ಜಲಸಂರಕ್ಷಣೆಗೆ ಧರ್ಮಸ್ಥಳ ಯೋಜನೆ ಕೊಡುಗೆ ಅಪಾರ

Contributed by: parashuramjuly22@gmail.com|Vijaya Karnataka•
dharmasthala project successful for water conservation in benakanahalli
- ಮಾಜಿ ಸಚಿವೆ ಲಕ್ಷ್ಮೇ ಹೆಬ್ಬಾಳಕರ್ ಶ್ಲಾಘನೆಧಿ

- ಬೆನಕನಹಳ್ಳಿಯಲ್ಲಿಪುನಶ್ಚೇತನಗೊಂಡ ಕೆರೆ ಲೋಕಾರ್ಪಣೆ
ವಿಕ ಸುದ್ದಿಲೋಕ ಬೆಳಗಾವಿ

ಗ್ರಾಮೀಣ ಪ್ರದೇಶಗಳಲ್ಲಿಜಲಸಂರಕ್ಷಣೆ ಹಾಗೂ ಅಂತರ್ಜಲ ಮಟ್ಟ ಹೆಚ್ಚಿಸುವ ನಿಟ್ಟಿನಲ್ಲಿಕೆರೆಗಳ ಪುನಶ್ಚೇತನ ಅತ್ಯಂತ ಮಹತ್ವದ ಕಾರ್ಯವಾಗಿದ್ದು, ಇದರಿಂದ ರೈತರು ಹಾಗೂ ಗ್ರಾಮಸ್ಥರಿಗೆ ದೀರ್ಘಕಾಲಿಕ ಪ್ರಯೋಜನ ದೊರೆಯಲಿದೆ ಎಂದು ಮಾಜಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

ಗ್ರಾಮೀಣ ಕ್ಷೇತ್ರದ ಬೆನಕನಹಳ್ಳಿ ಯಲ್ಲಿಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ವ್ , ಬೆನಕನಹಳ್ಳಿ ಪಟ್ಟಣ ಪಂಚಾಯಿತಿ, ಗ್ರಾಮದ ಪಂಚ ಕಮಿಟಿ ಹಾಗೂ ಕೆರೆ ಅಭಿವೃದ್ಧಿ ಸಮಿತಿಯ ಸಹಯೋಗದಲ್ಲಿಸೋಮವಾರ ಆಯೋಜಿಸಲಾಗಿದ್ದ ನಮ್ಮೂರು ನಮ್ಮ ಕೆರೆ ಕಾರ್ಯಕ್ರಮದಡಿ ಪುನಶ್ಚೇತನಗೊಳಿಸಲಾದ 988ನೇ ಕೆರೆಯ ಬಾಗಿನ ಅರ್ಪಣೆ, ಕೆರೆ ಹಸ್ತಾಂತರ ಕಾರ್ಯಕ್ರಮದ ಉದ್ಘಾಟನೆ ಹಾಗೂ ನಾಮಫಲಕ ಅನಾವರಣಗೊಳಿಸಿ ಅವರು ಮಾತನಾಡಿದರು.

ಗ್ರಾಮೀಣ ಕ್ಷೇತ್ರದಲ್ಲಿಅಂತರ್ಜಲ ಮಟ್ಟ ಹೆಚ್ಚಿಸುವ ಉದ್ದೇಶದಿಂದ 12 ಕೋಟಿ ರೂ. ವೆಚ್ಚದಲ್ಲಿ40ಕ್ಕೂ ಹೆಚ್ಚು ಕೆರೆಗಳಿಗೆ ನೀರು ತುಂಬಿಸುವ ಯೋಜನೆ ಜಾರಿಗೊಳಿಸಲಾಗಿದೆ. ಈ ಯೋಜನೆಯಿಂದ ಈ ಭಾಗದ ಕೆರೆಗಳಲ್ಲಿನೀರಿನ ಸಂಗ್ರಹ ಹೆಚ್ಚಿಸುವುದರ ಜತೆಗೆ ರೈತರಿಗೆ ಅನುಕೂಲ ಕಲ್ಪಿಸುವ ಪ್ರಯತ್ನ ಮಾಡಲಾಗಿದೆ. ಗ್ರಾಮೀಣ ಭಾಗದ ಕೃಷಿ ಚಟುವಟಿಕೆಗಳಿಗೆ ನೀರಿನ ಭದ್ರತೆ ಒದಗಿಸುವುದು ನಮ್ಮ ಆದ್ಯತೆಯಾಗಿದೆ,’’ ಎಂದು ತಿಳಿಸಿದರು.

ದಿವ್ಯ ಸಾನ್ನಿಧ್ಯ ವಹಿಸಿದ್ದ ಶ್ರೀ ಹರಿ ಗುರೂಜಿ ಮಹಾರಾಜರು ಆಶೀರ್ವಚನ ನೀಡಿದರು. ಗ್ರಾಮದ ಪಂಚ ಕಮಿಟಿ ಅಧ್ಯಕ್ಷ ಪ್ರಭಾಕರ ದೇಸೂರಕರ, ಯುವರಾಜ ಕದಂ, ಬಾಳು ದೇಸೂರಕರ, ಮನೋಹರ್ ಬೆಳಗಾಂವಕರ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪ್ರಾದೇಶಿಕ ನಿರ್ದೇಶಕ ದಯಾಶೀಲ, ಡಾ. ಜಿ. ಆರ್ . ಸೋನೇರ, ಸತೀಶ ನಾಯ್ಕ ಸೇರಿದಂತೆ ಇತರರು ಉಪಸ್ಥಿತರಿದ್ದರು.

--------

ಕ್ವೋಟ್ಸ್ ...

ಬೆನಕನಹಳ್ಳಿ ಗ್ರಾಪಂ ಅನ್ನು ಪಟ್ಟಣ ಪಂಚಾಯಿತಿಯಾಗಿ ಮೇಲ್ದರ್ಜೆಗೇರಿಸಿರುವುದರಿಂದ ಈ ಭಾಗದ ಅಭಿವೃದ್ಧಿಗೆ ಹೊಸ ವೇಗ ದೊರೆತಿದೆ. ಪಟ್ಟಣ ಪಂಚಾಯಿತಿಗೆ ಸುಮಾರು 20 ಕೋಟಿ ರೂ. ಅನುದಾನ ಒದಗಿಸಲಾಗಿದೆ.

- ಲಕ್ಷ್ಮೀ ಹೆಬ್ಬಾಳಕರ್ , ಮಾಜಿ ಸಚಿವೆ

--------

-16ಪರಶು4

ಬೆಳಗಾವಿ ತಾಲೂಕು ಬೆನಕನಹಳ್ಳಿಯಲ್ಲಿನಮ್ಮೂರು ನಮ್ಮ ಕೆರೆ ಕಾರ್ಯಕ್ರಮದಡಿ ಪುನಶ್ಚೇತನಗೊಳಿಸಲಾದ 988ನೇ ಕೆರೆಯ ಬಾಗಿನ ಅರ್ಪಣೆ, ಕೆರೆ ಹಸ್ತಾಂತರ ಹಾಗೂ ನಾಮಫಲಕ ಅನಾವರಣ ಕಾರ್ಯಕ್ರಮವನ್ನು ಮಾಜಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ನೆರವೇರಿಸಿದರು. ಸ್ವಾಮೀಜಿಗಳು ಹಾಗೂ ಗಣ್ಯರು ಉಪಸ್ಥಿತರಿದ್ದರು.