೆಯ ಮಹತ್ವವನ್ನು ತಿಳಿಸಬೇಕು. ಅನ್ಯ ಭಾಷೆಗಳನ್ನು ಕಲಿಯುವುದರ ಜತೆಗೆ ಕನ್ನಡ ಭಾಷೆಗೆ ಮೊದಲ ಆದ್ಯತೆ ನೀಡಬೇಕು. ಕನ್ನಡ ನಾಡಿನ ಇತಿಹಾಸ, ಸಂಸ್ಕೃತಿ ಹಾಗೂ ಪರಂಪರೆಯನ್ನು ಮುಂದಿನ ಪೀಳಿಗೆಗೆ ಪರಿಚಯಿಸುವ ಕೆಲಸವಾಗಬೇಕು ಎಂದು ತಿಳಿಸಿದರು.

ತ್ರಿಚಕ್ರ ಆಟೋ ಚಾಲಕರು ತಮ್ಮ ದೈನಂದಿನ ದುಡಿಮೆಯ ನಡುವೆಯೂ ಒಗ್ಗಟ್ಟಿನಿಂದ ಕನ್ನಡ ರಾಜ್ಯೋತ್ಸವ ಆಚರಿಸುತ್ತಿರುವುದು ಸಂತಸದ ಸಂಗತಿ. ಇಂತಹ ಕನ್ನಡಪರ ಕಾರ್ಯಕ್ರಮಗಳು ಜನರಲ್ಲಿಭಾಷಾಭಿಮಾನ ಮತ್ತು ನಾಡಿನ ಬಗ್ಗೆ ಗೌರವವನ್ನು ಹೆಚ್ಚಿಸುವುದರೊಂದಿಗೆ ಕನ್ನಡದ ಏಕತೆ ಹಾಗೂ ಅಭಿಮಾನವನ್ನು ಮತ್ತಷ್ಟು ಬಲಪಡಿಸುತ್ತವೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಕಾರ್ಯಕ್ರಮದಲ್ಲಿಆಟೋ ಚಾಲಕರ ಸಂಘದ ಅಧ್ಯಕ್ಷ ಅರುಣ್ , ಎಲ್ಲಪ್ಪ, ಅಜಯ್ , ಆನಂದ್ , ರಾಜು, ಕುಮಾರ್ , ಗಣೇಶ್ , ಮಣಿ, ಅರುಣ್ ,ನವೀನ್ ಸೇರಿದಂತೆ ಆಟೋ ಚಾಲಕರು, ಸ್ಥಳೀಯ ಮುಖಂಡರು, ಕನ್ನಡಾಭಿಮಾನಿಗಳು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

ಚಿತ್ರ ಶೀರ್ಷಿಕೆ: ಬೂದಿಕೋಟೆ ಗ್ರಾಮದಲ್ಲಿತ್ರಿಚಕ್ರ ಆಟೋ ಚಾಲಕರ ಸಂಘದ ವತಿಯಿಂದ ಕನ್ನಡ ರಾಜ್ಯೋತ್ಸವ ಅದ್ಧೂರಿಯಾಗಿ ಆಚರಿಸಲಾಯಿತು.