1,300ಕ್ಕೂ ಹೆಚ್ಚು ಅನಾಥ ಶವಗಳ ಅಂತ್ಯಸಂಸ್ಕಾರ ನೆರವೇರಿಸಿದ ಡಾ.ಎಂ. ಮಾದೇಶ್ ಗೆ ಸನ್ಮಾನತಿ.ನರಸೀಪುರ: ಕನ್ನಡ ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿಯ ಉಳಿವು ಹಾಗೂ ಬೆಳವಣಿಗೆಯಲ್ಲಿವಿದ್ಯಾರ್ಥಿಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ವಿದ್ಯಾರ್ಥಿಗಳು ಶೈಕ್ಷಣಿಕ ಸಾಧನೆಯ ಜತೆಗೆ ಕನ್ನಡ ಭಾಷೆಯ ಮೇಲಿನ ಅಭಿಮಾನವನ್ನೂ ಬೆಳೆಸಿಕೊಳ್ಳಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಸ್ .ಸಿ. ಶಿವಮೂರ್ತಿ ತಿಳಿಸಿದರು.
ಪಟ್ಟಣದ ಗುರುಭವನದಲ್ಲಿಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ ಹಾಗೂ ಕನ್ನಡ ಶಿಕ್ಷಕರ ಬಳಗದ ವತಿಯಿಂದ ಆಯೋಜಿಸಿದ್ದ ಕನ್ನಡ ರತ್ನ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿಮಾತನಾಡಿದರು.
‘‘ಕನ್ನಡ ವಿಷಯದಲ್ಲಿಅತ್ಯುತ್ತಮ ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಗುರುತಿಸಿ ಗೌರವಿಸುವುದು ಅವರ ಮುಂದಿನ ಶೈಕ್ಷಣಿಕ ಸಾಧನೆಗೆ ಪ್ರೇರಣೆಯಾಗಲಿದೆ. ವಿದ್ಯಾರ್ಥಿಗಳು ಭವಿಷ್ಯದಲ್ಲಿವಿಜ್ಞಾನಿಗಳು, ಎಂಜಿನಿಯರ್ ಗಳು, ವೈದ್ಯರು ಹಾಗೂ ಪೈಲಟ್ ಗಳಂತಹ ಉನ್ನತ ಸ್ಥಾನಗಳನ್ನು ಅಲಂಕರಿಸುವ ಗುರಿ ಹೊಂದಬೇಕು. ಮಕ್ಕಳ ಸಾಧನೆಯ ಹಿಂದೆ ಕನ್ನಡ ಶಿಕ್ಷಕರ ನಿರಂತರ ಪರಿಶ್ರಮ, ಬದ್ಧತೆ ಮತ್ತು ಮಾರ್ಗದರ್ಶನವಿದೆ. ಇಂತಹ ಪ್ರತಿಭಾ ಪುರಸ್ಕಾರಗಳು ವಿದ್ಯಾರ್ಥಿಗಳಲ್ಲಿಆತ್ಮವಿಶ್ವಾಸ ಹೆಚ್ಚಿಸುವ ಜತೆಗೆ ಇನ್ನಷ್ಟು ಸಾಧನೆ ಮಾಡಲು ಪ್ರೋತ್ಸಾಹ ನೀಡುತ್ತವೆ,’’ ಎಂದರು.
ಕ್ಷೇತ್ರ ಸಂಪನ್ಮೂಲ ಸಮನ್ವಯಾಧಿಕಾರಿ ನಾಗೇಶ್ ಮಾತನಾಡಿ, ‘‘ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿಕನ್ನಡ ವಿಷಯದಲ್ಲಿಪೂರ್ಣಾಂಕ ಗಳಿಸಿದ ಹಾಗೂ ಕನ್ನಡ ಮಾಧ್ಯಮದಲ್ಲಿವ್ಯಾಸಂಗ ಮಾಡಿ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಗುರುತಿಸಿ ಸನ್ಮಾನಿಸುವುದು ಅತ್ಯಂತ ಸಾರ್ಥಕ ಕಾರ್ಯ. ಭಾಷೆ ಮನುಷ್ಯನ ಸಂಸ್ಕೃತಿ, ಸಂಸ್ಕಾರ ಮತ್ತು ಪ್ರಗತಿಯ ಸಂಕೇತವಾಗಿದೆ. ಕನ್ನಡ ಭಾಷೆಗೆ ಸಾವಿರಾರು ವರ್ಷಗಳ ಇತಿಹಾಸ ಹಾಗೂ ಶ್ರೀಮಂತ ಪರಂಪರೆಯಿದೆ. ಕನ್ನಡ ಸಾಹಿತ್ಯ, ಸಂಸ್ಕೃತಿ ಮತ್ತು ಭಾಷೆಯನ್ನು ಉಳಿಸಿ ಬೆಳೆಸುವುದು ಪ್ರತಿಯೊಬ್ಬ ಕನ್ನಡಿಗನ ಕರ್ತವ್ಯವಾಗಿದೆ. ಕನ್ನಡಿಗರಲ್ಲಿಭಾಷಾಭಿಮಾನ ಹಾಗೂ ಒಗ್ಗಟ್ಟಿನ ಮನೋಭಾವವನ್ನು ಜಾಗೃತಗೊಳಿಸಬೇಕು,’’ ಎಂದು ಹೇಳಿದರು.
ತಾಲೂಕು ಸರಕಾರಿ ನೌಕರರ ಸಂಘದ ಅಧ್ಯಕ್ಷ ಶಿವಶಂಕರಮೂರ್ತಿ ಮಾತನಾಡಿ, ‘‘ಕನ್ನಡ ಭಾಷೆ ಮತ್ತು ಶಿಕ್ಷಣ ಕ್ಷೇತ್ರದ ಸಾಧಕರನ್ನು ಗುರುತಿಸಿ ಗೌರವಿಸುವುದು ಉತ್ತಮ ಬೆಳವಣಿಗೆಯಾಗಿದೆ. ವಿದ್ಯಾರ್ಥಿಗಳ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸುವ ಇಂತಹ ಕಾರ್ಯಕ್ರಮಗಳು ನಿರಂತರವಾಗಿ ನಡೆಯಬೇಕು,’’ ಎಂದರು.
ಪ್ರೌಢಶಾಲಾ ಸಂಘದ ಸದಸ್ಯ ಪುಟ್ಟರಾಜು ಹಾಗೂ ಬಿಸಿಯೂಟ ಸಹಾಯಕ ನಿರ್ದೇಶಕ ಪುಟ್ಟಸ್ವಾಮಿ ಮಾತನಾಡಿದರು.
ಕಾರ್ಯಕ್ರಮದಲ್ಲಿಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿಕನ್ನಡ ವಿಷಯದಲ್ಲಿಪೂರ್ಣಾಂಕ ಗಳಿಸಿದ ಸರಕಾರಿ ಹಾಗೂ ಅನುದಾನಿತ ಶಾಲೆಗಳ ವಿದ್ಯಾರ್ಥಿಗಳಿಗೆ ಕನ್ನಡ ರತ್ನ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು.
ಇದೇ ಸಂದರ್ಭದಲ್ಲಿಇದುವರೆಗೆ 1,300ಕ್ಕೂ ಹೆಚ್ಚು ಅನಾಥ ಶವಗಳನ್ನು ಗುರುತಿಸಿ ಅಂತ್ಯಸಂಸ್ಕಾರ ನೆರವೇರಿಸುವ ಮೂಲಕ ವಿಶಿಷ್ಟ ಮಾನವೀಯ ಸೇವೆ ಸಲ್ಲಿಸಿರುವ ಸಮಾಜ ಸೇವಕ ಡಾ. ಎಂ. ಮಾದೇಶ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.
ಪ್ರೌಢಶಾಲಾ ಸಂಘದ ಅಧ್ಯಕ್ಷ ಪ್ರಸಾದ್ , ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷ ಪುಟ್ಟಸ್ವಾಮಿ, ಕನ್ನಡ ಶಿಕ್ಷಕರ ಬಳಗದ ಅಧ್ಯಕ್ಷ ರಂಗಸ್ವಾಮಿ, ಖಜಾಂಚಿ ಉಮೇಶ್ , ರಮೇಶ್ , ಶಿವಮಲ್ಲಪ್ಪ, ಶಿವಾನಂಜ, ಕೆ.ಪಿ. ಮಹದೇವಸ್ವಾಮಿ, ಭಾಗ್ಯಮ್ಮ, ಡಾ. ಸೋಮಣ್ಣ, ಇಸಿಒ ರಮೇಶ್ , ಕುಪ್ಯಾ ಶಾಲೆಯ ಮುಖ್ಯ ಶಿಕ್ಷಕಿ ಶಶಿಕಲಾ, ಉಮೇಶ್ , ಕನ್ನಡ ಬಳಗದ ಸದಸ್ಯರಾದ ಸುರೇಶ್ , ಮಹೇಂದ್ರಕುಮಾರ್ , ಮಹದೇವ, ಶಂಕರ್ , ಧ್ರುವಜ್ಯೋತಿ, ಅನುಪಮಾ, ಶಾಂತಲಾ, ರಾಘವೇಂದ್ರ ಸೇರಿದಂತೆ ಶಿಕ್ಷಕರು, ಪದಾಧಿ ಕಾರಿಗಳು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.