ಕರ್ನಾಟಕ ಏಕೀಕರಣ ಚಳವಳಿ ಒಗ್ಗಟ್ಟಿನ ಸಂಕೇತ

Contributed by: adarshkodi15@gmail.com|Vijaya Karnataka•
karnataka unification a defining movement of kannada pride and unity
ಕರ್ನಾಟಕ ಏಕೀಕರಣ ಚಳವಳಿ ಒಗ್ಗಟ್ಟಿನ ಸಂಕೇತ

ವಿಕ ಸುದ್ದಿಲೋಕ ದೊಡ್ಡಬಳ್ಳಾಪುರ
ಕರ್ನಾಟಕ ಏಕೀಕರಣ ಚಳವಳಿ ಕನ್ನಡಿಗರ ಭಾಷಾಭಿಮಾನ, ಸಾಂಸ್ಕೃತಿಕ ಅಸ್ಮಿತೆ, ಸ್ವಾಭಿಮಾನ ಮತ್ತು ಒಗ್ಗಟ್ಟಿನ ಸಂಕೇತವಾಗಿತ್ತು ಎಂದು ಕನ್ನಡಪರ ಹಿರಿಯ ಹೋರಾಟಗಾರ ತ.ನ.ಪ್ರಭುದೇವ್ ತಿಳಿಸಿದರು.

ನಗರದ ಎಂಎಬಿಎಲ್ ಪ್ರೌಢಶಾಲೆಯಲ್ಲಿನಡೆದ ಸಾಹಿತ್ಯ ವಿಜ್ಞಾನ ಸಂಸ್ಕೃತಿ ಸಮಾಗಮ ಕಾರ್ಯಕ್ರಮದಲ್ಲಿಮಾತನಾಡಿದ ಅವರು, ಕರ್ನಾಟಕದ ಏಕೀಕರಣ ಚಳವಳಿಯು ಭಾರತದ ಸ್ವಾತಂತ್ರ್ಯಾನಂತರ ಕನ್ನಡ ಭಾಷೆ ಮಾತನಾಡುವ ಎಲ್ಲಾಪ್ರದೇಶಗಳನ್ನು ಒಂದುಗೂಡಿಸಿ, ಪ್ರತ್ಯೇಕ ರಾಜ್ಯವನ್ನಾಗಿ ರಚಿಸುವ ಐತಿಹಾಸಿಕ ಹೋರಾಟವಾಗಿದೆ ಎಂದರು.

ಕರ್ನಾಟಕ ಏಕೀಕರಣಕ್ಕಾಗಿ ಹೋರಾಟ ಮಾಡಿದ ಮಹನೀಯರ ತ್ಯಾಗ, ಹೋರಾಟ, ಪರಿಶ್ರಮ ಮತ್ತು ದೂರದೃಷ್ಟಿಯ ಫಲವಾಗಿ ಇಂದು ನಾವು ಏಕೀಕೃತ ಕರ್ನಾಟಕದಲ್ಲಿಬದುಕುತ್ತಿದ್ದೇವೆ.ಕರ್ನಾಟಕ ಏಕೀಕರಣವು ಕನ್ನಡಿಗರ ಬಹುದಿನಗಳ ಕನಸಾಗಿತ್ತು. ನಾನಾ ಆಡಳಿತ ಪ್ರದೇಶಗಳಲ್ಲಿಹರಿದು ಹಂಚಿಹೋಗಿದ್ದ ಕನ್ನಡ ಭಾಷಿಕ ಪ್ರದೇಶಗಳನ್ನು ಒಂದೇ ಆಡಳಿತದಡಿ ತರುವ ಉದ್ದೇಶದಿಂದ ಏಕೀಕರಣ ಚಳವಳಿ ನಡೆಯಿತು. ಇದರ ಫಲವಾಗಿ 1956ರ ನವೆಂಬರ್ 1ರಂದು ವಿಶಾಲ ಮೈಸೂರು ರಾಜ್ಯ ಅಸ್ತಿತ್ವಕ್ಕೆ ಬಂದಿತು. 1973ರ ನವೆಂಬರ್ 1ರಂದು ಮೈಸೂರು ರಾಜ್ಯಕ್ಕೆ ಕರ್ನಾಟಕ ಎಂದು ಮರುನಾಮಕರಣ ಮಾಡಲಾಯಿತು ಎಂದರು.

ಅರಿವಿರಲಿ:

ವೈದ್ಯರಾದ ಡಾ.ಇಂದಿರಾ ಮಾತನಾಡಿ, ವಿದ್ಯಾರ್ಥಿಗಳು ನಿದ್ರೆ, ಆಹಾರ, ವ್ಯಾಯಾಮ ಮತ್ತು ವಿಶ್ರಾಂತಿ ಬಗ್ಗೆ ಅತಿಯಾದ ತಿಳಿವಳಿಕೆ ಹೊಂದಬೇಕಾಗಿದೆ. ವಿದ್ಯಾರ್ಥಿಗಳು ಮೊಬೈಲ್ ಮತ್ತು ಸಾಮಾಜಿಕ ಜಾಲತಾಣಗಳಿಂದ ದೂರವಿರಬೇಕು. ಸಮತೋಲನ ಪೌಷ್ಟಿಕ ಆಹಾರ ಬಳಸಬೇಕು ಎಂದು ಸಲಹೆ ನೀಡಿದರು.

ಕಾರ್ಯಕ್ರಮದಲ್ಲಿಎಂಎಬಿಎಲ್ ಪ್ರೌಢಶಾಲೆಯ ಸಿಇಒ ಬಿ.ಪಿ.ಪ್ರಿಯಾಂಕ, ಕನ್ನಡ ಜಾಗೃತ ಪರಿಷÜತ್ ಕಾರ್ಯದರ್ಶಿ ಡಿ.ಪಿ.ಆಂಜನೇಯ, ನಿರ್ದೇಶಕರಾದ ಜಿ.ಸಿ.ಶಿವಕುಮಾರ್ , ಸೂರ್ಯನಾರಾಯಣ, ಕನ್ನಡ ಸಾಹಿತ್ಯ ಪರಿಷತ್ ಗೌರವ ಕಾರ್ಯದರ್ಶಿ ಎ.ಜಯರಾಮ್ , ಕೋಶಾಧ್ಯಕ್ಷ ಜಿ.ಸುರೇಶ್ , ಕಲಾವಿದರಾದ ದರ್ಗಾಜೋಗಿಹಳ್ಳಿ ಮಲ್ಲೇಶ್ , ಸಂತೋಷ್ , ಎಂಎಬಿಎಲ್ ಶಾಲೆ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಫೋಟೋ:1611ವಿಕೆ2: ದೊಡ್ಡಬಳ್ಳಾಪುರ ನಗರದ ಎಂಎಬಿಎಲ್ ಪ್ರೌಢಶಾಲೆಯಲ್ಲಿಹಮ್ಮಿಕೊಂಡಿದ್ದ ಸಾಹಿತ್ಯ ವಿಜ್ಞಾನ ಸಂಸ್ಕೃತಿ ಸಮಾಗಮ ಕಾರ್ಯಕ್ರಮಕ್ಕೆ ಕನ್ನಡಪರ ಹಿರಿಯ ಹೋರಾಟಗಾರ ತ.ನ.ಪ್ರಭುದೇವ್ , ಮತ್ತಿತರ ಗಣ್ಯರು ಚಾಲನೆ ನೀಡಿದರು.