ಸ್ವಾತಂತ್ರ್ಯ ಹೋರಾಟಗಾರ ಬಿರ್ಸಾ ಮುಂಡಾ ಅವರ ಜನ್ಮದಿನಾಚರಣೆ
ನಾಳೆಯಿಂದ ವಿವಿಧ ಕಾರ್ಯಕ್ರಮಗಳುವಿಕ ಸುದ್ದಿಲೋಕ ಹುಬ್ಬಳ್ಳಿ
ಬುಡಕಟ್ಟು ಸಮುದಾಯದ ಧೀಮಂತ ನಾಯಕ, ಸ್ವಾತಂತ್ರ್ಯ ಹೋರಾಟಗಾರ ಬಿರ್ಸಾ ಮುಂಡಾ ಅವರ ಜನ್ಮದಿನದ ಅಂಗವಾಗಿ ಬಿಜೆಪಿಯಿಂದ ನ.14 ಹಾಗೂ 15ರಂದು ಧಾರವಾಡ ಗ್ರಾಮಾಂತರ ಮತ್ತು ಹು-ಧಾ ಮಹಾನಗರ ಜಿಲ್ಲೆಗಳಲ್ಲಿವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಧಾರವಾಡ ಗ್ರಾಮಾಂತರ ಜಿಲ್ಲಾ ಎಸ್ಟಿ ಮೋರ್ಚಾ ಅಧ್ಯಕ್ಷ ಅಶೋಕ ಸೋಲಾರಗೊಪ್ಪ ಹೇಳಿದರು.
ನಗರದಲ್ಲಿಗುರುವಾರ ನಡೆದ ಸುದ್ದಿಗೋಷ್ಠಿಯಲ್ಲಿಮಾತನಾಡಿದ ಅವರು, ಸ್ವಾತಂತ್ರ್ಯ ಹೋರಾಟದ ಸಂದರ್ಭದಲ್ಲಿಬ್ರಿಟಿಷರ ವಿರುದ್ಧ ಹೋರಾಡಿ ಅತೀ ಚಿಕ್ಕ ವಯಸ್ಸಿನಲ್ಲಿಯೇ ದೇಶಕ್ಕಾಗಿ ಪ್ರಾಣತ್ಯಾಗ ಮಾಡಿದ ಬಿರ್ಸಾ ಮುಂಡಾ ಅವರ ಹೋರಾಟ, ತ್ಯಾಗ ಹಾಗೂ ದೇಶಪ್ರೇಮವನ್ನು ಇಂದಿನ ಯುವಜನರಿಗೆ ಪರಿಚಯಿಸುವುದು ಈ ಕಾರ್ಯಕ್ರಮದ ಉದ್ದೇಶವಾಗಿದೆ. ಈ ಹಿಂದೆ ಜಾರ್ಖಂಡ್ ಗೆ ಸೀಮಿತವಾಗಿದ್ದ ಜಯಂತಿ ಆಚರಣೆಯನ್ನು ದೇಶಾದ್ಯಂತ ವಿಸ್ತರಿಸುವ ಮೂಲಕ ಬುಡಕಟ್ಟು ನಾಯಕರಿಗೆ ಗೌರವ ಸಲ್ಲಿಸಲಾಗುತ್ತಿದೆ ಎಂದರು.
ನ.14ರಂದು ತಾಲೂಕುಮಟ್ಟದಲ್ಲಿಸ್ವಾತಂತ್ರ್ಯ ಹೋರಾಟಗಾರರ ಮೂರ್ತಿಗಳ ಸ್ವಚ್ಛತಾ ಅಭಿಯಾನ ಹಾಗೂ ದೀಪೋತ್ಸವ. ನ.15ರಂದು ಬೆಳಗ್ಗೆ 10.30ಕ್ಕೆ ಹುಬ್ಬಳ್ಳಿ ಅರವಿಂದ ನಗರದಲ್ಲಿರುವ ಬಿಜೆಪಿ ಕಾರ್ಯಾಲಯದಲ್ಲಿಬಿರ್ಸಾ ಮುಂಡಾ ಜಯಂತಿ, ಭಾವಚಿತ್ರಕ್ಕೆ ಪುಷ್ಪಾರ್ಚನೆ ಮತ್ತು ಗಣ್ಯರಿಗೆ ಸನ್ಮಾನ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದರು.
ಮಹಾನಗರ ಜಿಲ್ಲಾ ಎಸ್ಸಿ ಮೋರ್ಟಾ ಅಧ್ಯಕ್ಷ ಅಶೋಕ ವಾಲ್ಮೀಕಿ ಮಾತನಾಡಿ, ಬುಡಕಟ್ಟು ಸಮುದಾಯದ ಮಹನೀಯರ ಸಾಧನೆಗಳನ್ನು ಎಲ್ಲೆಡೆ ಪರಿಚಯಿಸುವ ಕೆಲಸವಾಗಬೇಕು. ಈ ನಿಟ್ಟಿನಲ್ಲಿಬಿಜೆಪಿ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ ಎಂದರು.
ಬಿಜೆಪಿ ವಿಭಾಗ ಪ್ರಮುಖ ಜಯತೀರ್ಥ ಕಟ್ಟಿ ಮಾತನಾಡಿ, ಸ್ವಾತಂತ್ರ್ಯ ಹೋರಾಟದ ಇತಿಹಾಸದಲ್ಲಿಬಿರ್ಸಾ ಮುಂಡಾ ಅವರಂತಹ ಅನೇಕ ಹೋರಾಟಗಾರರ ತ್ಯಾಗಕ್ಕೆ ಸೂಕ್ತ ಪ್ರಚಾರ ಸಿಕ್ಕಿಲ್ಲ. ಅವರ ಇತಿಹಾಸವನ್ನು ಯುವಜನರಿಗೆ ಪರಿಚಯಿಸುವ ಅಗತ್ಯವಿದೆ. ಮಿಲಿಟರಿ ತರಬೇತಿಗೆ ಸಂಬಂಧಿಸಿದಂತೆ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಮಾತ್ರ ಅವಕಾಶ ಕಲ್ಪಿಸಿ ರಾಜ್ಯ ಸರಕಾರ ಟೆಂಡರ್ ಹಾಗೂ ಜಾಹೀರಾತು ಹೊರಡಿಸಿರುವುದು ಸರಿಯಲ್ಲ. ಎಲ್ಲಸಮುದಾಯಗಳ ವಿದ್ಯಾರ್ಥಿಗಳಿಗೂ ಸಮಾನ ಅವಕಾಶ ಕಲ್ಪಿಸಬೇಕು. ಸರಕಾರ ಅಧಿಸೂಚನೆ ಹಿಂಪಡೆಯದಿದ್ದರೆ ಬಿಜೆಪಿ ಹೋರಾಟ ನಡೆಸಲಿದೆ ಎಂದು ಎಚ್ಚರಿಸಿದರು.
ನ.15ರಂದು ರಾಜ್ಯದ ಉಸ್ತುವಾರಿ ನಾಯಕರು ನಗರಕ್ಕೆ ಆಗಮಿಸಲಿದ್ದು, ಮುಂಬರುವ ಚುನಾವಣೆಗಳ ಹಿನ್ನೆಲೆಯಲ್ಲಿಪಕ್ಷದ ಸಂಘಟನೆ ಹಾಗೂ ಚುನಾವಣಾ ತಂತ್ರದ ಬಗ್ಗೆ ಚರ್ಚಿಸಲಿದ್ದಾರೆ. ಆಸಕ್ತರು ಹೆಚ್ಚಿನ ಸಂಖ್ಯೆಯಲ್ಲಿಆಗಮಿಸಬೇಕು ಎಂದು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿಜಿಲ್ಲಾಧ್ಯಕ್ಷ ತಿಪ್ಪಣ್ಣ ಮಜ್ಜಗಿ, ನಿಂಗಪ್ಪ ಸುತಗಟ್ಟಿ, ಮಣಿಕಂಠ ಶ್ಯಾಗೋಟಿ, ಗುರು ಪಾಟೀಲ ಸೇರಿದಂತೆ ಅನೇಕರಿದ್ದರು.