ಶ್ರೀ ಬೆಟ್ಟಳ್ಳಿ ಮಾರಮ್ಮನ ದೇಗುಲದಲ್ಲಿವಿಶೇಷ ಪೂಜೆ

Contributed by: abhilash.gowda7707@gmail.com|Vijaya Karnataka•
special puja on diwali amavasya at shri bettalli maramma temple
ಹನೂರು : ಪಟ್ಟಣದ ಶ್ರೀ ಬೆಟ್ಟಳ್ಳಿ ಮಾರಮ್ಮನ ದೇವಾಲಯದಲ್ಲಿದೀಪಾವಳಿ ಅಮಾವಾಸ್ಯೆ ಅಂಗವಾಗಿ ವಿಶೇಷ ಪೂಜೆ ನೆರವೇರಿತು.

ಮುಂಜಾನೆ 5ಕ್ಕೆ ದೇವಿಗೆ ಪನ್ನೀರು, ಎಳನೀರು, ಹಾಲು, ಮೊಸರು, ಜೇನುತುಪ್ಪ ಸೇರಿದಂತೆ ವಿವಿಧ ದ್ರವ್ಯಗಳಿಂದ ಅಭಿಷೇಕ ಮಾಡಲಾಯಿತು. ಬಳಿಕ ವಿವಿಧ ಪುಷ್ಪಗಳಿಂದ ದೇವಿಯನ್ನು ಅಲಂಕರಿಸಿ ಧೂಪಾರತಿ ಮತ್ತು ಮಹಾಮಂಗಳಾರತಿ ನೆರವೇರಿಸಲಾಯಿತು.
ಪಟ್ಟಣ ಸೇರಿದಂತೆ ಭೈರನತ್ತ, ಉದ್ದನೂರು, ಚಿಕ್ಕಮಾಲಾಪುರ, ಅಜ್ಜೀಪುರ, ಮಹದೇಶ್ವರಬೆಟ್ಟ ಚಿಂಚಳ್ಳಿ, ಮಣಗಳ್ಳಿ ಹಾಗೂ ಮಂಗಲ ಗ್ರಾಮವಲ್ಲದೆ ತಮಿಳುನಾಡು ರಾಜ್ಯದಿಂದಲೂ ಭಕ್ತರು ಆಗಮಿಸಿ ಹಣ್ಣು-ಕಾಯಿ ಅರ್ಪಿಸಿ ದೇವಿಯ ದರ್ಶನ ಪಡೆದರು. ಹರಕೆ ಹೊತ್ತ ಭಕ್ತರು ದೇವಾಲಯದ ಮುಂಭಾಗದಲ್ಲಿಉಪ್ಪು ಸುರಿದು ಭಕ್ತಿ ಸಮರ್ಪಿಸಿದರು.

09ಎಚ್ ಎನ್ ಆರ್ 05

ಹನೂರು ಶ್ರೀ ಬೆಟ್ಟಳ್ಳಿ ಮಾರಮ್ಮನ ದೇವಾಲಯದಲ್ಲಿದೀಪಾವಳಿ ಅಮಾವಾಸ್ಯೆ ಅಂಗವಾಗಿ ವಿಶೇಷ ಅಲಂಕಾರ ಮಾಡಲಾಗಿತ್ತು.