ಮಿರಖಲ್ ಗ್ರಾಮದಲ್ಲಿಕುಡಿಯುವ ನೀರಿನ ಸಮಸ್ಯೆ ಪರಿಹರಿಸುವಂತೆ ಆಗ್ರಹಿಸಿ, ತಾಪಂ ಇಒ ಮಹಾದೇವ ಜಮ್ಮು ಅವರಿಗೆ ಸಂಭಾಜಿ ಬ್ರಿಗೇಡ್ ತಾಲೂಕು ಘಟಕದ ಅಧ್ಯಕ್ಷ ಜ್ಞಾನೋಬಾ ನಿಟ್ಟೂರೆ ಮನವಿ ಸಲ್ಲಿಸಿದರು. ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ಆಗ್ರಹ
ವಿಕ ಸುದ್ದಿಲೋಕ ಹುಲಸೂರ
ತಾಲೂಕಿನ ಮೀರಖಲ್ ಗ್ರಾಮದ ಕುಂಬಾರ ಓಣಿಯಲ್ಲಿಕುಡಿಯುವ ನೀರಿನ ಸಮಸ್ಯೆ ಉಂಟಾಗಿದೆ. ಕೂಡಲೇ ಕೊಳವೆಬಾವಿ ಕೊರೆಸಿ ನೀರಿನ ವ್ಯವಸ್ಥೆ ಕಲ್ಪಿಸಬೇಕು ಎಂದು ಆಗ್ರಹಿಸಿ, ಸಂಭಾಜಿ ಬ್ರಿಗೇಡ್ ತಾಲೂಕು ಘಟಕದ ಅಧ್ಯಕ್ಷ ಜ್ಞಾನೋಬಾ ನಿಟ್ಟೂರೆ ಒತ್ತಾಯಿಸಿದ್ದಾರೆ. ಈ ಕುರಿತು ತಾಪಂ ಇಒ ಮಹಾದೇವ ಜಮ್ಮು ಅವರಿಗೆ ಮನವಿ ಸಲ್ಲಿಸಿರುವ ಅವರು,ಕಳೆದ ವಾರ ನಡೆದ ಪ್ರಜಾ ಸೇವಾ ಆಂದೋಲನದಲ್ಲಿಕುಡಿಯುವ ನೀರಿನ ಸಮಸ್ಯೆ ಕುರಿತು ಅಧಿ ಕಾರಿಗಳ ಗಮನಕ್ಕೆ ತರಲಾಗಿತ್ತು. ಸಮಸ್ಯೆ ಪರಿಹರಿಸಲು ನಾಲ್ಕು ದಿನಗಳ ಕಾಲಾವಕಾಶ ನೀಡುವುದಾಗಿ ತಾಲೂಕು ಪಂಚಾಯಿತಿ ಅಧಿ ಕಾರಿಗಳು ಭರವಸೆ ನೀಡಿದ್ದರು. ಆದರೆ, ಈವರೆಗೆ ಭರವಸೆ ಈಡೇರಿಲ್ಲ. ಇದರಿಂದ ಗ್ರಾಮಸ್ಥರು ಕುಡಿಯುವ ನೀರಿಗಾಗಿ ತೊಂದರೆ ಅನುಭವಿಸುವಂತಾಗಿದೆ. ಕೂಡಲೇ ಕೊಳವೆಬಾವಿ ಕೊರೆಸಿ ಕುಡಿಯುವ ನೀರಿನ ಸಮಸ್ಯೆ ಪರಿಹರಿಸಬೇಕು. ಇಲ್ಲದಿದ್ದರೆ ಸಂಭಾಜಿ ಬ್ರಿಗೇಡ್ ವತಿಯಿಂದ ಉಗ್ರ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಅವರು ಮನವಿ ಪತ್ರದಲ್ಲಿಎಚ್ಚರಿಸಿದ್ದಾರೆ. ಈ ವೇಳೆ ಬ್ರಿಗೇಡ್ ನ ಹಲವು ಪದಾಧಿಕಾರಿಗಳು ಇದ್ದರು.