ಬೆಳಗಾವಿ: ಲಂಚದ ಹಣ ಸ್ವೀಕರಿಸುತ್ತಿದ್ದ ಉಪವಿಭಾಗಾಧಿಕಾರಿ (ಎಸಿ) ಕಚೇರಿ ದ್ವಿತೀಯ ದರ್ಜೆ ಸಹಾಯಕ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಪದ್ಮಾಕರ್ ಪಾಟೀಲ್ ಸಿಕ್ಕಿಬಿದ್ದ ನೌಕರ. ಉಪವಿಭಾಗಾಧಿಕಾರಿ ನ್ಯಾಯಾಲಯಕ್ಕೆ 37 ಪ್ರಕರಣಗಳನ್ನು ವರ್ಗಾವಣೆ ಮಾಡಿಕೊಡಲು 30 ಸಾವಿರ ರೂ.ಲಂಚಕ್ಕೆ ಬೇಡಿಕೆ ಇಟ್ಟಿದ್ದ ಕುರಿತು ಶುಭಂ ಅಪ್ಪಾರಾವ್ ಎಂಬುವವರು ಲೋಕಾಯುಕ್ತರಿಗೆ ದೂರು ನೀಡಿದ್ದರು. ಮಂಗಳವಾರ 30 ಸಾವಿರ ರೂ. ಲಂಚಕ್ಕೆ ಮುಂಗಡವಾಗಿ 2 ಸಾವಿರ ರೂ. ಹಣ ಪಡೆಯುತ್ತಿದ್ದ ಪದ್ಮಾಕರ್ ಪಾಟೀಲ್ ಅವರನ್ನು ಲೋಕಾಯುಕ್ತ ಪೊಲೀಸರು, ಸಾಕ್ಷಿ ಸಮೇತ ಬಂಧಿಸಿದ್ದಾರೆ.