ವಿಕ ಸುದ್ದಿಲೋಕ ಬೆಳಗಾವಿ2027ರ ಮಾರ್ಚ್ ತಿಂಗಳಿನಲ್ಲಿಮಾರಿಹಾಳ ಗ್ರಾಮದಲ್ಲಿನಡೆಯಲಿರುವ ಶ್ರೀ ಮಹಾಲಕ್ಷ್ಮೇ ದೇವಿ ಜಾತ್ರಾ ಮಹೋತ್ಸವದ ಹಿನ್ನೆಲೆಯಲ್ಲಿಶಾಸಕಿ ಲಕ್ಷ್ಮೇ ಹೆಬ್ಬಾಳಕರ್ ಅವರು ಮಂಗಳವಾರ ಗ್ರಾಮಕ್ಕೆ ಭೇಟಿ ನೀಡಿ, ಧಾರ್ಮಿಕ ಕಾರ್ಯಕ್ರಮದಲ್ಲಿಪಾಲ್ಗೊಂಡು ದೇವಿ ಆಶೀರ್ವಾದ ಪಡೆದರು.
ಜಾತ್ರಾ ಮಹೋತ್ಸವದ ಪೂರ್ವಭಾವಿಯಾಗಿ ಶ್ರೀ ಮಹಾಲಕ್ಷ್ಮೇ ದೇವಿಯನ್ನು ಬಣ್ಣಕ್ಕೆ ಬೀಳ್ಕೊಡುವ ಪವಿತ್ರ ಸಂಪ್ರದಾಯದ ಸಂದರ್ಭದಲ್ಲಿಗ್ರಾಮಕ್ಕೆ ಆಗಮಿಸಿದ ಲಕ್ಷ್ಮೇ ಹೆಬ್ಬಾಳಕರ್ ಅವರು, ದೇವಿಗೆ ಉಡಿ ತುಂಬಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು.
ಬಳಿಕ ಧಾರ್ಮಿಕ ಕಾರ್ಯಕ್ರಮದ ಬಳಿಕ ಜಾತ್ರಾ ಕಮಿಟಿಯ ಸದಸ್ಯರು, ಗ್ರಾಮದ ಹಿರಿಯರು ಹಾಗೂ ಪ್ರಮುಖರೊಂದಿಗೆ ಸಭೆ ನಡೆಸಿದ ಲಕ್ಷ್ಮೇ ಹೆಬ್ಬಾಳಕರ್ ಅವರು, ಜಾತ್ರಾ ಮಹೋತ್ಸವದ ಯಶಸ್ವಿ ಆಯೋಜನೆಗೆ ಕೈಗೊಳ್ಳಬೇಕಾದ ನಾನಾ ಸಿದ್ಧತೆಗಳ ಕುರಿತು ಚರ್ಚಿಸಿದರು.
ಈ ವೇಳೆ ಮಾತನಾಡಿದ ಅವರು, ‘‘ಮಾರಿಹಾಳ ಗ್ರಾಮದ ಆರಾಧ್ಯ ದೇವತೆ ಮಹಾಲಕ್ಷ್ಮೇ ದೇವಿಯ ಜಾತ್ರಾ ಮಹೋತ್ಸವವು ಧಾರ್ಮಿಕ ಹಾಗೂ ಸಾಂಸ್ಕೃತಿಕ ಮಹತ್ವ ಹೊಂದಿದೆ. ಸುತ್ತಮುತ್ತಲಿನ ಗ್ರಾಮಗಳು ಸೇರಿದಂತೆ ನಾನಾ ಭಾಗಗಳಿಂದ ಅಪಾರ ಸಂಖ್ಯೆಯಲ್ಲಿಭಕ್ತಾದಿಗಳು ಆಗಮಿಸುವ ನಿರೀಕ್ಷೆಯಿದೆ. ಈ ಹಿನ್ನೆಲೆಯಲ್ಲಿಜಾತ್ರೆಯನ್ನು ಅಚ್ಚುಕಟ್ಟಾಗಿ, ಶಿಸ್ತುಬದ್ಧವಾಗಿ ಹಾಗೂ ಭಕ್ತಿಪೂರ್ವಕವಾಗಿ ಆಯೋಜಿಸುವ ನಿಟ್ಟಿನಲ್ಲಿಈಗಿನಿಂದಲೇ ಸಿದ್ಧತೆ ಕೈಗೊಳ್ಳುವ ಅಗತ್ಯವಿದೆ. ಕುಡಿಯುವ ನೀರು, ಸ್ವಚ್ಛತೆ, ತಾತ್ಕಾಲಿಕ ಶೌಚಾಲಯ, ವಿದ್ಯುತ್ ದೀಪಗಳ ವ್ಯವಸ್ಥೆ, ಸುಗಮ ಸಂಚಾರ, ವಾಹನಗಳ ಪಾಕಿಂರ್ ಗ್ , ರಸ್ತೆ ಸೌಲಭ್ಯ ಹಾಗೂ ಅಗತ್ಯ ಮೂಲಸೌಕರ್ಯಗಳನ್ನು ಕಲ್ಪಿಸುವ ನಿಟ್ಟಿನಲ್ಲಿಸಿದ್ಧತೆ ನಡೆಸಬೇಕು,’’ ಎಂದು ಹೇಳಿದರು.
ಈ ಸಂದರ್ಭದಲ್ಲಿಗ್ರಾಮದ ಹಿರಿಯರು, ಭಕ್ತಾದಿಗಳು, ಜಾತ್ರಾ ಕಮಿಟಿ ಪದಾಧಿಕಾರಿಗಳು ಹಾಗೂ ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.
ಫೋಟೊ: 11ಮಲ್ಲು11: ಮಾರಿಹಾಳ ಗ್ರಾಮದ ಶ್ರೀ ಮಹಾಲಕ್ಷ್ಮೇ ದೇವಿಗೆ ಶಾಸಕಿ ಲಕ್ಷ್ಮೇ ಹೆಬ್ಬಾಳಕರ್ ವಿಶೇಷ ಪೂಜೆ ಸಲ್ಲಿಸಿದರು.