ಬೀದರ್ : ಸಹಕಾರ ಇಲಾಖೆ, ಜಿಲ್ಲಾಸಹಕಾರ ಯೂನಿಯನ್ ನಿ., ಬೀದರ್ ಹಾಗೂ ಬೆಂಗಳೂರಿನ ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರ ನಿಗಮದ ನೇತೃತ್ವದಲ್ಲಿನ.18 ರಂದು ಬೆಳಗ್ಗೆ 11 ಕ್ಕೆ ರಾಜ್ಯ ಮಟ್ಟದ 73ನೇ ಅಖಿಲ ಭಾರತ ಸಹಕಾರ ಸಪ್ತಾಹ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಬೀದರ್ ಸಹಕಾರ ಸಂಘಗಳ ಉಪ ನಿಬಂಧಕರು ತಿಳಿಸಿದ್ದಾರೆ. ‘ಸಹಕಾರ ಸಂಸ್ಥೆಗಳ ಬೆಳವಣಿಗೆಯಲ್ಲಿಉತ್ತಮ ಪರಿಸರ, ತಂತ್ರಜ್ಞಾನ ಕೌಶಲಾಧಾರಿತ ವೃತ್ತಿಪರ ಸೇವೆ’ ಸಹಕಾರ ಧ್ಯೇಯವಾಗಿದೆ. ಸಹಕಾರ ಸಪ್ತಾಹದ 5ನೇ ದಿನವಾದ ಸಾರ್ವಜನಿಕ, ಖಾಸಗಿ ಸಹಕಾರಿ ಪಾಲುದಾರಿಕೆ ಬಲಪಡಿಸುವ ದಿನ ವಿಚಾರಣೆಗಾಗಿ ಅಂದು ಬೀದರ್ ನ ಜನವಾಡಾ ರಸ್ತೆಯಲ್ಲಿರುವ ಜೀರಾ ಕನ್ವೆನ್ಷನ್ ಹಾಲ್ ನಲ್ಲಿಕಾರ್ಯಕ್ರಮ ಏರ್ಪಡಿಸಲಾಗಿದೆ. ಸಹಕಾರಿ ಬಂಧುಗಳು ಹೆಚ್ಚಿನ ಸಂಖ್ಯೆಯಲ್ಲಿಆಗಮಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ಅವರು ತಿಳಿಸಿದ್ದಾರೆ.ನ.15 ರಂದು ಗ್ರಾಮ ವಿಕಾಸ ಸಂಗಮ
ಬೀದರ್ : ಕರ್ನಾಟಕ ರಾಜ್ಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ (ಬಿ-ಗ್ರೇಡ್ ) ಹುದ್ದೆ ಉನ್ನತೀಕರಣ ಸಂಘವು ಕಲಬುರಗಿಯ ಆಳಂದ ರಸ್ತೆಯಲ್ಲಿರುವ ಎಸ್ .ಬಿ. ಕನ್ವೆನ್ಶನ್ ಹಾಲ್ ನಲ್ಲಿನ.15 ರಂದು ಗ್ರಾಮ ವಿಕಾಸ ಸಂಗಮ ಶೀರ್ಷಿಕೆಯಡಿ ಹಮ್ಮಿಕೊಂಡಿರುವ ರಾಜ್ಯಮಟ್ಟದ ಮಹಾ ಸಮಾವೇಶದಲ್ಲಿಜಿಲ್ಲೆಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಹೆಚ್ಚಿನ ಸಂಖ್ಯೆಯಲ್ಲಿಪಾಲ್ಗೊಳ್ಳಬೇಕು ಎಂದು ಸಂಘದ ಕಲಬುರಗಿ ವಿಭಾಗೀಯ ಕಾರ್ಯದರ್ಶಿ ಉಮೇಶ ಜಾಬಾ ಹಾಗೂ ಜಿಲ್ಲಾಅಧ್ಯಕ್ಷ ಚಂದ್ರಶೇಖರ ಬನ್ನಾಳೆ ಮನವಿ ಮಾಡಿದ್ದಾರೆ. ಬೆಳಗ್ಗೆ 11ಕ್ಕೆ ನಡೆಯುವ ಸಮಾರಂಭದಲ್ಲಿಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಖಂಡ್ರೆ ಸಮಾವೇಶ ಉದ್ಘಾಟಿಸಲಿದ್ದಾರೆ. ಕಲಬುರಗಿ ದಕ್ಷಿಣ ಶಾಸಕ ಅಲ್ಲಮಪ್ರಭು ಪಾಟೀಲ ಅಧ್ಯಕ್ಷತೆ, ಕಲಬುರಗಿಯ ಚೌದಾಪುರಿ ಹಿರೇಮಠದ ರಾಜಶೇಖರ ಶಿವಾಚಾರ್ಯ ಸಾನ್ನಿಧ್ಯ, ಗೃಹ ಸಚಿವ ಪ್ರಿಯಾಂಕ್ ಖರ್ಗೆ, ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ್ ಪಾಟೀಲ್ , ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಡಾ. ಅಜಯ್ ಸಿಂಗ್ ಘನ ಉಪಸ್ಥಿತಿ ವಹಿಸಲಿದ್ದಾರೆ. ಸಂಸದರಾದ ರಾಧಾಕೃಷ್ಣ ದೊಡ್ಡಮನಿ, ಸಾಗರ್ ಖಂಡ್ರೆ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ. ಅಧಿಕಾರಿಗಳು, ಸಂಘದ ರಾಜ್ಯ ಹಾಗೂ ಜಿಲ್ಲಾಪದಾಧಿಕಾರಿಗಳು ಭಾಗಹಿಸಲಿದ್ದಾರೆ ಎಂದು ತಿಳಿಸಿದ್ದಾರೆ.
ಪಕ್ಷಕ್ಕೆ ನೂತನ ಸದಸ್ಯರುಗಳ ಆಯ್ಕೆ
ಬೀದರ್ : ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಸರ್ವೋದಯ ಕರ್ನಾಟಕ ಪಕ್ಷದ ಸಂಘಟನೆ ಬಲಪಡಿಸುವ ಉದ್ದೇಶದಿಂದ ನೂತನ ಸದಸ್ಯರನ್ನು ಆಯ್ಕೆ ಮಾಡಿ ವಿವಿಧ ಜವಾಬ್ದಾರಿ ವಹಿಸಲಾಗಿದೆ. ರೈತರ ಹಕ್ಕುಗಳ ರಕ್ಷಣೆ, ರೈತರ ಸಮಸ್ಯೆಗಳ ಪರಿಹಾರ ಹಾಗೂ ಜನಪರ ಹೋರಾಟಗಳಲ್ಲಿಸಕ್ರಿಯವಾಗಿ ಪಾಲ್ಗೊಂಡು ಸಂಘಟನೆಯ ಆಶಯಗಳನ್ನು ಜನರಿಗೆ ತಲುಪಿಸುವ ನಿಟ್ಟಿನಲ್ಲಿನೂತನ ಸದಸ್ಯರಿಗೆ ಜವಾಬ್ದಾರಿ ನೀಡಲಾಗಿದೆ. ನೂತನ ಸದಸ್ಯರಾಗಿ ನವೀನಕುಮಾರ ಹೊಂಡಾಳೆ, ಹನುಮಂತ ಜಾಂತ್ಯೆ, ಬಸಯ್ಯ ಸ್ವಾಮಿ, ಸಂತೋಷಕುಮಾರ ಹಾಗೂ ಬಸವರಾಜ ಚಿದ್ರೆ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಸರ್ವೋದಯ ಕರ್ನಾಟಕ ಪಕ್ಷದ ಜಿಲ್ಲಾಅಧ್ಯಕ್ಷರಾದ ಕೊಂಡಿಬಾರಾವ ಪಾಂಡರೆ ಹಾಗೂ ಜಿಲ್ಲಾಪ್ರಧಾನ ಕಾರ್ಯದರ್ಶಿ ಶಿವಾನಂದ ಸೋಮಯ್ಯ ಸ್ವಾಮೀಜಿ ತಿಳಿಸಿದ್ದಾರೆ.