ಗೃಹಲಕ್ಷ್ಮೀ ಯೋಜನೆ ಅರ್ಜಿಗಳ ಮರುಪರಿಶೀಲನೆ ಅಂಗನವಾಡಿ ಕಾರ್ಯಕರ್ತೆಯರಿಗೆ ತರಬೇತಿ

Contributed by: aravindahebbar1971@gmail.com|Vijaya Karnataka•
training for anganwadi workers on re evaluation of gruhalakshmi scheme applications
ವಿಕ ಸುದ್ದಿಲೋಕ ಬೆಳ್ತಂಗಡಿ

ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳ ಅರ್ಜಿಗಳ ಮರುಪರಿಶೀಲನೆ ಕಾರ್ಯಕ್ಕೆ ಸಂಬಂಧಿಸಿದಂತೆ ಅಂಗನವಾಡಿ ಕಾರ್ಯಕರ್ತೆಯರಿಗೆ ತರಬೇತಿ ಕಾರ್ಯಕ್ರಮ ಬುಧವಾರ ಬೆಳ್ತಂಗಡಿ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿನಡೆಯಿತು.
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಪಂಚ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ರಕ್ಷಿತ್ ಶಿವರಾಂ, ಗೃಹಲಕ್ಷ್ಮೀ ಯೋಜನೆಯ ಅರ್ಜಿಗಳ ಮರುಪರಿಶೀಲನೆ ಕಾರ್ಯವನ್ನು ಸಮರ್ಪಕವಾಗಿ ಹಾಗೂ ಜವಾಬ್ದಾರಿಯಿಂದ ನಿರ್ವಹಿಸುವಂತೆ ಅಂಗನವಾಡಿ ಕಾರ್ಯಕರ್ತೆಯರಿಗೆ ಸೂಚಿಸಿದರು. ಈ ಕಾರ್ಯಕ್ಕೆ ಪಂಚ ಗ್ಯಾರಂಟಿ ಅನುಷ್ಠಾನ ಸಮಿತಿ ವತಿಯಿಂದ ಅಗತ್ಯವಿರುವ ಎಲ್ಲರೀತಿಯ ಸಹಕಾರ ನೀಡುವುದಾಗಿ ಭರವಸೆ ನೀಡಿದರು.

ಅಧ್ಯಕ್ಷತೆ ವಹಿಸಿದ್ದ ತಾಪಂ ಕಾರ್ಯನಿರ್ವಹಣಾಧಿಕಾರಿ ಭವಾನಿ ಶಂಕರ್ ಮಾತನಾಡಿ, ಗೃಹಲಕ್ಷ್ಮೀ ಯೋಜನೆಯ ಅರ್ಜಿಗಳ ಮರುಪರಿಶೀಲನೆಯ ಉದ್ದೇಶ ಹಾಗೂ ಅದರ ಮಹತ್ವದ ಕುರಿತು ಮಾಹಿತಿ ನೀಡಿದರು.

ಶಿಶು ಅಭಿವೃದ್ಧಿ ಯೋಜನಾಧಿಕಾರಿ ಪ್ರಿಯಾ ಆಗ್ನೆಸ್ ,ಮರುಪರಿಶೀಲನಾ ಗಣತಿಯ ರೂಪುರೇಷೆಗಳು, ಕಾರ್ಯವಿಧಾನ ಹಾಗೂ ಅನುಸರಿಸಬೇಕಾದ ಕ್ರಮಗಳ ಕುರಿತು ವಿವರಿಸಿದರು. ತರಬೇತಿಯಲ್ಲಿನೀಡುವ ಮಾಹಿತಿಯನ್ನು ಸಮರ್ಪಕವಾಗಿ ಅಳವಡಿಸಿಕೊಂಡು, ನಿಗದಿತ ಅವಧಿಯೊಳಗೆ ಮರುಪರಿಶೀಲನಾ ಕಾರ್ಯವನ್ನು ಪೂರ್ಣಗೊಳಿಸುವಂತೆ ಸೂಚಿಸಿದರು.

ಕಾರ್ಯಕ್ರಮದಲ್ಲಿನೂತನ ತಾಲೂಕು ಪಂಚ ಗ್ಯಾರಂಟಿ ಅನುಷ್ಠಾ್ಠನ ಸಮಿತಿಯ ಎಲ್ಲಸದಸ್ಯರು, ತರಬೇತುದಾರರಾದ ವಾಣಿ ಶ್ರೀ ಹಾಗೂ ಕಾತ್ಯಾಯಿನಿ, ಇಲಾಖೆಯ ಸಿಬ್ಬಂದಿ ಮತ್ತು ಗಣತಿದಾರರಾದ ಅಂಗನವಾಡಿ ಕಾರ್ಯಕರ್ತೆಯರು ಉಪಸ್ಥಿತರಿದ್ದರು.

ಕಾತ್ಯಾಯಿನಿ ಕಾರ್ಯಕ್ರಮ ನಿರೂಪಿಸಿದರು. ವಾಣಿ ಶ್ರೀ ವಂದಿಸಿದರು.

ಪೊಟೋ...11ಎಂಜೆ ಗ್ಯಾರಂಟಿ.

ಚಿತ್ರ ವಿವರ-

ಪಂಚ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ರಕ್ಷಿತ್ ಶಿವರಾಂ ಕಾರ್ಯಕ್ರಮ ಉದ್ಘಾಟಿಸಿದರು.