ಮದರಸಾದಲ್ಲಿಲೈಗಿಂಕ ದೌರ್ಜನ್ಯ ಆರೋಪ ಆರೋಪಿಗಳ ಬಂಧನಕ್ಕೆ ಮುತಾಲಿಕ್ ಒತ್ತಾಯ

Contributed by: sulibeleprashanth@gmail.com|Vijaya Karnataka•
sexual assault allegations in madrasa mutalik demands arrest
ವಿಕಸುದ್ದಿಲೋಕ ಹೊಸಕೋಟೆ

ತಾಲೂಕಿನ ಅನುಗೊಂಡಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ಮದರಸಾವೊಂದರಲ್ಲಿನಡೆದಿದೆ ಎನ್ನಲಾಗಿರುವ ಲೈಂಗಿಕ ದೌರ್ಜನ್ಯದ ಅರೋಪಿಗಳನ್ನು ಕೂಡಲೇ ಬಂಧಿಸಬೇಕು. ಇದು ಗಂಭೀರ ಪ್ರಕರಣವಾದ ಹಿನ್ನೆಲೆಯಲ್ಲಿರಾಜ್ಯಾದ್ಯಂತ ಮದರಸಾಗಳ ಕಾರ್ಯವೈಖರಿ ಕುರಿತು ಸಮಗ್ರ ತನಿಖೆ ನಡೆಸಬೇಕು ಎಂದು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಆಗ್ರಹಿಸಿದರು.
ಹೊಸಕೋಟೆ ತಹಸೀಲ್ದಾರ್ ಹಾಗೂ ಡಿವೈಎಸ್ಪಿ ಅವರಿಗೆ ಸೊಮವಾರ ಆರೋಪಿಗಳ ಬಂಧನಕ್ಕೆ ಸೂಕ್ತ ಕ್ರಮ ಕೈಗೊಳ್ಳುವಂತೆ ಮನವಿ ಪತ್ರ ಸಲ್ಲಿಸಿ ಮಾತನಾಡಿದ ಅವರು, ಮದರಸಾವೊಂದರಲ್ಲಿಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯವಾಗಿದೆ. ಪ್ರಕರಣ ದಾಖಲಾಗಿ ಸುಮಾರು ಒಂದೂವರೆ ತಿಂಗಳಾದರೂ ಆರೋಪಿಗಳ ಬಂಧನವಾಗಿಲ್ಲ. ಬಂಧಿಸದಿರುವುದಕ್ಕೆ ಪೊಲೀಸ್ ಇಲಾಖೆಯ ಮೇಲೆ ಯಾರ ಒತ್ತಡವಿದೆ ? ಇದರ ಹಿಂದೆ ಹಣದ ವ್ಯವಹಾರ ನಡೆದಿದೆಯೇ? ಎಂಬುದನ್ನು ಬಹಿರಂಗಪಡಿಸಬೇಕು. ಮುಂದಿನ 10 ದಿನಗಳೊಳಗೆ ಪ್ರಕರಣದ ಎಲ್ಲಆರೋಪಿಗಳನ್ನು ಬಂಧಿಸಬೇಕು. ಇಲ್ಲದಿದ್ದರೆ ಹೋರಾಟವನ್ನು ತೀವ್ರಗೊಳಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಪೊಲೀಸ್ ಇಲಾಖೆಯ ಕರ್ತವ್ಯಲೋಪದ ಬಗ್ಗೆ ತನಿಖೆ ನಡೆಸಿ, ನಿರ್ಲಕ್ಷ್ಯ ತೋರಿದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಹಾಗೂ ಸಂಬಂಧಪಟ್ಟ ಪಿಎಸ್ ಐ ಅವರನ್ನು ಅಮಾನತುಗೊಳಿಸಬೇಕು ಎಂದೂ ಸಹ ಒತ್ತಾಯಿಸಿದ ಮುತಾಲಿಕ್ , ಮದರಸಾಗಳಲ್ಲಿಎಷ್ಟು ಮಕ್ಕಳಿದ್ದಾರೆ, ಅವರು ಎಲ್ಲಿಂದ ಬಂದಿದ್ದಾರೆ, ಎಷ್ಟು ಶಿಕ್ಷಕರಿದ್ದಾರೆ, ಮಕ್ಕಳಿಗೆ ಅಗತ್ಯವಾದ ಮೂಲಸೌಕರ್ಯಗಳಿವೆಯೇ, ಸಿಸಿಟಿವಿ ಕ್ಯಾಮೆರಾಗಳ ವ್ಯವಸ್ಥೆ ಇದೆಯೇ? ಎಂಬುದರ ಕುರಿತು ಸಮಗ್ರ ತನಿಖೆ ನಡೆಯಬೇಕು. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ರಾಜ್ಯಾದ್ಯಾಂತ ಪರಿಶೀಲನೆ ನಡೆಸಬೇಕು ಎಂದರು.

ತಹಸೀಲ್ದಾರ್ ಶೀತಲ್ ಟಿ.ಎಸ್ . ಮನವಿ ಪತ್ರ ಸ್ವೀಕರಿಸಿ ಮಾತನಾಡಿ, ಇಂತಹ ಪ್ರಕರಣಗಳನ್ನು ನ್ಯಾಯಾಲಯಗಳೂ ಗಂಭೀರವಾಗಿ ಪರಿಗಣಿಸುತ್ತಿದ್ದು, ಕಾನೂನಿನ ಪ್ರಕಾರ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲಾಗುತ್ತದೆ. ಸದ್ಯ ಪ್ರಕರಣದ ತನಿಖೆ ಮುಂದುವರಿದಿದ್ದು, ತಕ್ಷಣವೇ ಸೂಕ್ತ ಕ್ರಮ ಕೈಗೊಳ್ಳುವಂತೆ ಪೊಲೀಸ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದೇನೆ. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು, ಅಧಿಕಾರಿಗಳ ಮೂಲಕ ಶೀಘ್ರ ಕ್ರಮ ಕೈಗೊಳ್ಳುವಂತೆ ನೋಡಿಕೊಳ್ಳಲಾಗುವುದು ಎಂದು ತಿಳಿಸಿದರು.

ಈ ಸಂದರ್ಭದಲ್ಲಿಡಿವೈಎಸ್ಪಿ ಮಲ್ಲೇಶ್ ಅವರಿಗೂ ಮನವಿ ಪತ್ರ ಸಲ್ಲಿಸಿ ಆರೋಪಿಗಳ ಬಂಧನಕ್ಕೆ ಆಗ್ರಹಿಸಲಾಯಿತು. ಶ್ರೀರಾಮಸೇನೆಯ ಪದಾಧಿಕಾರಿಗಳು ಹಾಜರಿದ್ದರು.

ಚಿತ್ರ-16 ಸೂಲಿಬೆಲೆ 1: ಹೊಸಕೋಟೆ ತಹಸೀಲ್ದಾರ್ ಶೀತಲ್ ಅವರಿಗೆ ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಮನವಿ ಪತ್ರ ಸಲ್ಲಿಸಿ ಆರೋಪಿಗಳ ಬಂಧನಕ್ಕೆ ಒತ್ತಾಯಿಸಿದರು.