Notification Of The Keys Exam Schedule For The Year 2026 27
ಪುಟ 5 ಸುದ್ದಿ
Contributed by: Jaya shree|Vijaya Karnataka•
ಕೆಎಎಸ್ ಅಧಿಕೃತ ವೇಳಾಪಟ್ಟಿ
ಕರ್ನಾಟಕ ಲೋಕಸೇವಾ ಆಯೋಗವು 2026-27ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ 319 ಹುದ್ದೆಗಳ ಪ್ರಿಲಿಮ್ಸ್ ಪರೀಕ್ಷೆಯ ಅಧಿಕೃತ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಪರೀಕ್ಷೆಯನ್ನು ನವೆಂಬರ್ 15ರಂದು (ಭಾನುವಾರ) ನಡೆಸಲು ನಿರ್ಧರಿಸಲಾಗಿದ್ದು, ಅಭ್ಯರ್ಥಿಗಳು ಪರೀಕ್ಷೆಗೆ ಸಿದ್ಧತೆ ಮಾಡಿಕೊಳ್ಳುವಂತೆ ಸೂಚಿಸಿದೆ.ಪರೀಕ್ಷೆಯು ಎರಡು ಪತ್ರಿಕೆಗಳಲ್ಲಿನಡೆಯಲಿದೆ. ಪತ್ರಿಕೆ-1ರ ಪರೀಕ್ಷೆಯು ಬೆಳಗ್ಗೆ 10ರಿಂದ ಮಧ್ಯಾಹ್ನ 12 ಗಂಟೆಯವರೆಗೆ ನಡೆಯಲಿದ್ದು, ಪತ್ರಿಕೆ-2ರ ಪರೀಕ್ಷೆಯನ್ನು ಮಧ್ಯಾಹ್ನ 2ರಿಂದ ಸಂಜೆ 4 ಗಂಟೆಯವರೆಗೆ ನಡೆಸಲಾಗುತ್ತದೆ. ಈ ಕುರಿತು ಅಧಿಕೃತ ವೇಳಾಪಟ್ಟಿ ಪ್ರಕಟಿಸಲಾಗಿದ್ದು, ಅಭ್ಯರ್ಥಿಗಳು ಪರೀಕ್ಷೆಯ ಸಮಯವನ್ನು ಗಮನಿಸಿ ಸಕಲ ಸಿದ್ಧತೆಗಳೊಂದಿಗೆ ಹಾಜರಾಗಬೇಕು. ಪರೀಕ್ಷೆಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿಗಾಗಿ ಆಯೋಗದ ಅಧಿಕೃತ ವೆಬ್ ಸೈಟ್ ಪರಿಶೀಲಿಸಬೇಕು ಎಂದು ಕರ್ನಾಟಕ ಲೋಕಸೇವಾ ಆಯೋಗ ತಿಳಿಸಿದೆ.