ಸುದ್ದಿಚೂರು

Contributed by: nasirmnkodagu@gmail.com|Vijaya Karnataka•
invitation for applications for mental health counselors recruitment
ಮಾನಸಿ ಆರೋಗ್ಯ ಸಲಹೆಗಾರರ

ನೇಮಕ್ಕೆ ಅರ್ಜಿ ಆಹ್ವಾನ
ಮಡಿಕೇರಿ : ಪ್ರಸಕ್ತ (2026-27) ಸಾಲಿನ ಸಮನ್ವಯ ಶಿಕ್ಷಣ ಚಟುವಟಿಕೆಗಳ ಯಶಸ್ವಿ ಅನುಷ್ಠಾನಕ್ಕಾಗಿ 2 ಕ್ಷೇತ್ರ ಸಂಪನ್ಮೂಲ ಕೇಂದ್ರಗಳಲ್ಲಿಇಬ್ಬರು ಮಾನಸಿಕ ಆರೋಗ್ಯ ಸಲಹೆಗಾರರ ನೇಮಕಾತಿ ಮಾಡುವ ಸಂಬಂಧ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತರು ನ.16 ರ ಸಂಜೆ 5ಗಂಟೆಯೊಳಗೆ ಉಪ ನಿರ್ದೇಶಕರು ಹಾಗೂ ಪದನಿಮಿತ್ತ ಜಿಲ್ಲಾಯೋಜನಾ ಸಮನ್ವಯಾಧಿಕಾರಿ ಸಮಗ್ರ ಶಿಕ್ಷಣ ಅಭಿಯಾನ, ಕೊಡಗು ಜಿಲ್ಲೆ, ಮಡಿಕೇರಿ ಅವರ ಕಚೇರಿಗೆ ಅರ್ಜಿ ಸಲ್ಲಿಸಬಹುದಾಗಿದೆ.

ಅಭ್ಯರ್ಥಿಗಳು ಮನೋವಿಜ್ಞಾನ, ಕ್ಲಿನಿಕಲ್ ಮನೋವಿಜ್ಞಾನ, ಕೌನ್ಸಿಲಿಂಗ್ ಮನೋವಿಜ್ಞಾನ ಅಥವಾ ಸಂಬಂಧಿತ ವಿಷಯಗಳಲ್ಲಿಎಂ.ಎ, ಎಂ.ಎಸ್ .ಸಿ ಪದವಿ ಹೊಂದಿರಬೇಕು. ಶಾಲೆ ಅಥವಾ ಸಮುದಾಯ ಮಾನಸಿಕ ಆರೋಗ್ಯ ಕ್ಷೇತ್ರದಲ್ಲಿಕನಿಷ್ಠ ಒಂದು ವರ್ಷದ ಅನುಭವ ಹಾಗೂ ಕನ್ನಡ, ಇಂಗ್ಲಿಷ್ ಮತ್ತು ಕಂಪ್ಯೂಟರ್ ಜ್ಞಾನ ಹೊಂದಿರಬೇಕು. ಹೆಚ್ಚಿನ ಮಾಹಿತಿಗೆ ಉಪ ನಿರ್ದೇಶಕರು ಹಾಗೂ ಜಿಲ್ಲಾಉಪಯೋಜನಾ ಸಮನ್ವಯಾಧಿಕಾರಿ ಸಾರ್ವಜನಿಕ ಶಿಕ್ಷಣ ಇಲಾಖೆ, ಮಡಿಕೇರಿ ಇವರನ್ನು ಸಂಪರ್ಕಿಸಬಹುದು ಎಂದು ಕೆ.ಯೋಗೇಶ್ ತಿಳಿಸಿದ್ದಾರೆ.

ಸೈನಿಕ ಶಾಲೆ ಪ್ರವೇಶಕ್ಕೆ ಅರ್ಜಿ

ಮಡಿಕೇರಿ: 2027-28 ನೇ ಸಾಲಿಗೆ ಸೈನಿಕ ಶಾಲೆಯ 6 ಮತ್ತು 9ನೇ ತರಗತಿ ಪ್ರವೇಶಕ್ಕೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಹರು ಆನ್ ಲೈನ್ ಮೂಲಕ ಡಿ.2ರೊಳಗೆ ಅರ್ಜಿ ಸಲ್ಲಿಸಬಹುದು. ಅರ್ಜಿ ಶುಲ್ಕ ಪಾವತಿಸಲು ಡಿ.3ರಿಂದ 6ರವರೆಗೆ ಅವಕಾಶವಿದೆ. 2027ರ ಜ.11ರಂದು ಪರೀಕ್ಷೆ ಕೇಂದ್ರದ ಬಗ್ಗೆ ಮಾಹಿತಿ ನೀಡಲಾಗುತ್ತದೆ. ಆ.25ರಂದು ಪರೀಕ್ಷೆಯ ಎನ್ ಎಟಿ ವೆಬ್ ಸೈಟ್ ನಲ್ಲಿಪ್ರವೇಶ ಪತ್ರ ಪಡೆಯಬಹುದಾಗಿದೆ. ಆ.31ರಂದು ಪರೀಕ್ಷೆ ನಡೆಯಲಿದೆ. ಪರೀಕ್ಷೆಯು ಬಹು ಆಯ್ಕೆ ಪ್ರಶ್ನೆ ಪತ್ರಿಕೆ ಒಳಗೊಂಡಿದೆ. ಹೆಚ್ಚಿನ ಮಾಹಿತಿಗೆ ವೆಬ್ ಸೈಟ್ ವೀಕ್ಷಿಸಬಹುದು ಎಂದು ನಿರ್ದೇಶಕರು ತಿಳಿಸಿದ್ದಾರೆ.

ಕೌಶಲ್ಯಾಭಿವೃದ್ಧಿ ತರಬೇತಿಗೆ ಅರ್ಜಿ

ಮಡಿಕೇರಿ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ ಕೌಶಲ್ಯಾಭಿವೃದ್ಧಿ ತರಬೇತಿಯನ್ನು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದಲ್ಲಿನೀಡಲಾಗುತ್ತಿದ್ದು ಅರ್ಜಿ ಆಹ್ವಾನಿಸಲಾಗಿದೆ.

ಈ ತರಬೇತಿಗೆ ಅಭ್ಯರ್ಥಿಗಳು ಆನ್ ಲೈನ್ ನಲ್ಲಿಅರ್ಜಿಯನ್ನು ನ.10 ರವರೆಗೆ ಪಡೆಯಬಹುದು. ಅರ್ಹ ವಿದ್ಯಾರ್ಥಿಗಳು ಕೂಡಲೇ ಇದರ ಸದುಪಯೋಗಪಡಿಸಿಕೊಳ್ಳಬೇಕು. ಹೆಚ್ಚಿನ ಮಾಹಿತಿಗೆ ಕಚೇರಿ ದೂ.ಸಂ.08272-225528/ 220214, ತಾಲೂಕು ಮಾಹಿತಿ ಕೇಂದ್ರ, ಸೋಮವಾರಪೇಟೆ ದೂ.ಸಂ. 8548068519, ತಾಲೂಕು ಮಾಹಿತಿ ಕೇಂದ್ರ ವಿರಾಜಪೇಟೆ ದೂ.ಸಂ. 9900731037 ಹಾಗೂ ಜಿಲ್ಲಾಅಲ್ಪಸಂಖ್ಯಾತರ ಮಾಹಿತಿ ಕೇಂದ್ರ, ಮೌಲಾನಾ ಆಜಾದ್ ಭವನ, ಎಫ್ ಎಂಸಿ ಕಾಲೇಜು ಹತ್ತಿರ, ಮಡಿಕೇರಿ ಕೊಡಗು ಜಿಲ್ಲೆದೂ.ಸಂ. 9972799091 ನ್ನು ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾಅಧಿಕಾರಿ ಸಚ್ಚಿನ್ ಸಿ.ಎಸ್ .ತಿಳಿಸಿದ್ದಾರೆ.