ಭಾರತದ ಸಂವಿಧಾನವು ದೇಶದ ಆಡಳಿತ ವ್ಯವಸ್ಥೆಯ ಮೂಲ ಆಧಾರ ಮಾತ್ರವಲ್ಲದೆ ಪ್ರತಿಯೊಬ್ಬ ನಾಗರಿಕನ ಸ್ವಾತಂತ್ರ್ಯ, ಸಮಾನತೆ, ಘನತೆ ಮತ್ತು ಹಕ್ಕುಗಳನ್ನು ರಕ್ಷಿಸುವ ಪವಿತ್ರ ಕಾನೂನು ಆಗಿದೆ ಎಂದು ಪ್ರಧಾನ ಹಿರಿಯ ಸಿವಿಲ್ ನ್ಯಾಯಾಲಯದ ನ್ಯಾಯಾಧೀಶರು ಹಾಗು ತಾಲೂಕು ಕಾನೂನು ಸೇವಾ ಸಮಿತಿ ಅಧ್ಯಕ್ಷ ಸುಧೀರ್ ತಿಳಿಸಿದರು.ಪಟ್ಟಣದ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಸಭಾಂಗಣದಲ್ಲಿರಾಷ್ಟ್ರೀಯ ಕಾನೂನು ಸೇವೆಗಳ ದಿನ ಮತ್ತು ಸಂವಿದಾನ ದಿನದ ಕುರಿತು ಕಾನೂನು ಜಾಗೃತಿ ಅರಿವು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ‘‘1949ರ ನ.26ರಂದು ಸಂವಿಧಾನ ರಚನಾ ಸಭೆಯು ನಮ್ಮ ಸಂವಿಧಾನವನ್ನು ಅಂಗೀಕರಿಸಿತು. 1950ರ ಜ. 26ರಂದು ಅದು ಜಾರಿಗೆ ಬಂದಿತು. ಈ ಐತಿಹಾಸಿಕ ಕಾರ್ಯದಲ್ಲಿಡಾ. ಬಿ.ಆರ್ . ಅಂಬೇಡ್ಕರ್ ಅವರ ಕೊಡುಗೆ ಸ್ಮರಣೀಯವಾದುದು. ಸಂವಿಧಾನದ ಪ್ರಸ್ತಾವನೆಯು ಭಾರತದ ಆತ್ಮವಾಗಿದೆ. ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯ ನ್ಯಾಯ, ವಿಚಾರ, ಅಭಿವ್ಯಕ್ತಿ, ನಂಬಿಕೆ, ಧರ್ಮ ಮತ್ತು ಸ್ವಾತಂತ್ರ್ಯ, ಸ್ಥಾನಮಾನ ಮತ್ತು ಅವಕಾಶಗಳ ಸಮಾನತೆ ಹಾಗೂ ವ್ಯಕ್ತಿಯ ಘನತೆ ಮತ್ತು ರಾ?Ü್ಟ್ರದ ಏಕತೆ ಮತ್ತು ಸಮಗ್ರತೆಯನ್ನು ಸಾರುವ ಸಹೋದರತ್ವ ನಮ್ಮ ಸಂವಿಧಾನದ ಪ್ರಮುಖ ಆಶಯಗಳಾಗಿವೆ. ನ್ಯಾಯಾಂಗವು ಸಂವಿಧಾನದ ಆಶಯಗಳನ್ನು ಎತ್ತಿಹಿಡಿಯುವ ಪ್ರಮುಖ ಸ್ತಂಭವಾಗಿದೆ. ಸಂವಿಧಾನದ ವಿಧಿ 14ರ ಅಡಿಯಲ್ಲಿಕಾನೂನಿನ ಮುಂದೆ ಸಮಾನತೆಯ ಭರವಸೆ ನೀಡಲಾಗಿದೆ,’’ ಎಂದು ಹೇಳಿದರು.
‘‘ನ್ಯಾಯಾಧೀಶರಾಗಿ ನಮ್ಮ ಜವಾಬ್ದಾರಿ ಕೇವಲ ಪ್ರಕರಣಗಳನ್ನು ವಿಚಾರಣೆ ನಡೆಸಿ ತೀರ್ಪು ನೀಡುವುದಕ್ಕೆ ಸೀಮಿತವಾಗಿಲ್ಲ. ಪ್ರತಿಯೊಬ್ಬ ವ್ಯಕ್ತಿಗೂ ನ್ಯಾಯ ದೊರೆಯುವಂತೆ ಮಾಡುವುದು, ಕಾನೂನಿನ ಆಳ್ವಿಕೆಯನ್ನು ಎತ್ತಿಹಿಡಿಯುವುದು ಮತ್ತು ನ್ಯಾಯಾಂಗ ದ ಮೇಲಿನ ಜನರ ವಿಶ್ವಾಸವನ್ನು ಕಾಪಾಡುವುದು ನಮ್ಮ ಪ್ರಮುಖ ಕರ್ತವ್ಯವಾಗಿದೆ. ನ್ಯಾಯವು ವಿಳಂಬವಾಗಬಾರದು. ಆರ್ಥಿಕವಾಗಿ ದುರ್ಬಲರು, ಮಹಿಳೆಯರು, ಮಕ್ಕಳು ಹಾಗೂ ಸಮಾಜದ ಅಂಚಿನಲ್ಲಿರುವ ಜನರಿಗೂ ನ್ಯಾಯ ಸುಲಭವಾಗಿ ತಲುಪಬೇಕು. ನ್ಯಾಯಾಧೀಶರು ಮತ್ತು ವಕೀಲರು ಪರಸ್ಪರ ಗೌರವ, ವೃತ್ತಿಪರ ನೈತಿಕತೆ ಹಾಗೂ ಸಂವಿಧಾನಾತ್ಮಕ ಮೌಲ್ಯಗಳೊಂದಿಗೆ ಕಾರ್ಯನಿರ್ವಹಿಸಿದಾಗ ನ್ಯಾಯಾಂಗ ವ್ಯವಸ್ಥೆ ಮತ್ತಷÜು್ಟ ಬಲಿಷÜ್ಠವಾಗುತ್ತದೆ. ಇಂದಿನ ಯುವಜನತೆ ಸಂವಿಧಾನವನ್ನು ಕೇವಲ ಪರೀಕ್ಷೆಗಾಗಿ ಓದದೆ, ಅದರ ಮೌಲ್ಯಗಳನ್ನು ಜೀವನದಲ್ಲಿಅಳವಡಿಸಿಕೊಳ್ಳಬೇಕು. ಹಕ್ಕುಗಳ ಬಗ್ಗೆ ಜಾಗೃತರಾಗುವುದರ ಜೊತೆಗೆ ಕರ್ತವ್ಯಗಳನ್ನೂ ಪ್ರಾಮಾಣಿಕವಾಗಿ ಪಾಲಿಸಬೇಕು,’’ ಎಂದು ತಿಳಿಸಿದರು.
ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ 1ನೇ ಅಪರ ಸಿವಿಲ್ ನ್ಯಾಯಾಧೀಶರಾದ ಸಿ.ಸುಷ್ಮಾ ಭಾಗವಹಿಸಿದ್ದರು.
ಕಾಲೇಜಿನ ಪ್ರಾಂಶುಪಾಲರಾದ ಡಾ.ವಿ.ವಿ.ಜಗದೀಶ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ತಾಲೂಕು ಕಾನೂನು ಸೇವಾ ಸಮಿತಿಯ ಪ್ಯಾನಲ್ ವಕೀಲರಾದ ಅರುಣ್ ಕುಮಾರ್ , ಡಿ.ಜೆ.ಗಣೇಶ್ , ಎಸ್ .ಎನ್ .ಧನಂಜಯ, ಕಾಲೇಜಿನ ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಪ್ರೊ.ಎ.ಎನ್ .ರಾಜೇಶ್ವರಿ, ಐ.ಕ್ಯೂ.ಏ.ಸಿ. ಸಂಯೋಜಕ ಬಿ.ಎಂ.ಉಮೇಶ್ , ಪ್ರಾದ್ಯಾಪಕ ಜಯಕೀರ್ತಿ ಸೇರಿದಂತೆ ವಿದ್ಯಾರ್ಥಿಗಳು ಮತ್ತು ಉಪನ್ಯಾಸಕರು ಹಾಜರಿದ್ದರು.
ಚಿತ್ರಶೀರ್ಷಿಕೆ: ಋಈ್ಗ12NO್ಖಓ್ಕP1ಧಿಪಟ್ಟಣದ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಸಭಾಂಗಣದಲ್ಲಿರಾಷ್ಟಿ್ರೕಯ ಕಾನೂನು ಸೇವೆಗಳ ದಿನ ಮತ್ತು ಸಂವಿದಾನ ದಿನದ ಕುರಿತು ಕಾನೂನು ಜಾಗೃತಿ ಅರಿವು ಕಾರ್ಯಕ್ರಮವನ್ನು ನ್ಯಾಯಾಧೀಶರಾದ ಸುಧೀರ್ ಮತ್ತು ಸುಷ್ಮ ಉದ್ಘಾಟಿಸಿದರು.