ವಿಕ ಸುದ್ದಿಲೋಕ ಸೋಮವಾರಪೇಟೆರಾಜ್ಯ ಸರಕಾರವು ದಿನ ಬಳಕೆಯ ವಸ್ತುಗಳ ಮೇಲಿನ ಬೆಲೆಯನ್ನು ಏರಿಸುವ ಮೂಲಕ ಜನವಿರೋಧಿ ನೀತಿಯನ್ನು ಅನುಸರಿಸುತ್ತಿದೆ ಎಂದು ಆರೋಪಿಸಿ ಜೆಡಿಎಸ್ ಕಾರ ್ಯಕರ್ತರು ಸೋಮವಾರಪೇಟೆ ಪಟ್ಟಣದಲ್ಲಿಪ್ರತಿಭಟನೆ ನಡೆಸಿದರು.
ಖಾಸಗಿ ಬಸ್ ನಿಲ್ದಾಣದ ಪುಟ್ಟಪ್ಪ ವೃತ್ತದ ಬಳಿ ಪ್ರತಿಭಟನೆ ನಡೆಸಿದ ಕಾರ್ಯಕರ್ತರು, ಕಾಂಗ್ರೆಸ್ ಸರಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಈ ಸಂದರ್ಭ ಮಾತನಾಡಿದ ಪಕ್ಷದ ತಾಲೂಕು ಅಧ್ಯಕ್ಷ ಸಿ.ಎಸ್ .ನಾಗರಾಜ್ ,‘‘ಕಾಂಗ್ರೆಸ್ ಸರಕಾರ ಅವೈಜ್ಞಾನಿಕ ಯೋಜನೆಗಳ ಮುಖಾಂತರ ರಾಜ್ಯವನ್ನು ಸಾಲದ ಸುಳಿಗೆ ಸಿಲುಕಿಸಿದೆ. ರಾಜ್ಯದಲ್ಲಿಅಭಿವೃದ್ಧಿ ಮರೀಚಿಕೆಯಾಗಿದೆ. ನಿರುದ್ಯೋಗ ಸಮಸ್ಯೆ ಹೆಚ್ಚುತ್ತಿದೆ. ಇದರ ನಡುವೆ ಬಸ್ ಪ್ರಯಾಣ ದರವನ್ನೂ ಭಾರಿ ಪ್ರಮಾಣದಲ್ಲಿಏರಿಕೆ ಮಾಡಿದೆ. ಹಾಲು ಸೇರಿದಂತೆ ದಿನೋಪಯೋಗಿ ವಸ್ತುಗಳ ಮೇಲಿನ ಬೆಲೆ ಏರಿಕೆಯಿಂದ ಜನತೆ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ,’’ಎಂದು ಅಸಮಾಧಾನ ವ್ಯಕ್ತಪಡಿಸಿದರು.
‘‘ಈಗಾಗಲೇ ಖಜಾನೆ ಖಾಲಿ ಮಾಡಿಕೊಂಡಿರುವ ಕಾಂಗ್ರೆಸ್ ಸರಕಾರ, ಬೆಲೆ ಏರಿಕೆಯ ಮೂಲಕ ಮತ್ತೆ ಜನಸಾಮಾನ್ಯರ ಮೇಲೆ ಬರೆ ಎಳೆಯುತ್ತಿದೆ. ಇಂತಹ ಜನವಿರೋಧಿ ನೀತಿಗಳ ವಿರುದ್ಧ ಮುಂದೆಯೂ ಜೆಡಿಎಸ್ ಪ್ರತಿಭಟನೆ ನಡೆಸಲಿದೆ,’’ಎಂದರು.
ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರು ಸಮಸ್ಯೆಗಳ ಬಗ್ಗೆ ಮಾತನಾಡದೇ ದಿನ ಬೆಳಗಾದರೆ ಆರ್ ಎಸ್ ಎಸ್ , ಎಚ್ .ಡಿ.ಕುಮಾರಸ್ವಾಮಿ ಅವರ ಜಪ ಮಾಡುತ್ತಿದ್ದಾರೆ. ಹಳ್ಳಿಗರ ಮತದಿಂದಲೇ ಗೆದ್ದು ಅಧಿಕಾರ ಹಿಡಿದಿರುವ ಪ್ರಿಯಾಂಕ್ ಖರ್ಗೆ ಅವರು ಹೇಳಿಕೆ ಗ್ರಾಮೀಣ ಪ್ರದೇಶದ ಜನರನ್ನು, ರೈತರನ್ನು ಅಪಮಾನ ಮಾಡಿದ್ದಾರೆ. ಇದಕ್ಕೆ ಮುಂದಿನ ಚುನಾವಣೆಯಲ್ಲಿಜನರು ತಕ್ಕ ಪಾಠ ಕಲಿಸಲಿದ್ದಾರೆ,’’ಎಂದು ಹೇಳಿದರು.
ನಂತರ ತಾಲೂಕು ಕಚೇರಿಗೆ ಆಗಮಿಸಿದ ಕಾರ್ಯಕರ್ತರು, ಬೆಲೆ ಏರಿಕೆಯನ್ನು ಇಳಿಸಬೇಕೆಂದು ಆಗ್ರಹಿಸುವ ಮನವಿ ಪತ್ರವನ್ನು ತಾಲೂಕು ತಹಸೀಲ್ದಾರ್ ಕೆ.ಕೆ.ಕೃಷ್ಣಮೂರ್ತಿ ಅವರ ಮೂಲಕ ಸರಕಾರಕ್ಕೆ ಸಲ್ಲಿಸಿದರು.