ಹಿರಿಯೂರಲ್ಲಿ21ಕ್ಕೆ ಸಿಎಂ ನೇತೃತ್ವದಲ್ಲಿಸಭೆ

Contributed by: ahobalapathy.narayanappa@timesofindia.com|Vijaya Karnataka•
citizen service movement meeting led by cm on 21st in hiriur
ಹಿರಿಯೂರಲ್ಲಿ21ಕ್ಕೆ ಸಿಎಂ ನೇತೃತ್ವದಲ್ಲಿಸಭೆ

ವಿಕ ಸುದ್ದಿಲೋಕ ಚಿತ್ರದುರ್ಗ
ಹಿರಿಯೂರಿನಲ್ಲಿನ.21ರಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ನೇತೃತ್ವದಲ್ಲಿಪ್ರಜಾಸೇವಾ ಆಂದೋಲನ ಸಭೆ ಜರುಗಲಿದೆ. ಇದಕ್ಕೂ ಮುನ್ನವೇ ಅರ್ಜಿ ನಮೂನೆಗಳನ್ನು ಸಾರ್ವಜನಿಕರಿಗೆ ವ್ಯವಸ್ಥಿತವಾಗಿ ಹಂಚಿಕೆ ಮಾಡಿ, ಸ್ವೀಕೃತವಾಗುವ ಅರ್ಜಿಗಳ ವಿಲೇವಾರಿ ಪ್ರಯತ್ನಿಸುವಂತೆ ಜಿಲ್ಲಾಉಸ್ತುವಾರಿ ಸಚಿವ ಟಿ.ರಘುಮೂರ್ತಿ ಸೂಚಿಸಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿಸೋಮವಾರ ಜಿಲ್ಲಾಮಟ್ಟದ ನಾನಾ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಮಾತನಾಡಿದರು.

ಹಿರಿಯೂರು ತಾಲೂಕಿನ ಎಲ್ಲಗ್ರಾಮಗಳಲ್ಲಿಪ್ರಜಾಸೇವಾ ಆಂದೋಲನ ಹಮ್ಮಿಕೊಂಡಿರುವ ಕುರಿತು, ಡಂಗೂರ ಸಾರುವ ಮೂಲಕ ಜನರಿಗೆ ಪ್ರಚುರ ಪಡಿಸಬೇಕು. ಈ ಹಿಂದೆ ಹಿರಿಯೂರಿನಲ್ಲಿಸೆ.5ರಂದು ಪ್ರಜಾಸೇವಾ ಆಂದೋಲನೆ ಚಾಲನೆ ನೀಡುವುದರೊಂದಿಗೆ, ಸಾರ್ವಜನಿಕರಿಂದ ಅರ್ಜಿ ಸ್ವೀಕರಿಸಲಾಗಿತ್ತು. ಹೀಗೆ ಸ್ವೀಕೃತವಾಗಿದ್ದ ಅರ್ಜಿಗಳ ಪೈಕಿ ಎಷ್ಟು ಅರ್ಜಿಗಳನ್ನು ವಿಲೇವಾರಿ ಮಾಡಲಾಗಿದೆ. ಯಾವ ಅರ್ಜಿಗಳ ವಿಲೇವಾರಿ ತಡವಾಗಿದೆ. ಅದಕ್ಕೆ ಕಾರಣವೇನು ಎಂಬುದನ್ನು ಪಟ್ಟಿ ಮಾಡಿ ಮಾಹಿತಿ ಒದಗಿಸಬೇಕು ಎಂದರು.

ಈಗಾಗಲೇ ಪ್ರಜಾಸೇವಾ ಆಂದೋಲನ ಸೇರಿದಂತೆ, ಐಪಿಜಿಆರ್ ಎಸ್ ಪೋರ್ಟ್ ಲ್ ನಲ್ಲಿಸ್ವೀಕೃತವಾಗಿರುವ ಅರ್ಜಿಗಳಲ್ಲಿತಾಲೂಕು ಹಾಗೂ ಜಿಲ್ಲಾಮಟ್ಟದ ಅಧಿಕಾರಿಗಳ ಹಂತದಲ್ಲೇ ಪರಿಹಾರ ಒದಗಬಹುದಾದರೆ, ಕೂಡಲೇ ಅಧಿಕಾರಿಗಳು ಸ್ಪಂದಿಸಿ ಜನರ ಕೆಲಸ ಮಾಡಿಕೊಡಬೇಕು ಎಂದು ಸೂಚಿಸಿದರು.

ಮುಖ್ಯಮಂತ್ರಿಗಳ ನೇತೃತ್ವದಲ್ಲಿಜರುಗುವ ಪ್ರಜಾಸೇವಾ ಆಂದೋಲನದ ಹಿನ್ನಲೆಯಲ್ಲಿಹಿರಿಯೂರು ತಾಲೂಕಿನ ಎಲ್ಲಗ್ರಾಮ ಹಾಗೂ ನಗರ ಪ್ರದೇಶದಲ್ಲಿಮನೆ ಮನೆಗಳಿಗೆ ಭೇಟಿ ನೀಡಿ, ಅರ್ಜಿಗಳನ್ನು ವಿತರಿಸಿ, ಮರಳಿ ಅರ್ಜಿಗಳನ್ನು ಸ್ವೀಕರಿಸುವ ಕೆಲಸವಾಗಬೇಕು ಎಂದರು.

ವೇದಿಕೆ ಕಾರ್ಯಕ್ರಮದ ಸ್ಥಳದಲ್ಲಿಸಾರ್ವಜನಿಕರಿಗೆ ನೆರಳು ಹಾಗೂ ಸೂಕ್ತ ಆಸನದ ವ್ಯವಸ್ಥೆ ಕಲ್ಪಿಸಬೇಕು. ಸ್ಥಳದಲ್ಲಿಇಲಾಖೆವಾರು ಕೌಂಟರ್ ತೆರೆಯಬೇಕು. ಬರಗಾಲದ ಹಿನ್ನಲೆಯಲ್ಲಿಸಾಕಷ್ಟು ಜನರು ಕುಡಿಯುವ ನೀರಿನ ಸಮಸ್ಯೆ ಹೊತ್ತು ಬರುತ್ತಾರೆ. ಇದರೊಂದಿಗೆ ಕಂದಾಯ ಇಲಾಖೆಗೆ ಸಂಬಂಧಿಸಿದ ಅರ್ಜಿಗಳು ಸಲ್ಲಿಕೆಯಾಗುತ್ತವೆ. ಅಧಿಕಾರಿಗಳು ಇದಕ್ಕೆ ಸಿದ್ದರಿದ್ದು, ತಕ್ಷಣವೇ ಪರಿಹಾರ ನೀಡಬೇಕು ಎಂದು ಸಚಿವರು ಸೂಚಿಸಿದರು.

ಸಭೆಯಲ್ಲಿಜಿಲ್ಲಾಧಿಕಾರಿ ಎಸ್ .ರಮ್ಯಾ, ಜಿ.ಪಂ.ಸಿಇಒ ಡಾ.ಆಕಾಶ್ , ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಉಪ ವಿಭಾಗಾಧಿಕಾರಿ ಡಾ.ಕೆ.ಜೆ.ಕಾಂತರಾಜ್ , ಜಿಪಂ ಉಪಕಾರ್ಯದರ್ಶಿ ಬಾಬು, ಸಿಪಿಒ ಗಾಯತ್ರಿ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಮಲ್ಲಿಕಾರ್ಜುನ್ , ಹಿರಿಯೂರು ತಹಸೀಲ್ದಾರ್ ಸೇರಿದಂತೆ, ಹಿರಿಯ ಅಧಿಕಾರಿಗಳು ಇದ್ದರು.

**

16ಸಿಟಿಡಿ40

ಚಿತ್ರದುರ್ಗ ನಗರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿಸೋಮವಾರ ಜಿಲ್ಲಾಮಟ್ಟದ ನಾನಾ ಇಲಾಖೆ ಅಧಿಕಾರಿಗಳೊಂದಿಗೆ ಜಿಲ್ಲಾಉಸ್ತುವಾರಿ ಸಚಿವ ಟಿ.ರಘುಮೂರ್ತಿ ಸಭೆ ನಡೆಸಿದರು.