ಸರಕಾರಿ ಶಾಲೆಗಳಲ್ಲಿಮಕ್ಕಳ ದಾಖಲಾತಿ ಹೆಚ್ಚಿಸಿ

Contributed by: jagadishjodubeeti@gmail.com|Vijaya Karnataka•
workshop to increase student enrollment in schools is teachers responsibility
ಕಾರ ್ಯಕ್ರಮ ಕ್ಷೇತ್ರ ಶಿಕ್ಷಣಾಧಿಕಾರಿ ನಟೇಶ್ ಹೇಳಿಕೆ

ವಿಕ ಸುದ್ದಿಲೋಕ ಗೋಣಿಕೊಪ್ಪ
ಸರಕಾರಿ ಶಾಲೆಗಳಲ್ಲಿವಿದ್ಯಾರ್ಥಿಗಳ ದಾಖಲಾತಿ ಹೆಚ್ಚಿಸುವುದು ಶಿಕ್ಷಕರ ಪ್ರಮುಖ ಜವಾಬ್ದಾರಿಯಾಗಿದ್ದು, ಈ ನಿಟ್ಟಿನಲ್ಲಿಎಲ್ಲಶಿಕ್ಷಕರು ಒಗ್ಗಟ್ಟಿನಿಂದ ಕಾರ್ಯನಿರ್ವಹಿಸಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ನಟೇಶ್ ಹೇಳಿದರು.

ಪೊನ್ನಂಪೇಟೆ ಕರ್ನಾಟಕ ಪಬ್ಲಿಕ್ ಸ್ಕೂಲ್ ನಲ್ಲಿನಡೆದ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಾರ ್ಯಕ್ರಮದಲ್ಲಿಮಾತನಾಡಿದರು.

‘‘ಜಿಲ್ಲೆಯ ಹಲವು ಸರಕಾರಿ ಶಾಲೆಗಳಲ್ಲಿವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಾಗುತ್ತಿರುವುದು ಕಳವಳಕಾರಿ ಸಂಗತಿಯಾಗಿದೆ. ಸರಕಾರಿ ಶಾಲೆಗಳ ಶೈಕ್ಷಣಿಕ ಗುಣಮಟ್ಟವನ್ನು ಮತ್ತಷ್ಟು ಹೆಚ್ಚಿಸುವುದರ ಜತೆಗೆ ಮುಂದಿನ ಶೈಕ್ಷಣಿಕ ವರ್ಷದಲ್ಲಿದಾಖಲಾತಿ ಹೆಚ್ಚಿಸಲು ಶಿಕ್ಷಕರು ವಿಶೇಷ ಪ್ರಯತ್ನ ಮಾಡಬೇಕು,’’ಎಂದು ತಿಳಿಸಿದರು.

ಕ್ಷೇತ್ರ ಸಮನ್ವಯಾಧಿಕಾರಿ ಕಳಕಂಡ ಮಹೇಶ್ ಮಾತನಾಡಿ,‘‘ಮಕ್ಕಳಲ್ಲಿರುವ ಸುಪ್ತ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುವುದೇ ಪ್ರತಿಭಾ ಕಾರಂಜಿಯ ಮೂಲ ಉದ್ದೇಶವಾಗಿದೆ. ಪ್ರತಿಯೊಂದು ಮಗುವಿನಲ್ಲಿಯೂ ವಿಭಿನ್ನ ಪ್ರತಿಭೆಗಳಿದ್ದು, ಅವುಗಳನ್ನು ಅನಾವರಣಗೊಳಿಸಲು ಇಂತಹ ವೇದಿಕೆಗಳು ಉತ್ತಮ ಅವಕಾಶ ಕಲ್ಪಿಸುತ್ತವೆ. ವಿದ್ಯಾರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಂಡು ತಾಲೂಕು, ಜಿಲ್ಲಾಹಾಗೂ ರಾಜ್ಯಮಟ್ಟದಲ್ಲಿಸಾಧನೆ ಮಾಡಬೇಕು. ಸ್ಪರ್ಧೆಗಳ ತೀರ್ಪುಗಾರರು ಯಾವುದೇ ಪೂರ್ವಾಗ್ರಹವಿಲ್ಲದೆ ನ್ಯಾಯಯುತ ತೀರ್ಪು ನೀಡಬೇಕು,’’ಎಂದರು.

ಮುಖ್ಯ ಶಿಕ್ಷಕ ಬಿ.ಎಂ. ವಿಜಯ್ ಮಾತನಾಡಿ,‘‘ಒಂದನೇ ತರಗತಿಯಿಂದ ಪಿಯುಸಿವರೆಗಿನ ವಿದ್ಯಾರ್ಥಿಗಳಲ್ಲಿವಿವಿಧ ಪ್ರತಿಭೆಗಳಿದ್ದು, ಅವುಗಳನ್ನು ಪ್ರದರ್ಶಿಸಲು ಪ್ರತಿಭಾ ಕಾರಂಜಿ ಉತ್ತಮ ವೇದಿಕೆಯಾಗಿದೆ. ಮಕ್ಕಳು ಯಾವುದೇ ಅಂಜಿಕೆ ಅಥವಾ ಹಿಂಜರಿಕೆಯಿಲ್ಲದೆ ತಮ್ಮಲ್ಲಿರುವ ಪ್ರತಿಭೆಯನ್ನು ಪ್ರದರ್ಶಿಸಬೇಕು,’’ಎಂದು ಹೇಳಿದರು.

ಎಸ್ ಡಿಎಂಸಿ ಅಧ್ಯಕ್ಷ ಜುನೈದ್ ಸಿ.ಎ.ಮಾತನಾಡಿ,‘‘ಕಲೆ ದೇವರು ನೀಡಿದ ವರದಾನ. ಅದನ್ನು ಸಮರ್ಪಕವಾಗಿ ಬಳಸಿಕೊಂಡು ನಿರಂತರ ಅಭ್ಯಾಸ ಮಾಡಿದರೆ ಜೀವನದಲ್ಲಿಉನ್ನತ ಸಾಧನೆ ಮಾಡಲು ಸಾಧ್ಯ,’’ಎಂದರು.

ತಾಲೂಕಿನ ಐದು ಕ್ಲಸ್ಟರ್ ಗಳ 14 ಶಾಲೆಗಳ ವಿದ್ಯಾರ್ಥಿಗಳು ಛದ್ಮವೇಷ, ನೃತ್ಯ, ಭಾಷಣ, ಮಣ್ಣಿನ ಆಕೃತಿ ಸೇರಿದಂತೆ ವಿವಿಧ ಸ್ಪರ್ಧೆಗಳಲ್ಲಿಉತ್ಸಾಹದಿಂದ ಪಾಲ್ಗೊಂಡು ತಮ್ಮ ಪ್ರತಿಭೆ ಪ್ರದರ್ಶಿಸಿದರು.

ಎಸ್ ಡಿಎಂಸಿ ಉಪಾಧ್ಯಕ್ಷೆ ನಾಗವೇಣಿ, ಬಿಆರ್ ಪಿ ವಾಮನ, ಸಿಅರ್ ಪಿ ವಾಸುವರ್ಮಾ, ಹಳೇ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ರಾಮಕೃಷ್ಣ, ಶಿಕ್ಷಕರಾದ ಶಕೀಲಾ ಭಾನು, ಶಾಹಿದಾ, ಗಂಗಾಮಣಿ, ರೋಜಿ, ಮಹೇಶ್ , ನಿಂಗರಾಜ್ , ವೆಂಕಟೇಶ್ , ದಾಕ್ಷಾಯಿಣಿ, ವಿನಿತಾ, ಸಂತೋ… ಲೋಬೊ, ಮಂಜುಳಾ, ರೇಖಾ, ಪೂರ್ಣಿಮಾ, ಅತಿಥಿ ಶಿಕ್ಷಕರಾದ ನಸಿಯತ್ , ದಕ್ಷ, ಸಂತೋಷ್ ಮತ್ತಿತರರು ಹಾಜರಿದ್ದರು.

ಫೋಟೋ: 12 ಜಿ.ಕೆ.ಎಲ್ 01: ಪೊನ್ನಂಪೇಟೆ ಕರ್ನಾಟಕ ಪಬ್ಲಿಕ್ ಸ್ಕೂಲ್ ನಲ್ಲಿನಡೆದ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಾರ ್ಯಕ್ರಮವನ್ನು ಗಣ್ಯರು ಉದ್ಘಾಟಿಸಿದರು.