ಆಯೋಗಕ್ಕೆ 48 ಪ್ರಶ್ನೆ, ಸುಪ್ರೀಂ ವಿಚಾರಣೆ

Contributed by: anil.kumar2@timesgroup.com|Vijaya Karnataka•
48 questions to the commission supreme court inquiry
ಹೊಸದಿಲ್ಲಿ: ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ ಐಆರ್ ) ಕುರಿತು ಕೇಂದ್ರ ಚುನಾವಣಾ ಆಯೋಗಕ್ಕೆ 48 ಪ್ರಶ್ನೆಗಳನ್ನು ಕೇಳುವ ಕುರಿತು ‘ಐಎನ್ ಡಿಐಎ’ ಒಕ್ಕೂಟ ಸಲ್ಲಿಸಿರುವ ಅರ್ಜಿಯ ವಿಸ್ತೃತ ವಿಚಾರಣೆಗೆ ಸುಪ್ರೀಂ ಕೋರ್ಟ್ ಮಂಗಳವಾರ ಸಮ್ಮತಿಸಿದೆ.

ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಹಾಗೂ ‘ಐಎನ್ ಡಿಐಎ’ ಮೈತ್ರಿಕೂಟದ ನಾಯಕರು ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ , ಚುನಾವಣಾ ಆಯುಕ್ತರಾದ ಸುಖಬೀರ್ ಸಿಂಗ್ ಸಂಧು ಮತ್ತು ವಿವೇಕ್ ಜೋಶಿ ಸೇರಿದಂತೆ ಹಿರಿಯ ಚುನಾವಣಾ ಅಧಿಕಾರಿಗಳಿಗೆ ಈ ಪ್ರಶ್ನೆಗಳನ್ನು ಕೇಳಿದ್ದಾರೆ.
ಎಸ್ ಐಆರ್ ಪ್ರಕ್ರಿಯೆಯಲ್ಲಿಸುಮಾರು 13 ಕೋಟಿ ಮತದಾರರನ್ನು ಮತದಾರರ ಪಟ್ಟಿಯಿಂದ ಹೊರಗಿಡಲಾಗಿದೆ ಎಂದು ಅರ್ಜಿದಾರರು ಆರೋಪಿಸಿದ್ದಾರೆ. ಅಲ್ಲದೆ, ‘ಎಸ್ ಐಆರ್ ’ ನಡೆಸುವ ನಿರ್ಧಾರವನ್ನು ಸರ್ವಾನುಮತದಿಂದ ಕೈಗೊಳ್ಳಲಾಗಿತ್ತು ಎಂದು ಅಕ್ಟೋಬರ್ 26ರಂದು ಚುನಾವಣಾ ಆಯೋಗ ಸಲ್ಲಿಸಿದ ಪ್ರಮಾಣಪತ್ರದಲ್ಲಿನ ನಿಖರತೆಯನ್ನು ಈ ಪ್ರಶ್ನೆಗಳು ಪ್ರಶ್ನಿಸಿವೆ.

ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ನೇತೃತ್ವದ ಪೀಠವು ಪ್ರಕರಣದ ವಿಚಾರಣೆಯನ್ನು ಡಿ.9ಕ್ಕೆ ಮುಂದೂಡಿದೆ.