ತಾಲೂಕಿನ ತುರಕನದೋಣ ಗ್ರಾಮದಲ್ಲಿಈದ್ಯಮ್ಮ ದೇವಿಯ ನೂತನ ವಿಗ್ರಹ ಪ್ರತಿಷ್ಠಾಪನೆ ಹಾಗೂ ದೇವಸ್ಥಾನದ ಉದ್ಘಾಟನಾ ಸಮಾರಂಭ ಸೋಮವಾರ ನಡೆಯಿತು.
ಶಾಸಕ ದದ್ದಲ್ ಬಸನಗೌಡ ಅವರು ದೇವಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ ಬಳಿಕ, ಸಿಎಂಐಡಿಪಿ ಯೋಜನೆಯಡಿ ಅಂದಾಜು 60 ಲಕ್ಷ ರೂ. ವೆಚ್ಚದಲ್ಲಿಕೈಗೆತ್ತಿಕೊಳ್ಳಲಾಗುತ್ತಿರುವ ವಿವಿಧ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಿದರು. ದುಗನೂರು, ಗಿಲ್ಲೇಸುಗೂರು ಹಾಗೂ ತುಂಗಭದ್ರಾ ಗ್ರಾಮಗಳಿಂದ ಮುಖ್ಯರಸ್ತೆಗೆ ಸಂಪರ್ಕ ಕಲ್ಪಿಸುವ ರಸ್ತೆಗಳನ್ನು ಅಭಿವೃದ್ಧಿಪಡಿಸುವ ಕಾಮಗಾರಿಗಳಿಗೆ ಇದೇ ವೇಳೆ ಚಾಲನೆ ನೀಡಲಾಯಿತು.
ಕೆಕೆಆರ್ ಡಿಬಿ ಯೋಜನೆಯಡಿ ಗಿಲ್ಲೇಸುಗೂರು ಗ್ರಾಮದಲ್ಲಿ25 ಲಕ್ಷ ರೂ. ವೆಚ್ಚದಲ್ಲಿನಿರ್ಮಿಸಿರುವ ನೂತನ ಸಮುದಾಯ ಭವನವನ್ನು ಶಾಸಕ ದದ್ದಲ್ ಬಸನಗೌಡ ಉದ್ಘಾಟಿಸಿದರು. ಗ್ರಾಮೀಣ ಪ್ರದೇಶಗಳ ಸಮಗ್ರ ಅಭಿವೃದ್ಧಿ, ಮೂಲಸೌಕರ್ಯ ಬಲವರ್ಧನೆ ಹಾಗೂ ಜನರ ಅಗತ್ಯಗಳಿಗೆ ಸ್ಪಂದಿಸುವ ಉದ್ದೇಶದಿಂದ ರಸ್ತೆ ಸಂಪರ್ಕ ಮತ್ತು ಸಮುದಾಯ ಸೌಲಭ್ಯಗಳ ಅಭಿವೃದ್ಧಿಗೆ ಆದ್ಯತೆ ನೀಡಲಾಗುತ್ತಿದೆ ಎಂದು ಶಾಸಕ ದದ್ದಲ್ ಬಸನಗೌಡ ಹೇಳಿದರು.
ಕಾರ್ಯಕ್ರಮದಲ್ಲಿಸ್ಥಳೀಯ ಜನಪ್ರತಿನಿಧಿಗಳು, ಮುಖಂಡರು, ಪಕ್ಷದ ಕಾರ್ಯಕರ್ತರು ಹಾಗೂ ಗ್ರಾಮದ ಹಿರಿಯರು ಉಪಸ್ಥಿತರಿದ್ದರು.
...............
ಆರ್ ಸಿಎಚ್ 16ಎಂಎಸ್ 05
ತುರಕನದೋಣಿಯಲ್ಲಿರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಿದ ಶಾಸಕ ದದ್ದಲ್ ಬಸನಗೌಡ.