ವಿಜಯಪುರ: ಆಲಮಟ್ಟಿ ಡ್ಯಾಂನಿಂದ ಕೆಪಿಸಿಎಲ್ ಮೂಲಕ ನೀರು ಹರಿಸುವುದನ್ನು ಸ್ಥಗಿತಗೊಳಿಸಬೇಕು ಹಾಗೂ ಡಿಸೆಂಬರ್ ಅಂತ್ಯದವರೆಗೂ ಕಾಲುವೆಗಳಿಗೆ ನೀರು ಹರಿಸಬೇಕು ಎಂದು ಆಗ್ರಹಿಸಿ ನ.13ರಂದು ಬೆಳಗ್ಗೆ 11ಕ್ಕೆ ಆಲಮಟ್ಟಿಯಲ್ಲಿಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಅರವಿಂದ ಕುಲಕರ್ಣಿ ತಿಳಿಸಿದ್ದಾರೆ.ಅಖಂಡ ಕರ್ನಾಟಕ ರೈತ ಸಂಘ, ರಾಜ್ಯ ರೈತ ಸಂಘ ಮತ್ತು ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಸಂಘಟನೆಗಳ ಸಹಯೋಗದಲ್ಲಿಅಂದು ರಾಮಲಿಂಗೇಶ್ವರ ದೇವಸ್ಥಾನದಿಂದ ಮೆರವಣಿಗೆ ಮೂಲಕ ಕೆಬಿಜೆಎನ್ ಎಲ್ ಮುಖ್ಯ ಅಭಿಯಂತರರ ಕಚೇರಿ ವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ, ನಂತರ ಮನವಿ ಸಲ್ಲಿಸಲಾಗುವುದು ಪ್ರಕಟಣೆಯಲ್ಲಿತಿಳಿಸಿದ್ದಾರೆ.